ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ಬೀರೂರಿನಲ್ಲಿ ಬೆಳಕಿಗೆ ಬಂದಿದೆ.
ಇದನ್ನೂ ಓದಿ : ಕಳಪೆ ಕಾಮಗಾರಿಯಿಂದ ಸೇತುವೆ ಕುಸಿತ ; ಸಾರ್ವಜನಿಕರ ಆರೋಪ
ಚಿಕ್ಕಮಗಳೂರು ಜಿಲ್ಲೆಯ ಬೀರೂರಿನ ಯರೇಹಳ್ಳಿಯಲ್ಲಿ ಮಂಗಳವಾರ ಮಧ್ಯಾಹ್ನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಸಂಭವಿಸಿದ ಸ್ಫೋಟದ ತೀವ್ರತೆಗೆ ಮನೆಯ ಛಾವಣಿ ಹೆಂಚುಗಳು ಹಾರಿದೆ.
ಮರುಳಸಿದ್ದಪ್ಪ, ಹಾಗೂ ಚೈತನ್ಯ ಎಂಬ ಇಬ್ಬರು ಗಾಯಾಳುಗಳು. ಮರುಳಸಿದ್ದಪ್ಪ ಅಡುಗೆ ಮಾಡಲೆಂದು ಗ್ಯಾಸ್ ಸ್ಟೌವ್ ಹಚ್ಚಲು ಮುಂದಾದಾಗ ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಗೆ ಬೆಂಕಿ ಹೊತ್ತಿಕೊಂಡಿದೆ.
ಗಾಬರಿಗೊಂಡು ಹೊರಗೆ ಓಡುವಾಗ ಬಾಗಿಲ ಬಳಿ ಬರುವಷ್ಟರಲ್ಲಿಯೇ ಸಿಲಿಂಡರ್ ಸ್ಫೋಟಿಸಿ ಭುಜಕ್ಕೆ ಸುಟ್ಟ ಗಾಯವಾಗಿದೆ. ಸ್ಫೋಟದ ತೀವ್ರತೆಗೆ ಜಗುಲಿಯಲ್ಲಿ ಆಟವಾಡುತ್ತಿದ್ದ ಚೈತನ್ಯಾಳ ತಲೆಯ ಮೇಲೆ ಹೆಂಚುಗಳು ಬಿದ್ದು ಆಕೆಗೂ ಕೂಡ ಗಂಭೀರ ಗಾಯಗಳಾಗಿದೆ.
ಘಟನೆ ನಡೆಯುತ್ತಿದ್ದಂತೆ ಅಗ್ನಿಶಾಮಕದಳಕ್ಕೆ ಸ್ಥಳೀಯರು ಕರೆ ಮಾಡಿ ತಿಳಿಸಿದ್ದು ಕೂಡಲೇ ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಗಾಯಾಳುಗಳನ್ನು ತಕ್ಷಣವೇ ಬೀರೂರು ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕಳುಹಿಸಲಾಗಿದೆ. ಹುಲ್ಲೇಹಳ್ಳಿ ಪಿಡಿಒ ಮಂಜುನಾಥ್ ಮತ್ತು ಗ್ರಾಪಂ ಸದಸ್ಯ ಎಂ.ಲಕ್ಷ್ಮಣಪ್ಪ ಹಾನಿ ಪರಿಶೀಲನೆ ನಡೆಸಿದ್ದಾರೆ.
ಆನ್ ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಿ :
https://forms.gle/APPtk8M3ZDk2oMka6
ಈ ರೀತಿಯ ಘಟನೆಗಳನ್ನು ಎದುರಿಸುವ ಸಲುವಾಗಿ ಇಲಾಖೆಯು ಅನೇಕ ಕಾರ್ಯಾಗಾರಗಳನ್ನು ನಡೆಸುತ್ತಿದ್ದು ಈ ಕಾರ್ಯಾಗಾರಗಳಲ್ಲಿ ಸಾರ್ವಜನಿಕರು ಭಾಗಿಯಾಗಿ ತುರ್ತು ಸಂದರ್ಭದಲ್ಲಿ ಎದುರಾಗಬಹುದಾದ ದೊಡ್ಡ ಆಪತ್ತನ್ನು ಕೊಂಚಮಟ್ಟಿಗಾದರೂ ಎದುರಿಸಲು ಸಿದ್ಧರಾಗಬಹುದು.
ಶಿವಮೊಗ್ಗ: ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಶಾಹೀದ್ ಖುರೇಷಿ :
ಶಿವಮೊಗ್ಗ : ಪೊಲೀಸರು ಆರೋಪಿಯನ್ನು ಬಂಧಿಸಲೆಂದು ತೆರಳಿದಾಗ ಪೊಲೀಸರಿಗೇ ಚೂರಿ ಇರಿದಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಹಳೇ ಶಿವಮೊಗ್ಗ ನಗರದ ಕ್ಲಾರ್ಕ್ ಪೇಟೆಯಲ್ಲಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಇಬ್ಬರು ರೌಡಿಶೀಟರ್ ಗಳನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆಯೇ ಚಾಕು ಇರಿತ ನಡೆದಿದೆ.
ಶಿವಮೊಗ್ಗದ ದೊಡ್ಡಪೇಟೆ ಠಾಣೆಯ ಸಿಬ್ಬಂದಿಗಳಾದ ಗುರುನಾಯ್ಕ್ ಹಾಗೂ ರಮೇಶ್ ಹಲ್ಲೆಗೊಳಗಾದವರು. ಪೊಲೀಸರು ಬಂಧಿಸಲೆಂದು ತೆರಳಿದ ಸಂದರ್ಭದಲ್ಲಿ ಶಾಹೀದ್ ಖುರೇಷಿ ಎಂಬ ರೌಡಿ ಶೀಟರ್ ಪೊಲೀಸ್ ಪೇದೆಯ ಎದೆಗೆ ಚಾಕು ಇರಿದಿದ್ದಾನೆ. ಪೊಲೀಸರು ಪುನಃ ಹಿಡಿಯಲು ತೆರಳಿದಾಗ ಮತ್ತೆ ಲಾಂಗು ಬೀಸಿದ ಪರಿಣಾಮ ಜೀವ ರಕ್ಷಣೆಯ ಸಲುವಾಗಿ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹೊಡೆದಿದ್ದಾರೆ.
ಗಾಯಗೊಂಡಿರುವ ಇಬ್ಬರು ಪೊಲೀಸರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಸಹ್ಯಾದ್ರಿ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಆಸ್ಪತ್ರೆಗೆ ಭೇಟಿ ನೀಡಿರುವ ಎಸ್ಪಿ ಲಕ್ಷ್ಮೀಪ್ರಸಾದ್ ಪೊಲೀಸ್ ಸಿಬ್ಬಂದಿಗಳಾದ ಗುರುನಾಯ್ಕ್ ಹಾಗೂ ರಮೇಶ್ ಅವರ ಆರೋಗ್ಯ ವಿಚಾರಣೆ ನಡೆಸಿದರು.






0 Comments