ತರೀಕೆರೆ : (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ಜೂಜಾಟದಲ್ಲಿ ಭಾಗಿಯಾಗಿದ್ದ ಆರು ಜನ ಆರೋಪಿಗಳನ್ನು ಕಾರ್ಯಾಚರಣೆಯ ಮೂಲಕ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಇದನ್ನೂ ಓದಿ : ಪೊಲೀಸರ ಮೇಲೆಯೇ ಹಲ್ಲೆ ನಡೆಸಲು ಮುಂದಾದ ಆರೋಪಿಗೆ ಗುಂಡೇಟು

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದ ಎಪಿಎಂಸಿ ಹತ್ತಿರದಲ್ಲಿ, ಜೂಜಾಟದಲ್ಲಿ ಭಾಗಿಯಾಗಿದ್ದ ಆರುಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 

ಈ ಜೂಜುಕೋರರು ಜೂಜಾಟಕ್ಕೆಂದು ಬಳಸಿದ್ದ 16,090 ರೂಪಾಯಿ ನಗದನ್ನು ವಶಕ್ಕೆ ಪಡೆದಿರುವ ಪೊಲೀಸರು ಆರೋಪಿಗಳನ್ನು ಸಹ ವಿಚಾರಣೆ ನಡೆಸುತ್ತಿದ್ದಾರೆ. ಈ ಕಾರ್ಯಾಚರಣೆಯು ತರೀಕೆರೆ ಪಿಎಸ್ಸೈ ಅವರ ಮಾರ್ಗದರ್ಶನದಲ್ಲಿ ನಡೆದಿದ್ದು,  ಠಾಣೆಯ ಸಿಬ್ಬಂದಿವರ್ಗದವರು ಸಹ ಭಾಗಿಯಾಗಿದ್ದರು.

ಜಲಪ್ರವಾಹ ಮತ್ತು ಭೂ ಕುಸಿತ ಉಂಟಾಗಬಹುದಾದ ಸ್ಥಳಗಳನ್ನು ಗುರುತಿಸಿದ ಕೊಡಗು ಜಿಲ್ಲಾಡಳಿತ

ಕೊಡಗು : ಮಳೆಗಾಲದ ಸಂದರ್ಭದಲ್ಲಿ ಉಂಟಾಗುವ ನೆರೆಯಿಂದ ಹಾಗೂ ಗುಡ್ಡ ಕುಸಿತದಿಂದ ಹನಿಗೀಡಾಗುವ ಪ್ರದೇಶಗಳನ್ನು ಕೊಡಗು ಜಿಲ್ಲಾಡಳಿತ ಗುರುತಿಸಿ ಈ ಸಂಬAಧ ಜನರಿಗೆ ಯಾವುದೇ ರೀತಿಯ ಸಮಸ್ಯೆಗಳುಂಟಾಗದಂತೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸುವತ್ತ ಸಜ್ಜಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. 

ಕೊಡಗು ಜಿಲ್ಲೆಯ ಅನೇಕ ಭಾಗಗಳು ಕಳೆದ ಕೆಲ ವರ್ಷಗಳ ಮಳೆಗೆ ನಲುಗಿದ್ದವು. ಬಹುತೇಕ ಭಾಗಗಳಲ್ಲಿ ಗುಡ್ಡ ಕುಸಿತ ಮುಂತಾದವುಗಳು ಉಂಟಾಗಿ ಜನರ ಬದುಕನ್ನು ಅವರಿಗೆ ಆಶ್ರಯ ಕಲ್ಪಿಸಿದ್ದ ಮನೆಗಳನ್ನು ಬೀದಿಗೆ ತಂದಿತ್ತು. ಈ ಹಿನ್ನೆಲೆ ಈ ಬಾರಿ ಅಂತಹ ಪ್ರಕರಣಗಳು ಮರುಕಳಿಸದ ರೀತಿಯಲ್ಲಿ ಜನರ ಬದುಕನ್ನು ಸುರಕ್ಷಿತವಾಗಿರಿಸುವ ಉದ್ದೇಶದಿಂದ ಜಿಲ್ಲಾಡಳಿತ ಅಂತಹ ಪ್ರದೇಶಗಳನ್ನು ಗುರುತಿಸಿ ಪಟ್ಟಿ ಮಾಡಿದೆ.

