ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಇಂಜಿನಿಯರ್  ಲಂಚ ಪಡೆಯುವ ವೇಳೆಯಲ್ಲಿ ಏಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿರುವ ಘಟನೆ ಬೆಳಕಿಗೆ ಬಂದಿದೆ.

ಮೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ಮಂಜುನಾಥ್, ಹಾಗೂ AEE ಚಿದಾನಂದ್ ಎಂಬ ಅಧಿಕಾರಿಗಳು ವ್ಯಕ್ತಿಯಿಂದ ಹಣ ಪಡೆಯುವ ಸಂದರ್ಭದಲ್ಲಿ ಎಸಿಬಿ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 

ಈ ಕಾರ್ಯಾಚರಣೆಯಲ್ಲಿ ಎಸಿಬಿ ಡಿ. ವೈ.ಎಸ್ಪಿ ಸುನೀಲ್, ಇನ್ಪೆಕ್ಟರ್ ಅನಿಲ್ ರಾಥೋಡ್ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆಯು ನಡೆದಿದ್ದು ಆರೋಪಿಯನ್ನು ಅಧಿಕಾರಿಗಳು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.