ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಬಹುತೇಕ ಕಿರಿದಾದ ರಸ್ತೆಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಅನೇಕ ರಸ್ತೆ ಅಪಘಾತಗಳು ಸಂಭವಿಸಿದೆ, ಈ ಅಪಘಾತಗಳನ್ನು ನಿಯಂತ್ರಿಸುವ ಸಲುವಾಗಿ ಜನರಿಗೆ ಅರಿವು ಮೂಡಿಸುವ ಕೆಲಸವನ್ನು ಇಲಾಖೆ ಮಾಡುತ್ತಿದೆ. ಆದರೂ ಕಳೆದ ನಾಲ್ಕು ವರ್ಷಗಳಲ್ಲಿ ಅನೇಕ ರಸ್ತೆ ಅಪಘಾತಗಳು ಸಂಭವಿಸಿದೆ.
ಈ ಭಾಗದಲ್ಲಿ ಸಂಭವಿಸುವ ರಸ್ತೆ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅನೇಕ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ. ಆದರೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಸಂಭವಿಸಿದ ಅಪಘಾತದಲ್ಲಿ ಒಟ್ಟು 672 ಮಂದಿ ಸಾವನ್ನಪ್ಪಿದ್ದಾರೆ. ಈ ಅಪಘಾತಗಳಿಗೆ ಅತೀ ವೇಗದ ಚಾಲನೆ ಒಂದು ಕಾರಣವಾದರೆ ಕಿರಿದಾದ ರಸ್ತೆಗಳು, ಮಳೆಗಾಲದ ಸಮಯದಲ್ಲಿ ಉಂಟಾಗುವ ರಸ್ತೆ ಅವ್ಯವಸ್ಥೆಯಿಂದ ಸಂಭವಿಸುವ ಅಪಘಾತ, ಅಜಾಗರೂಕತೆಯ ಚಾಲನೆ, ವಾಹನ ಚಾಲನೆ ನಡೆಸುವ ಸಂದರ್ಭದಲ್ಲಿ ಮೊಬೈಲ್ ಬಳಕೆಯಿಂದ ಮೃತಪಟ್ಟಿರುವುದು, ಮದ್ಯಪಾನ ಸೇವನೆ ಮಾಡಿಕೊಂಡು ಚಾಲನೆ ಮಾಡಿದ ಹೆಚ್ಚಿನವರು ಅಪಘಾತಕ್ಕೀಡಾಗಿ ಮೃತಪಟ್ಟಿದ್ದಾರೆ.
ಸವಾರರು ರಸ್ತೆ ನಿಯಮಗಳನ್ನು ಪಾಲಿಸಿಕೊಂಡು, ಅತೀ ಹೆಚ್ಚಿನ ಸುರಕ್ಷತಾ ಕ್ರಮಗಳನ್ನು ಕೈಗೊಂಡು ವಾಹನ ಚಾಲನೆ ಮಾಡಬೇಕು, ಅಪಘಾತ ಉಂಟಾಗಲು ಸರಿಯಾಗಿ ನಿದ್ರೆ ಮಾಡದೇ ಇರುವುದು ಹಾಗೂ ಮದ್ಯ ಸೇವನೆ ಮುಖ್ಯಕಾರಣ ಎನ್ನಲಾಗಿದೆ.
2019 ರಿಂದ ಈ ವರೆಗೆ ಜಿಲ್ಲೆಯಲ್ಲಿ 3435 ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿದ್ದು 672 ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ದೊರೆತಿದೆ. ಅಪಘಾತವನ್ನು ತಡೆಯಲು ಇಲಾಖೆಯು ಈಗಾಗಲೇ ಎಲ್ಲಾ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು ಸುರಕ್ಷತಾ ಸಮಿತಿಯನ್ನು ರಚನೆಮಾಡಿ, ಈ ಮೂಲಕ ಕಾರ್ಯ ನಿರ್ವಹಿಸುತ್ತಿದೆ.





0 Comments