ಇದನ್ನೂ ಓದಿ : ಜಯಪುರ: ಮೇಗೂರು ಸಮೀಪದ ಎಸ್ಟೇಟ್ ನಲ್ಲಿ ಅನುಮಾನಾಸ್ಪದ ರೀರಿಯಲ್ಲಿ ಮಹಿಳೆಯ ಶವ ಪತ್ತೆ
ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ನ ಮಲಯಮಾರುತದ ಬಳಿ ಈ ಅವಘಡ ಸಂಭವಿಸಿದ್ದು ಗೂಡ್ಸ್ ವಾಹನದಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಕೂಡಲೇ ಧಾವಿಸಿದ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ದೊರಕಿಸಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸುವಲ್ಲಿ ಸಹಕರಿಸಿದ್ದಾರೆ.
ವಾಹನದಲ್ಲಿದ್ದ ಮೂವರು ಉತ್ತರಪ್ರದೇಶ ಮೂಲದವರಾಗಿದ್ದು ಚಾಲಕನ ನಿಯಂತ್ರಣ ತಪ್ಪಿ ಗೂಡ್ಸು ಪಲ್ಟಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತನು ಕೊಟ್ಟಿಗೆಹಾರ, ವರದಿಗಾರರು




0 Comments