ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಬೈಕ್ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಸಂಭವಿಸಿದೆ.
ಇದನ್ನೂ ಓದಿ : ಬಾಳೆಹೊನ್ನೂರಿನ ಮಾಗೋಡು ಬಳಿ ಭೀಕರ ರಸ್ತೆ ಅಪಘಾತ
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿದ್ದ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆಂದು ಕಳೆದ ಒಂದು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಆನಂದ್ ಹಾಗೂ ರಂಜಿತಾ ತೆರಳಿದ್ದರು. ಮದುವೆಯನ್ನು ಮುಗಿಸಿಕೊಂಡು ಬರುವಾಗ ರಾಷ್ಟ್ರೀಯ ಹೆದ್ದಾರಿ 206 ರ ಶಿವಪುರ ಗೇಟ್ ಬಳಿ ತರೀಕೆರೆ ಕಡೆಯಿಂದ ಬಂದಂತಹ ಕಾರು ದಂಪತಿಗಳಿದ್ದ ಬೈಕ್ ಗೆ ಡಿಕ್ಕಿ ಹೊಡೆದು ಭೀಕರವಾಗಿ ಈ ಅಪಘಾತ ಸಂಭವಿಸಿದೆ.
ಆನ್ ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಿ : https://forms.gle/APPtk8M3ZDk2oMka6
ಅಪಘಾತದ ತೀವ್ರತೆಗೆ ಬೈಕ್ ಎತ್ತರಕ್ಕೆ ಹಾರಿ ಕೆಳಬಿದ್ದಿದೆ ಎನ್ನಲಾಗಿದೆ. ಬೈಕ್ ಚಾಲಕ ಆನಂದ್ ಅವರ ತಲೆ ಮತ್ತು ಕೈಕಾಲುಗಳಿಗೆ ಗಂಭೀರವಾಗಿ ಗಾಯವಾದ ಪರಿಣಾಮ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅವರೊಂದಿಗಿದ್ದ ಪತ್ನಿ ರಂಜಿತಾ ಕೂಡ ಗಾಯಗೊಂಡಿದ್ದು ಅವರಿಗೆ ತಕ್ಷಣವೇ ಬೀರೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ದೊರಕಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮೃತ ಯುವಕನನ್ನು ಕಳೆದುಕೊಂಡಿರುವ ಕುಟುಂಬಸ್ಥರು ಹಾಗೂ ಸಂಬಂಧಿಕರು, ಸ್ನೇಹಿತರು ಅತೀವವಾದ ಬೇಸರವನ್ನು ವ್ಯಕ್ತಪಡಿಸಿದ್ದಾರೆ.
ಪೋಕ್ಸೋ ಪ್ರಕರಣದ ಅಡಿಯಲ್ಲಿ ಬಂಧಿತನಾಗಿದ್ದವನಿಗೆ ಶಿಕ್ಷೆ ವಿಧಿಸಿದ ಕೋರ್ಟ್
ಶಿವಮೊಗ್ಗ : ಪುಟ್ಟ ಬಾಲಕಿಗೆ ಚಾಕಲೇಟ್ ನೀಡುವುದಾಗಿ ಆಸೆ ತೋರಿಸಿ ಮನೆಗೆ ಕರೆದೊಯ್ದು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ ನ್ಯಾಯಾಲಯವು ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಲಿಂಗರಾಜ್ ಅಲಿಯಾಸ್ ನವೀನ್ ಎಂಬ 18 ವರ್ಷದ ಯುವಕ 2019 ರಲ್ಲಿ ಆರು ವರ್ಷದ ಪುಟ್ಟ ಬಾಲಕಿಯೋರ್ವಳಿಗೆ ಮನೆಗೆ ಕರೆದುಕೊಂಡು ಹೋಗಿ ಚಾಕಲೇಟ್ ನೀಡುವುದಾಗಿ ಕರೆದುಕೊಂಡು ಹೋಗಿ ಲೈಂಗಿಕವಾಗಿ ದೌರ್ಜನ್ಯವೆಸಗಿದ್ದ. ಘಟನಾ ಸಂಬಂಧ ಶಿವಮೊಗ್ಗದ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ಜೆ.ಎಸ್ ಮೋಹನ್ ಆರೋಪಿಯ ಮೇಲಿನ ಆರೋಪ ಸಾಬೀತಾದ ಹಿನ್ನೆಲೆ 20 ವರ್ಷಗಳ ಕಾಲ ಕಠಿಣ ಶಿಕ್ಷೆ ಹಾಗೂ 50,000 ರೂಪಾಯಿ ಮೊತ್ತದ ದಂಡವಿಧಿಸಿದ್ದಾರೆ. ಒಂದುವೇಳೆ ಆರೋಪಿಯ ಬಳಿ ದಂಡ ಕಟ್ಟಲು ಆಗದೇ ಹೋದಲ್ಲಿ ಹೆಚ್ಚುವರಿಯಾಗಿ ಆರು ತಿಂಗಳುಗಳಕಾಲ ಸಾದಾ ಕಾರಾಗೃಹ ಶಿಕ್ಷೆಗೆ ಗುರಿ ಪಡಿಸಲಾಗುವುದು ಎಂದು ಆದೇಶಿಸಿದ್ದಾರೆ. ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ವಾದ ಮಂಡನೆ ಮಾಡಿದರು.
ಈ ರೀತಿಯ ಪ್ರಕರಣಗಳಲ್ಲಿ ಭಾಗಿಯಾಗುವವರ ಮೇಲೆ ಸೂಕ್ತ ಹಾಗೂ ನಿರ್ದಾಕ್ಷಿಣ್ಯ ಕಾನೂನು ಕ್ರಮಗಳನ್ನು ಕೈಗೊಂಡು ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕೆಂದು ಸಾರ್ವಜನಿಕರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.






0 Comments