ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದೆ.
ಇದನ್ನೂ ಓದಿ : ಮಾಜಿ ಶಾಸಕ ಡಿ. ಎನ್ ಜೀವರಾಜ್ ವಿರುದ್ಧ ಜಾಮೀನು ರಹಿತ ವಾರೆಂಟ್
ಹೋಂಡಾಸಿಟಿ ಕಾರು ಹಾಗೂ ಲಾರಿಯ ನಡುವೆ ನಡೆದ ಈ ಅಪಘಾತದಲ್ಲಿ ಅದೃಷ್ಟವಶಾತ್ ಎಂಬಂತೆ ಯಾರಿಗೂ ಪ್ರಾಣಹಾನಿಯಾಗದೆ ಎರಡೂ ವಾಹನಗಳಲ್ಲಿದ್ದವರು ಸುರಕ್ಷಿತವಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕಾರು ಶಿವಮೊಗ್ಗದ ಕಡೆಯಿಂದ ಕುಂದಾಪುರದ ಕಡೆಗೆ ಬರುತ್ತಿದ್ದು ಎದುರು ಭಾಗದಿಂದ ಲಾರಿಯು ಬರುತ್ತಿದ್ದ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು ಅಪಘಾತದ ತೀವ್ರತೆಗೆ ಕಾರಿನ ಏರ್ ಬ್ಯಾಗ್ ತೆರೆದುಕೊಂಡು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗುವಂತೆ ಮಾಡಿದೆ. ಓರ್ವ ಪ್ರಯಾಣಿಕರಿಗೆ ಗಾಯಗಳಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಪಾರಾಗಿದ್ದಾರೆ.




0 Comments