ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ದುರ್ಮರಣ ಹೊಂದಿರುವ ಘಟನೆ ಸಂಭವಿಸಿದೆ. 

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹಾರೋಗೊಪ್ಪ ಗ್ರಾಮದ ಬಿ.ಕ್ಯಾಂಪ್ ಸಮೀಪದ ಶಿವಮೊಗ್ಗ ರಸ್ತೆಯಲ್ಲಿ ಈ ಅವಘಡ ಸಂಭವಿಸಿದ್ದು ಕಾರು ಚಾಲನೆ ನಡೆಸುತ್ತಿದ್ದ 60 ವರ್ಷ ಪ್ರಾಯದ ಇಂಜಿನಿಯರ್ ಅಶೋಕ್ ಕಾರಿನ ಮೇಲಿನ ನಿಯಂತ್ರಣವನ್ನು ಕಳೆದುಕೊಂಡು ಕಾರನ್ನು ಮರಕ್ಕೆ ಗುದ್ದಿ ಮೃತಹೊಂದಿದ್ದಾರೆ. 

ಇದನ್ನೂ ಓದಿ : ಚಿಕ್ಕಮಗಳೂರು : ಭೀಕರ ರಸ್ತೆ ಅಪಘಾತ ; ಸ್ಥಳದಲ್ಲೇ ಪತಿ ಸಾವು ಪತ್ನಿಯ ಸ್ಥಿತಿ ಗಂಭೀರ

ಆನ್ ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಿ :https://forms.gle/APPtk8M3ZDk2oMka6

ಕೆಪಿಟಿಸಿಎಲ್ ನಲ್ಲಿ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅಶೋಕ್ ಅವರು ಈ ತಿಂಗಳಿನ ಕೊನೆಯಲ್ಲಿ ನಿವೃತ್ತಿ ಹೊಂದುತ್ತಿದ್ದರು ಎನ್ನಲಾಗಿದ್ದು ಈ ಅವಘಡದಲ್ಲಿ ದಾರುಣವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ಕಾರಿನಲ್ಲಿ ಅಶೋಕ್ ಅವರೊಂದಿಗೆ ಪ್ರಯಾಣ ನಡೆಸುತ್ತಿದ್ದ ಕುಟುಂಬ ಸದಸ್ಯರಾದ ಕಮಲಮ್ಮ, ಕಾಲೇಜು ಉಪನ್ಯಾಸಕರಾದ ವಿಜಯ್ ಕುಮಾರ್, ಹಾಗೂ ಗಂಗಾಧರ್ ಅವರಿಗೂ ಗಾಯಗಳಾಗಿದ್ದು, ಗಾಯಾಳುಗಳನ್ನು ಶಿವಮೊಗ್ಗದ ಅಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆಗೊಳಪಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ನೀರು ಕೇಳುವ ನೆಪದಲ್ಲಿ ಮಹಿಳೆಯ ಕುತ್ತಿಗೆಗೆ ಕೈ ಹಾಕಿ ಸರ ಎಗರಿಸಲು ಯತ್ನಿಸಿದ ಖದೀಮರು

ತೀರ್ಥಹಳ್ಳಿ : ನೀರು ಕೇಳುವ ನೆಪದಲ್ಲಿ ಮಹಿಳೆಯ ಕುತ್ತಿಗೆಗೆ ಕೈ ಹಾಕಿ ಚಿನ್ನದ ಮಾಂಗಲ್ಯ ಸರವನ್ನು ಕದಿಯಲು ಕಳ್ಳರು ಯತ್ನಿಸಿರುವ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಾದಿಗಲ್ಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಡಿಗ ಗ್ರಾಮದ ಸಿದ್ಧಾಪುರದಲ್ಲಿ ಈ ಕೃತ್ಯ ನಡೆದಿದ್ದು, ಮನೆಯಲ್ಲಿ ಮಹಿಳೆ ಒಬ್ಬರೇ ಇರುವುದನ್ನು ಗಮನಿಸಿದ ಕಾರಿನಲ್ಲಿ ಬಂದ ಇಬ್ಬರು ಯುವಕರು ಮಹಿಳೆಯ ಬಳಿಗೆ ತೆರಳಿ ನೀರು ಕೇಳಿದ್ದಾರೆ. ಈ ಸಮಯದಲ್ಲಿ ನೀರು ತರಲೆಂದು ಮಹಿಳೆ ತೆರಳಿದಾಗ ಓರ್ವ ಕಾರ್ ಒಳಗೆ ಕುಳಿತು ಹೊರಡಲು ತಯಾರಾಗಿದ್ದಾನೆ, ಮಹಿಳೆ ನೀರು ತಂದ ಕೂಡಲೇ ಆಕೆಯ ಕುತ್ತಿಗೆಗೆ ಕೈ ಹಾಕಿ ಸರ ಎಗರಿಸಲು ಕಳ್ಳ ಯತ್ನಿಸಿದ್ದಾನೆ. 

