ಜಯಪುರ :(ನ್ಯೂಸ್ ಮಲ್ನಾಡ್ ವರದಿ) ಇಲ್ಲಿನ ಮೇಗೂರು ಸಮೀಪದ ಎಸ್ಟೇಟ್ ಒಂದರಲ್ಲಿ ಅನುಮಾನಾಸ್ಪಾದ ರೀತಿಯಲ್ಲಿ ಶವವೊಂದು ಪತ್ತೆಯಾಗಿದೆ.

ಇದನ್ನೂ ಓದಿ : ಮಾದಕ ವಸ್ತುಗಳ ಮಾರಾಟಕ್ಕೆ ಯತ್ನಿಸುತ್ತಿದ್ದ ಐವರು ಸೆರೆ

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಮೇಗೂರು ಸಮೀಪದ ತಲವಾನೆ ಬಳಿಯ ಎಸ್ಟೇಟ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಚಿಕ್ಕಮಗಳೂರು ಮೂಲದವರು ಎನ್ನಲಾದ ಕಾರ್ಮಿಕನೊರ್ವನ ಪತ್ನಿ ಶವವಾಗಿ ಪತ್ತೆಯಾಗಿದ್ದಾಳೆ. ಬೆಳಗ್ಗೆಯಿಂದ ಕಾಣದ ಹಿನ್ನಲೆ ಹುಡುಕಾಟ ನಡೆಸಿದಾಗ ಮನೆಯಿಂದ ಸ್ವಲ್ಪ ದೂರದಲ್ಲೇ ಗಾಯಗೊಂಡಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ : 

ಘಟನಾ ಸ್ಥಳಕ್ಕೆ ಕೊಪ್ಪ ಡಿವೈಎಸ್ ಪಿ ಗುಂಜನ್ ಆರ್ಯ ಐಪಿಎಸ್, ಶೃಂಗೇರಿ ಠಾಣಾಧಿಕಾರಿ ರವಿ ಬಿ ಎಸ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಘಟನೆ ಸಂಬಂಧ ಪೊಲೀಸರು ಸ್ಥಳದಲ್ಲೇ ಇದ್ದು, ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ. ಈ ಕುರಿತು ಇನ್ನೂ ಯಾವುದೇ ದೂರು ದಾಖಲಾಗಿಲ್ಲ

ಈ ಹಿಂದೆಯಿಂದಲೂ ದಂಪತಿಗಳ ನಡುವೆ ಗಲಾಟೆಗಳಾಗುತ್ತಿತ್ತು ಎನ್ನಲಾಗಿದೆ. ಶವದ ಮೇಲೆ ಕೆಲ ಗಾಯಗಳಿದ್ದು ಸಾವಿನ ಕುರಿತಂತೆ ಹಲವು ಅನುಮಾನ ವ್ಯಕ್ತವಾಗುತ್ತಿದ್ದು, ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಿದೆ.