ಹಾಸನ : (ನ್ಯೂಸ್ ಮಲ್ನಾಡ್ ವರದಿ) ಆಹಾರವನ್ನರಿಸಿ ಕಾಡಾನೆಯೊಂದು ಕಾಡಿನಿಂದ ನಾಡಿಗೆ ಬಂದು ಮನೆಯ ಬಾಗಿಲನ್ನು ಮುರಿದು ದಾಳಿ ನಡೆಸಿರುವ ಘಟನೆ ವರದಿಯಾಗಿದೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೆಸಗುಲಿ ಗ್ರಾಮದ ಮನೆಯೊಂದಕ್ಕೆ ಮಧ್ಯರಾತ್ರಿಯ ವೇಳೆಯಲ್ಲಿ ಮನೆಯ ಬಾಗಿಲನ್ನು ಮುರಿದು ಒಳನುಗ್ಗಲು ಆನೆ ಯತ್ನಿಸಿದೆ. ಬಾಗಿಲು ಮುರಿಯುವ ಶಬ್ದ ಕೇಳಿಸುತ್ತಿದ್ದಂತೆಯೆ ಎಚ್ಚೆತ್ತ ಮನೆ ಮಂದಿ ಜೋರಾಗಿ ಕೂಗಲಾರಂಭಿಸಿದ್ದಾರೆ, ಜನರ ಕೂಗಾಟಕ್ಕೆ ಆನೆಯು ಸ್ಥಳದಿಂದ ಕಾಲ್ಕಿತ್ತಿದೆ ಎನ್ನಲಾಗಿದೆ.
ಈ ದಾಳಿಯಿಂದ ಆತಂಕಕ್ಕೀಡಾಗಿರುವ ಸ್ಥಳೀಯ ಗ್ರಾಮಸ್ಥರು ಬಹಳ ಹಿಂದಿನಿಂದಲೂ ಸರ್ಕಾರವು ಆನೆ ದಾಳಿಯನ್ನು ನಿಯಂತ್ರಿಸುವಲ್ಲಿ ಈ ಕುರಿತಾಗಿ ಸೂಕ್ತ ನಿರ್ಧಾರ ಮತ್ತು ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲವಾಗಿದೆ ಇಲ್ಲಿನ ಜನರಿಗೆ ಜೀವಭಯ ಎದುರಾಗಿದೆ ಎಂದು ಜನರು ತಮಗಾಗುತ್ತಿರುವ ಸಮಸ್ಯೆಯ ಕುರಿತು ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಒಂದೆಡೆ ಬೆಳೆದ ಬೆಳೆಗಳನ್ನು ಆನೆಗಳು ನಾಶಪಡಿಸುತ್ತಿದ್ದರೆ ಇನ್ನೊಂದೆಡೆ ಜನರು ಆನೆದಾಳಿಯಿಂದ ಜೀವ ಉಳಿಸಿಕೊಳ್ಳಲು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಸರ್ಕಾರ ಹಾಗೂ ಜನ ಪ್ರತಿನಿಧಿಗಳು ಈ ಕುರಿತು ಗಮನ ಹರಿಸಬೇಕೆಂದು ಸ್ಥಳೀಯರು ಕೋರಿದ್ದಾರೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೈಕ್ ಕಳ್ಳತನ ನಡೆಸಿದ್ದ ಆರೋಪಿಗಳು ಸೆರೆ :
ಶಿವಮೊಗ್ಗ : ಬೈಕ್ ಗಳನ್ನು ಕಳ್ಳತನ ಮಾಡುತ್ತಿದ್ದ ಮೂವರು ಖತರ್ನಾಕ್ ಕಳ್ಳರನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳ್ಳರು ತಮ್ಮ ಕೈಚಳಕವನ್ನು ತೋರಿ ಕಳ್ಳತನ ನಡೆಸಿದ್ದಾರೆ ಎನ್ನಲಾಗಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಪೊಲೀಸರು ಈ ಕಾರ್ಯಾಚರಣೆಯನ್ನು ನಡೆಸಿದ್ದು ಮೂವರು ಕಳ್ಳರನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಶಿಕಾರಿಪುರ ತಾಲೂಕಿನ ಅಂಜನಾಪುರದ ಸಮೀರ್, ಶಿವಮೊಗ್ಗದ ಶಾಂತಿನಗರದ ಸೊಹೇಲ್, ಟ್ಯಾಂಕ್ ಮೊಹಲ್ಲಾದ ಜುನೈದ್ ಖಾನ್ ಎಂದು ಗುರುತಿಸಲಾಗಿದೆ.
ಈ ಮೂವರು ಆರೋಪಿಗಳು ಸಾಗರ, ಭದ್ರಾವತಿ, ದಾವಣಗೆರೆ, ಹರಿಹರ, ಹಾಸನ ಜಿಲ್ಲೆಗಳಲ್ಲಿ ಬೈಕ್ ಕಳ್ಳತನ ನಡೆಸಿದ್ದರು ಎನ್ನಲಾಗಿದೆ. ಈ ಸಂಬಂಧ ಪೊಲೀಸರು ಆರೋಪಿಗಳ ವಿಚಾರಣೆ ನಡೆಸುತ್ತಿದ್ದು ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.






0 Comments