ಸಾಗರ : (ನ್ಯೂಸ್ ಮಲ್ನಾಡ್ ವರದಿ)  ಪತಿ ಮನೆಯಲ್ಲಿರದ ಸಮಯದಲ್ಲಿ ಆತನ ಹೆಂಡತಿಯ ಮೇಲೆಯೇ ಅತ್ಯಾಚಾರ ಎಸಗಲು ಕಾಮುಕಾನೋರ್ವ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು ಮಹಿಳೆಯ ಪತಿ ಇಲ್ಲದ ವೇಳೆ ಮಧ್ಯರಾತ್ರಿ ಮನೆಗೆ ನುಗ್ಗಿದ ಪರಿಚಿತನೇ ಮಹಿಳೆಯ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿದ್ದಾನೆ.

ಶೃಂಗೇರಿ : ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣ ಸಂಬಂಧ 218 ಮರಗಳ ಹನನಕ್ಕೆ ಸಿದ್ಧತೆ ಹಿನ್ನೆಲೆ ; ತಕರಾರು ಅರ್ಜಿ ಸಲ್ಲಿಕೆಗೆ ಪರಿಸರಾಸಕ್ತರ ಅಭಿಯಾನ

ಅತ್ಯಾಚಾರ ಎಸಗಲು ಯತ್ನಿಸಿರುವ ಆರೋಪಿಯನ್ನು ದಿಗಟೆಕೊಪ್ಪದ ರಮೇಶ್ ಎನ್ನಲಾಗಿದೆ. ಪೊಲೀಸರು ಆತನನ್ನು ಸೋಮವಾರ ಬಂಧಿಸಿದ್ದು ವಿಚಾರಣೆ ಕೈಗೊಂಡಿದ್ದಾರೆ. ಮಹಿಳೆಯ ಪತಿಗೆ ಪರಿಚಯಸ್ಥನಾಗಿದ್ದ ರಮೇಶ್ ಆಗಾಗ ಮನೆಗೆ ಬರಲು ಆರಂಭಿಸಿದ್ದ. ಜೂನ್ ಮೊದಲ ವಾರದಲ್ಲಿ ಪತಿ ಕೆಲಸದ ನಿಮಿತ್ತ ಶಿವಮೊಗ್ಗಕ್ಕೆ ತೆರಳಿದ್ದ ಸಂದರ್ಭದಲ್ಲಿ ಮನೆಗೆ ನುಗ್ಗಿದ ಆರೋಪಿಯು ಸ್ನೇಹಿತನ ಪತ್ನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಮಹಿಳೆ ಜೋರಾಗಿ ಕಿರುಚಿದ ಪರಿಣಾಮ ಅಕ್ಕಪಕ್ಕದ ಮನೆಯವರು ಧಾವಿಸಿದ್ದಾರೆ. ಈ ತಕ್ಷಣವೇ  ಆರೋಪಿಯು ಮಹಿಳೆಯ ಫೋಟೋಗಳನ್ನು ತೆಗೆದುಕೊಂಡು ಪರಾರಿಯಾಗಿದ್ದಾನೆ. 


ಈ ಸಂದರ್ಭದಲ್ಲಿ ಮಹಿಳೆಯ ಪತಿ ಪೊಲೀಸರಿಗೆ ದೂರು ನೀಡಲು ಮುಂದಾದಾಗ ಆರೋಪಿಯು ಪ್ರಕರಣ ದಾಖಲಿಸಿದರೆ ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯ ಫೋಟೋ ಹಾಕಿ ಅಪಪ್ರಚಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಈ ಬಳಿಕವೂ ಮಹಿಳೆಯನ್ನು ಬ್ಲಾಕ್‌ಮೇಲ್ ಮಾಡಿ ಅನೈತಿಕ ಸಂಬಂಧಕ್ಕೆ ಒತ್ತಾಯಿಸುತ್ತಿದ್ದಾನೆ ಎಂದು ಆರೋಪಿಸಿ ಆತನ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದರು. ಈ ಸಂಬಂಧ ಆರೋಪಿಯನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಚಾರ್ಮಾಡಿ ಘಾಟ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು : 

