ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ಕೊಟ್ಟಿಗೆಹಾರದಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ನಿಸರ್ಗ ಹೋಟೆಲ್ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಂದಕಕ್ಕೆ ಉರುಳಿದೆ.
ಕಾರು ಮಂಗಳೂರಿನಿಂದ ಚಿಕ್ಕಮಗಳೂರು ಕಡೆಗೆ ತೆರಳುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಗಾಯಕ್ಕೀಡಾಗಿದ್ದಾರೆ. ಕೂಡಲೇ ಅವರನ್ನು ಸ್ಥಳೀಯರ ಸಹಕಾರದಿಂದ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಈ ಸಂಬಂಧ ಬಣಕಲ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ತನು ಕೊಟ್ಟಿಗೆಹಾರ, ವರದಿಗಾರರು
ಕೊಡಗು ಹಾಗೂ ಹಾಸನ ಜಿಲ್ಲೆಯ ಹಲವು ಕಡೆಗಳಲ್ಲಿ ಕಂಪಿಸಿದ ಭೂಮಿ
ಹಾಸನ : ಹಾಸನ ಜಿಲ್ಲೆಯ ಕೆಲಭಾಗಗಳಲ್ಲಿ ಭೂಕಂಪನವಾಗಿರುವ ಅನುಭವ ಸ್ಥಳೀಯರಿಗುಂಟಾಗಿದೆ.
ಹಾಸನ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಭೂಕಂಪನವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅರಕಲಗೂಡು ತಾಲೂಕಿನ ಹಣೆಮಾರನಹಳ್ಳಿ, ಕಾರಹಳ್ಳಿ, ಮುದ್ದನಹಳ್ಳಿಯಲ್ಲಿ ಇಂದು ಬೆಳಗಿನಜಾವ 4.38ಕ್ಕೆ ಭೂಕಂಪನವಾಗಿದೆ.
ಹಾಸನ ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದೆ. ಅರಕಲಗೂಡು ತಾಲೂಕಿನ ಹಳ್ಳಿಗಳಲ್ಲಿ ಭೂಮಿ ಕಂಪಿಸಿದ್ದು, ಜನ ಆತಂಕಗೊಂಡು ತಕ್ಷಣವೇ ಮನೆಯಿಂದ ಹೊರಬಂದಿದ್ದಾರೆ.
ಅಂತೆಯೇ ಕೊಡಗಿನಲ್ಲೂ ಇಂದು ಬೆಳಗ್ಗೆ ಭೂಕಂಪನವಾಗಿದೆ. ಕೊಡಗಿನ ಗೌಡಳ್ಳಿ, ಮೆಗಳ್ಳಿ ಸೇರಿದಂತೆ ವಿವಿಧ ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವ ಕೊಡಗಿನ ಜನರಿಗಾಗಿದೆ.
ಆನ್ ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಿ : https://forms.gle/APPtk8M3ZDk2oMka6
ಈ ಭೂ ಕಂಪನದ ಕೇಂದ್ರಬಿಂದು ಹಾಸನವಾಗಿದ್ದು ಒಂದೇ ಸಮಯದಲ್ಲಿ ಎರಡು ಕಡೆಗಳಲ್ಲೂ ಭೂಕಂಪನದ ಅನುಭವ ಅನೇಕ ಜನರಿಗಾಗಿದೆ.






0 Comments