ಕೊಡಗು : (ನ್ಯೂಸ್ ಮಲ್ನಾಡ್ ವರದಿ) ವಿರಾಜಪೇಟೆಯ ಸುಂಕದಮಕ್ಕಿ ಬಳಿ ಅಕ್ರಮವಾಗಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದವರನ್ನು ಪೊಲೀಸರು ಕಾರ್ಯಾಚರಣೆಯ ಮೂಲಕ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ : ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ಎಸಗಿ ವಿದೇಶಕ್ಕೆ ಎಸ್ಕೇಪ್ ಆದ ಯುವಕ
ಕೊಡಗು ಜಿಲ್ಲೆಯ ವಿರಾಜಪೇಟೆ ಸುಂಕದ ಕಟ್ಟೆಬಳಿಯಲ್ಲಿ ಅಕ್ರಮವಾಗಿ ಮಾದಕ ವಸ್ತುಗಳ ಮಾರಾಟಕ್ಕೆಂದು ಯತ್ನಿಸಿದ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಜಬೀವುಲ್ಲಾಖಾನ್, ಫರೀದ್, ಕೆ.ಬೋಪಣ್ಣ, ಕೆ.ವಿ ಸುನೀಲ್, ಎಂ.ಕೆ. ಹೈದರ್ ಆಲಿ ಎಂದು ಗುರುತಿಸಲಾಗಿದೆ.
ಬಂಧಿತ ಆರೋಪಿಗಳಿಂದ 15.5ಗ್ರಾಂ ಎಂ.ಡಿ.ಎಂ.ಎ ಕ್ರಿಸ್ಟಲ್, 760 ಗ್ರಾಂ ಗಾಂಜಾ, 3700 ರೂಪಾಯಿ ನಗದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ ಹೆಚ್ಚಿನ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದು ಸಂಪೂರ್ಣ ತನಿಖೆಯ ನಂತರ ಈ ಕುರಿತಾದ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.
ಈ ಕಾರ್ಯಾಚರಣೆಯು ವಿರಾಜಪೇಟೆ ಠಾಣೆಯ ಪೊಲೀಸರ ನೇತೃತ್ವದಲ್ಲಿ ನಡೆದಿದೆ. ಈ ರೀತಿಯ ಅಕ್ರಮ ಎಸಗುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರೂ ಕೂಡ ಆಗ್ರಹಿಸಿದ್ದಾರೆ.




0 Comments