ಮೂಡಿಗೆರೆ : ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ  ಅಧಿಕಾರಿಗಳು ತಂಡವು ಇಂದು ಚಾರ್ಮಾಡಿ ಘಾಟ್ ಗೆ ಭೇಟಿ ನೀಡಿ ಅತ್ಯಾವಶ್ಯಕವಿರುವ ಕಾಮಗಾರಿಗಳ ಕುರಿತು ಹಾಗೂ ಘಾಟ್ ನ ಪ್ರಸ್ತುತ ಸ್ಥಿತಿಯ ಕುರಿತು ಪರಿಶೀಲನೆ ನಡೆಸಿತು. 

ಚಿಕ್ಕಮಗಳೂರು ಹಾಗೂ ದಕ್ಷಿಣಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾದ ಚಾರ್ಮಾಡಿ ಘಾಟ್ ಪ್ರದೇಶಕ್ಕೆ ಭೇಟಿ ನೀಡಿದ ಅಧಿಕಾರಿಗಳ ತಂಡವು ಕಳೆದೆರಡು ವರ್ಷಗಳ ಹಿಂದೆ ಘಾಟ್ ನಲ್ಲಿ ಉಂಟಾದ ಭೂಕುಸಿತ ಹಾಗೂ ಮಳೆಗಾಳಿಗೆ ರಸ್ತೆ ಹಾಗೂ ತಡೆಗೋಡೆಗಳು ಹಾನಿಯಾಗಿರುವುದನ್ನು ಪರಿಶೀಲನೆ ನಡೆಸಿದರು. 


ಈ ಕುರಿತು ನಿರ್ದೇಶನ ನೀಡಿದ ಅಧಿಕಾರಿಗಳು ಪ್ರಸ್ತುತ ರಸ್ತೆ ಕೆಲಸವನ್ನು ತಾತ್ಕಾಲಿಕವಾಗಿ ಮುಗಿದಿದ್ದು, ರಸ್ತೆಯ ಎರಡೂ ಕಡೆಗಳಲ್ಲಿ ನಡೆಯುತ್ತಿರುವ ತಡೆಗೋಡೆ ಕಾಮಗಾರಿಯನ್ನು ಶೀಘ್ರವಾಗಿ ಮುಗಿಸುವಂತೆ ಅಂತೆಯೇ ಮಳೆಗಾಲದ ಸಂದರ್ಭದಲ್ಲಿ ಈ ಮಾರ್ಗದ ಮುಖಾಂತರ ಪ್ರವೇಶಿಸುವ ವಾಹನ ಸವಾರರಿಗೆ ಯಾವುದೇ ಸಮಸ್ಯೆಗಳು ಉಂಟಾಗದಂತೆ ನಿಗಾವಹಿಸಬೇಕೆಂದು ಹಾಗೂ ಅಗತ್ಯವಿರುವ ಕೆಲಸಗಳನ್ನು ಮಾಡುವಂತೆ ತಿಳಿಸಿದರು. 

ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ರಾಜ್ಯ ಕಾರ್ಯದರ್ಶಿ ಶ್ರೀ ಕೃಷ್ಣ ರೆಡ್ಡಿ ಅವರೊಂದಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಸನ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಶ್ರೀಮತಿ ಅರ್ಚನಾ, ಬೇಲೂರು NHAEE ಇಂಜಿನಿಯರ್ ಮುನಿರಾಜ್, ಹಾಗೂ ಸಹಾಯಕ ಇಂಜಿನಿಯರ್ ಸಂತೋಷ್ ಸೇರಿದಂತೆ ವಿವಿಧ ಅಧಿಕಾರಿಗಳು ಇದ್ದರು.