ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ವಶಪಡಿಸಿಕೊಂಡಿದ್ದ ಅಪಾರ ಪ್ರಮಾಣದ ಗಾಂಜಾವನ್ನು ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನವಾದ ನಿನ್ನೆ ಪೊಲೀಸ್ ಅಧಿಕಾರಿಗಳು ನಾಶಪಡಿಸಿದ್ದಾರೆ. 

ಇದನ್ನೂ ಓದಿ : ಚಿಕ್ಕಮಗಳೂರು: ಮನೆ ಬೀಗ ಒಡೆದು ಹಣ, ಚಿನ್ನಾಭರಣ ದೋಚಿದ ಖದೀಮರು

ನಶೆಭರಿತ ವಸ್ತುಗಳನ್ನು ಸೇವನೆ ಮಾಡುವವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ಉದ್ದೇಶದಿಂದ ಕಾರ್ಯಾಚರಣೆಯನ್ನು ಆರಂಭಿಸಿದ್ದ ಚಿಕ್ಕಮಗಳೂರಿನ ಪೊಲೀಸರು, ನಶೆಯಲ್ಲಿದ್ದವರಂತೆ ಕಂಡುಬರುತ್ತಿದ್ದ ಅನುಮಾನಾಸ್ಪದ ವ್ಯಕ್ತಿಗಳನ್ನು ಕರೆತಂದು ವೈದ್ಯಕೀಯ ತಪಾಸಣೆಗೊಳಪಡಿಸಿ ಮಾದಕ ವಸ್ತುಗಳನ್ನು ಸೇವಿಸಿರುವುದು ಧೃಢಪಟ್ಟಲ್ಲಿ ಅವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸುತ್ತಿದ್ದಾರೆ.





ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದ 190.7 ಕೆ.ಜಿ ಗಾಂಜಾವನ್ನು ಹಾಸನದ ಕೈಗಾರಿಕಾ ಪ್ರದೇಶದಲ್ಲಿ ಜಿಲ್ಲಾ ಮಾದಕ ವಸ್ತು ವಿಲೇವಾರಿ ಅಧಿಕಾರಿಗಳ ಸಮ್ಮುಖದಲ್ಲಿ ನಾಶಪಡಿಸಲಾಗಿದೆ. 

ಶಿವಮೊಗ್ಗದಲ್ಲೂ ಈ ಸಂಬಂಧ ಕಾರ್ಯಾಚರಣೆ ನಡೆಸಿ ಮಾದಕ ವಸ್ತುಗಳನ್ನು ವಶಕ್ಕೆ ಪಡೆದಿದ್ದ ಪೊಲೀಸರು ನಿನ್ನೆ ಅಧಿಕಾರಿಗಳ ಸಮ್ಮುಖದಲ್ಲಿ ನಾಶಪಡಿಸಿದ್ದಾರೆ. ಒಟ್ಟು ವಶಪಡಿಸಿಕೊಳ್ಳಲಾಗಿದ್ದ 193 ಕೆ.ಜಿ 498 ಗ್ರಾಂ ತೂಕದ ಗಾಂಜಾದ ಮೌಲ್ಯ 38,07,450 ಎಂದು ಅಂದಾಜಿಸಲಾಗಿದ್ದು ಮಾಚೇನಹಳ್ಳಿಯ ಸಮೀಪವಿರುವ ಶುಶೃತ ಬಯೋಮೆಡಿಕಲ್ ವೇಸ್ಟ್ ಮ್ಯಾನೇಜ್ಮೆಂಟ್ ಆವರಣದಲ್ಲಿ ನಾಶಮಾಡಲಾಗಿದೆ. 


ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಮಾದಕ ವಸ್ತುಗಳ ವಿಲೇವಾರಿ ಸಮಿತಿಯ ಅಧಿಕಾರಿಗಳು ಹಾಗೂ ಸದಸ್ಯರುಗಳು ಹಾಜರಿದ್ದರು.