ಚಿಕ್ಕಮಗಳೂರು  : (ನ್ಯೂಸ್ ಮಲ್ನಾಡ್ ವರದಿ) ರಾಷ್ಟ್ರೀಯ ಸ್ವಯಂಸೇವಕ ಸಂಘದ ಗಣವೇಶದ ಭಾಗವಾದ ಚಡ್ಡಿಯನ್ನು ಸುಟ್ಟು ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ಇದನ್ನೂ ಓದಿ : ಪೊಲೀಸರ ಮೇಲೆಯೇ ಹಲ್ಲೆ ನಡೆಸಲು ಮುಂದಾದ ಆರೋಪಿಗೆ ಗುಂಡೇಟು

ಚಿಕ್ಕಮಗಳೂರು ನಗರದ ಅಜಾದ್ ಪಾರ್ಕ್ ವೃತ್ತದಲ್ಲಿ ಸೇರಿದ  ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು ಹಾಗೂ ಮುಖಂಡರು ಬಿಜೆಪಿ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದರು. Rss ಚಡ್ಡಿಗೆ ಧಿಕ್ಕಾರ, ಬಿಜೆಪಿಗೆ ಧಿಕ್ಕಾರ ಎಂಬ ಘೋಷಣೆಗಳನ್ನು ಕೂಗುತ್ತಾ, NSUI ರಾಜ್ಯಾಧ್ಯಕ್ಷರ ಬಂಧನವನ್ನು ಖಂಡಿಸುತ್ತೇವೆ ಇದನ್ನು  ನಾವು ಒಪ್ಪಲಾರೆವು ಎಂದರು. 

ಪ್ರತಿಕೃತಿ ದಹಿಸಿದ ಪ್ರತಿಭಟನಾಕಾರರು ವಿದ್ಯಾರ್ಥಿಗಳನ್ನು ಸಹಿಸಿದ ಪಕ್ಷ ಬಿಜೆಪಿ, NSUI ರಾಜ್ಯಾಧ್ಯಕ್ಷ ಹಾಗೂ ಕಾರ್ಯಕರ್ತರ ಬಂಧನಕ್ಕೆ ನಮ್ಮ ವಿರೋಧವಿದೆ ಈ ನಡೆಯನ್ನು ನಾವು ಒಪ್ಪಲಾರೆವು ಎಂದರು. 

ಈ ಪ್ರತಿಭಟನಾ ಸಂದರ್ಭದಲ್ಲಿ ಕಾಂಗ್ರೆಸ್ ನ ಪ್ರಮುಖರಾದ ಡಾ. ಕೆಪಿ ಅಂಶುಮಂಥ್, ಹಾಗೂ ಇತರೆ ಪದಾಧಿಕಾರಿಗಳು ಹಾಜರಿದ್ದರು.