ಈ ಬಾರಿ ಕೊಡಗು ಜಿಲ್ಲೆಯಲ್ಲಿ 44 ಕಡೆ ಭೂಕುಸಿತ ಹಾಗೂ 43 ಕಡೆಯಲ್ಲಿ ಜಲಪ್ರವಾಹದ ಸ್ಥಳಗಳನ್ನು ಜಿಲ್ಲಾಡಳಿತ ಗುರುತಿಸಿದೆ, ಹೀಗಾಗಿ, ಕೊಡಗಿನ ಜನತೆ ಆತಂಕದಲ್ಲಿಯೇ ಜೀವನ ಕಳೆಯುವಂತಾಗಿದೆ. ಜಿಲ್ಲೆಯ 5 ತಾಲೂಕುಗಳ 10 ಹೋಬಳಿಯ 100 ಕಡೆಯಲ್ಲಿ ಜಲಕಂಟಕ ಎದುರಾಗುವ ಸೂಚನೆಯನ್ನು ಅಧಿಕಾರಿಗಳ ತಂಡ ನೀಡಿದ್ದು ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಸುರಕ್ಷತಾ ಕಾರ್ಯವನ್ನು ಆರಂಭಿಸಿದೆ.

ಮಳೆಗಾಲದಲ್ಲಿ ಆತಂಕದಿಂದ ಜೀವನ ನಿರ್ವಹಣೆ ಮಾಡಬೇಕಿರುವ ಅಸುರಕ್ಷಿತ ಭಾಗಗಳ ಜನರಿಗೆ ನೊಟೀಸ್ ನೀಡಿ ಸುರಕ್ಷಿತವಾಗಿರುವ ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆಯುವಂತೆ ವ್ಯವಸ್ಥೆ ಕಲ್ಪಿಸಲಾಗುವುದು. ಜನರ ಸುರಕ್ಷತೆಯ ದೃಷ್ಟಿಯಿಂದ ಈಗಾಗಲೇ ಸಿದ್ಧತೆಗಳನ್ನು ಜಿಲ್ಲಾಡಳಿತ ಆರಂಭಿಸಿದೆ, ವಿಪತ್ತು ನಿರ್ವಹಣಾ ತಂಡದ ಸಿಬ್ಬಂದಿಗಳು ಸೇರಿದಂತೆ ಅಗ್ನಿ ಶಾಮಕದಳ, ಪೊಲೀಸ್ ಇಲಾಖೆ ಎಲ್ಲರನ್ನು ಸೇರಿಸಿ ತಂಡದ ರಚನೆ ಮಾಡುವ ಮೂಲಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ನೆರೆ ಪರಿಹಾರಕ್ಕೆ ಸಂತ್ರಸ್ತರ ಆಗ್ರಹ :

ಈ ಹಿಂದೆ 2018 ರಲ್ಲಿ ನೆರೆಹಾನಿಗೀಡಾಗಿದ್ದ ಸಂತ್ರಸ್ತರಿಗೆ ಇದುವರೆಗೂ ಯಾವುದೇ ಪರಿಹಾರಗಳು ಒದಗಿಲ್ಲ, ಈ ಕುರಿತಾಗಿ ಅಧಿಕಾರಿಗಳು ಗಮನಹರಿಸಬೇಕು, ನಿವೇಶನವನ್ನು ಗುರುತಿಸಿ ಸಮಯ ಕಳೆದರೂ ಇದುವರೆಗೆ ಯಾವುದೇ ರೀತಿಯ ಪ್ರಕ್ರಿಯೆ ನಡೆದಿಲ್ಲ, ಚುರುಕಾಗಿ ಈ ಪ್ರಕ್ರಿಯೆಗಳು ಆರಂಭವಾಗಬೇಕೆಂದು ಸಂತ್ರಸ್ತರು ಕೋರಿದ್ದಾರೆ.