ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ಗ್ರಾಮ ಪಂಚಾಯತ್ ಅಧ್ಯಕ್ಷೆ ಸ್ಥಾನ ದೊರಕಲಿಲ್ಲ ಎಂಬ ಕಾರಣಕ್ಕೆ ಮನನೊಂದು ಮಹಿಳೆಯೋರ್ವರು ವಿಷ ಸೇವಿಸಿರುವ ಘಟನೆ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ದೋಣಭಘಟ್ಟದಲ್ಲಿ ಈ ಘಟನೆ ನಡೆದಿದ್ದು ಕೌಸರ್ ಬಾನು ಎಂಬ ಐವತ್ತು ವರ್ಷ ಪ್ರಾಯದ ಗ್ರಾಮ ಪಂಚಾಯತ್ ಸದಸ್ಯೆ ವಿಷ ಕುಡಿದಿದ್ದಾರೆ.
ಇದನ್ನೂ ಓದಿ : ಎಟಿಎಂ ನಲ್ಲಿ ಹಣ ಡ್ರಾ ಮಾಡುವಾಗ ಸಹಾಯ ಮಾಡುವ ನೆಪದಲ್ಲಿ ಎಟಿಎಂ ಬದಲಾಯಿಸುತ್ತಿದ್ದ ಖತರ್ನಾಕ್ ಕಳ್ಳನ ಬಂಧನ
ದೊಣಬಘಟ್ಟ ಗ್ರಾಮ ಪಂಚಾಯತ್ ನ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನದ ಆಯ್ಕೆಯ ಸಲುವಾಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಈ ಪ್ರಕಿಯೆ ನಡೆದಿದ್ದು ಹೈಡ್ರಾಮಾಕ್ಕೆ ಎಡೆಮಾಡಿತ್ತು,ಅಧ್ಯಕ್ಷರಾಗಿ ಖಲೀಲ್, ಉಪಾಧ್ಯಕ್ಷರಾಗಿ ಮಾಲಮ್ಮ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೌಸರ್ ಭಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಗ್ರಾಮ ಪಂಚಾಯತ್ ಅಧ್ಯಕ್ಷೆ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಕೌಸರ್ ಬಾನು ಈ ಹಿಂದೆ ಖಲೀಲ್ ಅವರೊಂದಿಗೆ ಒಪ್ಪಂದ ಮಾಡಿಕೊಂಡು 14 ತಿಂಗಳು ನಾನು ಬಳಿಕದ 14 ತಿಂಗಳು ನೀವು ಅಧ್ಯಕ್ಷರಾಗಿ ಕಾರ್ಯ ನಿರ್ವಹಣೆ ಮಾಡುವುದು ಎಂಬುದಾಗಿ ನಿರ್ಧಾರಕ್ಕೆ ಬಂದಿದ್ದರು.
ಆದರೆ ಮಾತಿನಂತೆ ಮುಂದಿನ ಬೆಳವಣಿಗೆಗಳು ನಡೆಯದ ಕಾರಣಕ್ಕಾಗಿ ಬೇಸರಗೊಂಡ ಕೌಸರ್ ಬಾನು ಬೇಸರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಅವರನ್ನು ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.




0 Comments