ಬೆಂಗಳೂರಿನಿಂದ ಶೃಂಗೇರಿಗೆ ಪ್ರಯಾಣಿಕರನ್ನು ಕರೆತರುತ್ತಿದ್ದ ರಾಜಾಹಂಸ ಬಸ್ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಮುತ್ತಿನಕೊಪ್ಪದ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದೆ.
ಇದನ್ನೂ ಓದಿ : ತುಂಗಾ ನದಿಗೆ ಈಜಲು ತೆರಳಿದ್ದ ಯುವಕನ ದುರ್ಮರಣ
ಅದೃಷ್ಟವಶಾತ್ ಎಂಬಂತೆ ಬಸ್ಸಿನಲ್ಲಿ ಪ್ರಯಾಣ ನಡೆಸುತ್ತಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಇಂದು ಬೆಳಗ್ಗೆ 4.00 ಗಂಟೆಯ ಸಮಯದಲ್ಲಿ ಈ ಅವಘಡ ನಡೆದಿದ್ದು ಪ್ರಯಾಣಿಕರು ಕ್ಷೇಮವಾಗಿದ್ದಾರೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘವು ಸೇವಾ ಕಾರ್ಯಗಳೊಂದಿಗೆ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಒತ್ತು ನೀಡುತ್ತಿದೆ ; ಉಮೇಶ್ ರಾವ್
ಜಯಪುರ : ಸೇವಾ ಕಾರ್ಯಗಳ ಜೊತೆಗೆ ಸಮಾಜದ ಹಿತಕ್ಕಾಗಿ ಶ್ರಮಿಸುವ ರಾಷ್ಟ್ರೀಯ ಸ್ವಯಂಸೇವಕ ಸಂಘವು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದೆ ಎಂದು ಹರಿಹರಪುರ ಗುರುಕುಲದ ವ್ಯವಸ್ಥಾಪಕರಾದ ಉಮೇಶ್ ಅವರು ತಿಳಿಸಿದರು.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಗ್ರಾಮಪಂಚಾಯತ್ ವ್ಯಾಪ್ತಿಯ ಚೌಡಿಕಟ್ಟೆ ಶಾಲೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಅವಶ್ಯಕವಾಗಿರುವ ಪರಿಕರಗಳನ್ನು ವಿತರಿಸುವ ಸಂದರ್ಭದಲ್ಲಿ ಮಾತನಾಡಿದ ಅವರು ಶಿಕ್ಷಣದಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ವಂಚನೆಗೊಳಗಾಗಬಾರದು, ಮಲೆನಾಡಿನ ಬಹುತೇಕ ಪೋಷಕರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದು ವಿದ್ಯಾರ್ಥಿಗಳಿಗೆ ಎಲ್ಲಾ ಪರಿಕರಗಳನ್ನು ಒದಗಿಸುವಲ್ಲಿ ಅವರು ಕೂಡ ಕೆಲವೊಂದು ತೊಡಕುಗಳನ್ನು ಎದುರಿಸುತ್ತಿದ್ದಾರೆ, ಇದನ್ನು ಮನಗಂಡು ಸೇವಾ ಸಂಸ್ಥೆಗಳ ಸಹಕಾರದಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳನ್ನು ವಿಸ್ತರಿಸುತ್ತಿದ್ದೇವೆ ಎಂದರು.
ಯೂತ್ ಫಾರ್ ಸೇವಾ ಸಂಸ್ಥೆ, ಜಯಪುರದ ಸ್ಪಂದನ ಸ್ವಯಂಸೇವಾ ಸಂಸ್ಥೆ ಇವರ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಶೈಕ್ಷಣಿಕ ಪರಿಕರಗಳ ವಿತರಣೆ ನಡೆಯಿತು.
ಈ ಕುರಿತಾಗಿ ಮಾತನಾಡಿದ ಸ್ಪಂದನಾ ಸಂಸ್ಥೆಯ ಅಧ್ಯಕ್ಷ ಕಿಬ್ಳಿ ಪ್ರಸನ್ನ ಕುಮಾರ್, ಮೆಗುಂದ ಹೋಬಳಿ ವ್ಯಾಪ್ತಿಯ ಗ್ರಾಮೀಣ ಭಾಗದ ಮಕ್ಕಳನ್ನು ಗುರುತಿಸಿ ಶೈಕ್ಷಣಿಕವಾಗಿ ಅವರಿಗೆ ಪೂರಕ ಸಹಕಾರಗಳನ್ನು ನೀಡುವುದರ ಸಲುವಾಗಿ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಪರಿಕರಗಳನ್ನು ನೀಡುತ್ತಿದ್ದೇವೆ ಎಂದರು.
ಮೇಗುಂದಾ ಹೋಬಳಿ ವ್ಯಾಪ್ತಿಯ ಸರ್ಕಾರಿ ಶಾಲೆಗಳ ಮಕ್ಕಳಿಗೆ ಉಚಿತ ನೋಟ್ ಪುಸ್ತಕ, ರೈನ್ ಕೋಟ್, ಛತ್ರಿ,ಬ್ಯಾಗ್ ಗಳ ವಿತರಣೆಯನ್ನು ಮಾಡಲಿದ್ದೇವೆ, ವಿದ್ಯೆಗೆ ಪ್ರೋತ್ಸಾಹ ನೀಡುತ್ತಾ ಈ ಭಾಗದ ಮಕ್ಕಳ ಕಲಿಕೆಗೆ ಪೂರಕವಾಗುವ ಎಲ್ಲಾ ಕಾರ್ಯಗಳನ್ನು ಮಾಡಲಾಗುವುದು ಎಂದು ಸ್ಪಂದನ ಸಂಸ್ಥೆಯ ಗೌರವಾಧ್ಯಕ್ಷ ಮಣಿಕಂಠನ್ ಕಂದಸ್ವಾಮಿ ತಿಳಿಸಿದರು.
ಈ ಸಂದರ್ಭದಲ್ಲಿ ಸತ್ಯಸಾಯಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಜಯವಂತ ಭಟ್, ಕಾರ್ಯದರ್ಶಿ ಅರ್ಪಿತ, ಸುಂದರೇಶ್, ಸಂತೋಷ್, ಅಶೋಕ್, ಮಂಜುನಾಥ್, ಹಾಗೂ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.






0 Comments