ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಮನೆಗೆ ನುಗ್ಗಿ ಕಳ್ಳರು ಮನೆ ದರೋಡೆ ಮಾಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಇದನ್ನೂ ಓದಿ : ರಸ್ತೆ ನಿಯಮವನ್ನು ಉಲ್ಲಂಘಿಸಿ ವೀಲಿಂಗ್ ಮಾಡುತ್ತಿದ್ದವರ ವಿರುದ್ದ ಪ್ರಕರಣ ದಾಖಲಿಸಿದ ಪೊಲೀಸರು
ಚಿಕ್ಕಮಗಳೂರಿನ ವಿಜಯನಗರ ಬಡಾವಣೆಯಲ್ಲಿರುವ ನಂಜುಂಡಯ್ಯ ಮಾಸ್ಟರ್ ಅವರ ಮನೆಗೆ ನುಗ್ಗಿರುವ ಕಳ್ಳರು ಮನೆ ಬಾಗಿಲಿನ ಬೀಗ ಒಡೆದು ಮನೆ ದರೋಡೆ ಮಾಡಿದ್ದಾರೆ.
ಮನೆಯವರು ಬೆಂಗಳೂರಿಗೆ ಹೋದ ಸಂದರ್ಭವನ್ನು ನೋಡಿಕೊಂಡು ನುಗ್ಗಿರುವ ಕಳ್ಳರು ಮನೆಯಲ್ಲಿಟ್ಟಿದ್ದ ಚಿನ್ನಾಭರಣ ಹಾಗೂ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ.
ಘಟನಾ ಸಂಬಂಧ ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು ಧಾವಿಸಿ ಈ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ. ಡಿವೈಎಸ್ಪಿ ಪ್ರಭು ಸ್ಥಳಕ್ಕೆ ಭೇಟಿ ನೀಡಿ ಈ ಸಂಬಂಧ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದ ಶೃಂಗೇರಿ ಕಡೆಗೆ ಬರುತ್ತಿದ್ದ ಬಸ್ :
ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಶೃಂಗೇರಿ ಕಡೆಗೆ ಬರುತ್ತಿದ ಬಸ್ ಒಂದು ಮರಕ್ಕೆ ಗುದ್ದಿರುವ ಘಟನೆ ನಡೆದಿದೆ.
ಬೆಂಗಳೂರಿನಿಂದ ಶೃಂಗೇರಿಗೆ ಪ್ರಯಾಣಿಕರನ್ನು ಕರೆತರುತ್ತಿದ್ದ ರಾಜಾಹಂಸ ಬಸ್ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಮುತ್ತಿನಕೊಪ್ಪದ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಗುದ್ದಿದೆ.
ಅದೃಷ್ಟವಶಾತ್ ಎಂಬಂತೆ ಬಸ್ಸಿನಲ್ಲಿ ಪ್ರಯಾಣ ನಡೆಸುತ್ತಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಇಂದು ಬೆಳಗ್ಗೆ 4.00 ಗಂಟೆಯ ಸಮಯದಲ್ಲಿ ಈ ಅವಘಡ ನಡೆದಿದ್ದು ಪ್ರಯಾಣಿಕರು ಕ್ಷೇಮವಾಗಿದ್ದಾರೆ.






0 Comments