ಹಾಸನ : (ನ್ಯೂಸ್ ಮಲ್ನಾಡ್ ವರದಿ) ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸರ್ಕಾರಿ ನೌಕರನೋರ್ವ ಸಾವನ್ನಪ್ಪಿರುವ ದುರ್ಘಟನೆ ಬೆಳಕಿಗೆ ಬಂದಿದೆ.
ಹಾಸನ ನಗರದ ಆಕಾಶವಾಣಿ ಪಕ್ಕದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಎದುರಿನ ರಸ್ತೆಯಲ್ಲಿ ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಬೈಕ್ ಸವಾರ ದಾರುಣವಾಗಿ ಅಂತ್ಯಕಂಡಿದ್ದಾನೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಮಲ್ಲಶೆಟ್ಟಿ (56) ಸಾವನ್ನಪ್ಪಿರುವ ವ್ಯಕ್ತಿ. ಅಪಘಾತದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಡಿಕ್ಕಿ ಹೊಡೆದ ಬೈಕ್ ಸವಾರರು ಕೂಡಲೇ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ.
ಕಛೇರಿಗೆ ತೆರಳುವ ಸಲುವಾಗಿ ಬೈಕ್‌ನಲ್ಲಿ ಕ್ರಾಸ್ ಮಾಡುತ್ತಿದ್ದಾಗ ಹಿಂಬದಿಯಿಂದ ವೇಗವಾಗಿ ಬಂದ ಬೈಕ್ ಕ್ಷಣಾರ್ಧದಲ್ಲಿ ನೌಕರನ ಬೈಕ್ ಗೆ ಗುದ್ದಿ ಅಲ್ಲಿಂದ ಕಾಲ್ಕಿತ್ತಿದ್ದಾರೆ ಎನ್ನಲಾಗಿದೆ. ಈ ಘಟನೆಯನ್ನು ಕಂಡ ಇನ್ನೋರ್ವ ಬೈಕ್ ಸವಾರ ರಸ್ತೆಗೆ ಬಿದ್ದು ಸಣ್ಣಪುಟ್ಟ ಗಾಯಕ್ಕೀಡಾಗಿದ್ದಾರೆ. ಎಂ.ಜಿ ರಸ್ತೆ ಮತ್ತು ಸಾಲಗಾಮೆ ರಸ್ತೆಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯನ್ನು ಇತ್ತೀಚೆಗೆ ಅಗಲೀಕರಣ ಮಾಡಲಾಗಿದ್ದು ರಸ್ತೆಗೆ ಡಾಂಬರ್ ಹಾಕಲಾಗಿದೆ. ಆದರೆ ಎಲ್ಲೂ ಕೂಡ ಹಂಪ್ಸ್ ಇಲ್ಲದ ಕಾರಣ ಬೈಕ್ ಸವಾರರು ಯಾವುದೇ ಅಡೆತಡೆ ಇಲ್ಲದೆ ವೇಗವಾಗಿ ಓಡಾಡುತ್ತಿರುವ ಕಾರಣ ಈ ರಸ್ತೆಯಲ್ಲಿ ವಿವಿಧ ಕಾಲೇಜು, ಹಾಸ್ಟೆಲ್‌ಗಳಿಗೆ ಹೋಗುವ ವಿದ್ಯಾರ್ಥಿಗಳು, ವಯಸ್ಸಾದವರು ಮಕ್ಕಳು ಸೇರಿದಂತೆ ಅನೇಕರು ನಿತ್ಯವೂ ಸಂಚರಿಸುತ್ತಿರುತ್ತಾರೆ ಅಂತೆಯೇ ಸಾರ್ವಜನಿಕರೂ ಓಡಾಡುತ್ತಿರುವ ರಸ್ತೆಯಾದ ಕಾರಣ ರಸ್ತೆ ಮಧ್ಯೆ ಅಲ್ಲಲ್ಲಿ ಹಂಪ್ಸ್ ಹಾಕಬೇಕೆಂದು ಸಾರ್ವಜನಿಕರು ಕೋರಿದ್ದಾರೆ.
ಮೃತವ್ಯಕ್ತಿಯನ್ನು ಕಳೆದುಕೊಂಡಿರುವ ಮನೆಯವರು, ಸಂಬಂಧಿಕರು ಹಾಗೂ ಗೆಳೆಯವೃದಂದ ಸಾವಿನ ಕುರಿತಾಗಿ ತೀವ್ರ ಸಂತಾಪವನ್ನು ವ್ಯಕ್ತಪಡಿಸಿದೆ.
ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ಕಂದಕಕ್ಕೆ ಉರುಳಿದ ಕಾರು ; ಮೂವರಿಗೆ ಗಾಯ
ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ಕೊಟ್ಟಿಗೆಹಾರದಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ನಿಸರ್ಗ ಹೋಟೆಲ್ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿದೆ.
ಕಾರು ಮಂಗಳೂರಿನಿಂದ ಚಿಕ್ಕಮಗಳೂರು ಕಡೆಗೆ ತೆರಳುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಗಾಯಕ್ಕೀಡಾಗಿದ್ದಾರೆ. ಕೂಡಲೇ ಅವರನ್ನು ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಈ ಸಂಬಂಧ ಬಣಕಲ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆನ್ ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಿ : https://forms.gle/APPtk8M3ZDk2oMka6






0 Comments