ಎನ್.ಆರ್.ಪುರ : (ನ್ಯೂಸ್ ಮಲ್ನಾಡ್ ವರದಿ) ಸಿಡಿಲು ಬಡಿದು ಕಾಡೆಮ್ಮೆಯೊಂದು ಮೃತಪಟ್ಟಿರುವ ಘಟನೆ ನರಸಿಂಹರಾಜಪುರದಲ್ಲಿ ಬೆಳಕಿಗೆ ಬಂದಿದೆ.
ಇದನ್ನೂ ಓದಿ : ಆನೆ ದಂತವನ್ನು ಮಾರಾಟ ನಡೆಸಲು ಯತ್ನಿಸುತ್ತಿದ್ದ ಐವರ ಬಂಧನ ; ಕಾರು ಹಾಗೂ ದಂತ ಪೊಲೀಸರ ವಶಕ್ಕೆ
ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರದ ಸೀತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊನೋಡಿ ಗ್ರಾಮದ ಹೆರಂದೂರು ಶಾರದಮ್ಮ ಎಂಬುವವರ ಅಡಿಕೆ ತೋಟದಲ್ಲಿ ಸಿಡಿಲು ಬಡಿದು ಕಾಡೆಮ್ಮೆಯೊಂದು ಮೃತಪಟ್ಟಿದೆ.
ಈ ಭಾಗದಲ್ಲಿ ಗುಡುಗು ಸಹಿತ ಮಳೆ ಸುರಿದ ಕಾರಣ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ, ತೋಟಕ್ಕೆ ತೆರಳಿ ಗಮನಿಸಿದಾಗ ಕಾಡೆಮ್ಮೆ ಮೃತಪಟ್ಟಿರುವುದು ಕಂಡು ಬಂದಿದ್ದು ಈ ಕುರಿತಾಗಿ ಶಾರದಮ್ಮ ಅವರ ಪುತ್ರಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಕಾಡೆಮ್ಮೆಯ ಮರಣೋತ್ತರ ಪರೀಕ್ಷೆಯ ಬಳಿಕ ಅದನ್ನು ಹೂಳಲಾಗಿದೆ. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಸೇರಿದಂತೆ ಅನೇಕ ಅಧಿಕಾರಿಗಳು ಭೇಟಿ ನೀಡಿ ಈ ಸಂಬಂಧ ಪರಿಶೀಲನೆ ನಡೆಸಿದ್ದಾರೆ.





0 Comments