ಕೂಡಲೇ ಮಹಿಳೆಯು ಕಿರುಚಾಡಿದಾಗ ಅಕ್ಕ ಪಕ್ಕದಲ್ಲಿದ್ದ ಸ್ಥಳೀಯರು ಸ್ಥಳಕ್ಕೆ ಧಾವಿಸಿದ್ದಾರೆ, ಈ ಸಂದರ್ಭದಲ್ಲಿ ಆತನು ಓಡಿ ಹೋಗಿದ್ದು ಕಾರಿನಲ್ಲಿದ್ದ ಇನ್ನೋರ್ವ ಎಲ್ಲೂ ಹೋಗಲಾರದೆ ಸ್ಥಳೀಯರ ಕೈಗೆ ಸಿಕ್ಕಿಬಿದ್ದಿದ್ದಾನೆ. ಆರೋಪಿಗಳು ಬಯಲುಸೀಮೆ ಮೂಲದವರಾಗಿದ್ದು, ಈ ಭಾಗದಲ್ಲಿ ಜೆಸಿಬಿ ಕೆಲಸವನ್ನು ಮಾಡಿಕೊಂಡಿದ್ದರು ಎನ್ನಲಾಗಿದೆ. 

ಈ ಹಿಂದೆಯೂ ಕೂಡ ಮನೆಯೊಂದಕ್ಕೆ ನುಗ್ಗಿದ್ದ ಕಳ್ಳರು ದರೋಡೆ ನಡೆಸಲು ಯತ್ನಿಸಿದ್ದರು, ಈ ಘಟನೆಯ ಕುರಿತಾಗಿ ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿರುವ ಈ ಸಂದರ್ಭದಲ್ಲಿ ಇನ್ನೊಂದು ಕಳ್ಳತನದ ಯತ್ನವು ನಡೆದಿರುವುದು ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದೆ.

ಈ ಕೃತ್ಯಕ್ಕೆ ಆರೋಪಿಗಳು ಬಳಸಿದ್ದ ಕಾರ್ ಕೋಣಂದೂರು ಮೂಲದ ವ್ಯಕ್ತಿಯೋರ್ವರದ್ದು ಎನ್ನಲಾಗಿದ್ದು ಯಾವ ಕಾರಣಕ್ಕಾಗಿ ಕಾರ್ ತಂದಿದ್ದರು ಎಂದು ಪೊಲೀಸರ ಸಂಪೂರ್ಣ ತನಿಖೆಯ ನಂತರವಷ್ಟೇ ತಿಳಿಯಬೇಕಿದೆ.

ಈ ಭಾಗದಲ್ಲಿ ಕೆಲಸ ಮಾಡುವ ನೆಪದಲ್ಲಿ ಬೇರೆ ಬೇರೆ ಊರುಗಳಿಂದ ಅನೇಕರು ಬರುತ್ತಿದ್ದು ಅವರುಗಳ ಪರಿಚಯ ಹಾಗೂ ಚಲನವಲನಗಳ ಮೇಲೆ ಯಾರಿಗೂ ಹೆಚ್ಚಿನ ಮಾಹಿತಿಗಳಿಲ್ಲದೆ ಇರುವ ಕಾರಣ ಈ ರೀತಿಯ ಕೃತ್ಯಗಳಲ್ಲಿ ಭಾಗಿಯಾಗುತ್ತುದಾರೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಘಟನಾ ಸಂಬಂಧ ಆರೋಪಿಗಳಿಂದ ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದು,  ಕಾನೂನಿನ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಕೋರಿದ್ದಾರೆ.