ಬಾಳೆಹೊನ್ನೂರು : (ನ್ಯೂಸ್ ಮಲ್ನಾಡ್ ವರದಿ) ಜೆ.ಡಿ.ಎಸ್ ಪಕ್ಷದ ಮುಖಂಡ ಬಾಳೆಹೊನ್ನೂರಿನ ಜಿನ್ನು ಪೂಜಾರಿಯವರು ದೈವಾಧೀನರಾಗಿದ್ದಾರೆ.

ಎನ್ ಆರ್ ಪುರ  ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾಗಿದ್ದ ಜಿನ್ನು ಪೂಜಾರಿಯವರು,ಹಲವಾರು ಸಾಮಾಜಿಕ ಕೆಲಸಗಳಲ್ಲಿ, ಅಭಿವೃದ್ಧಿ ಕಾರ್ಯಗಳಲ್ಲಿ ಕ್ರಿಯಾಶೀಲರಾಗಿ ತೊಡಗಿಕೊಂಡು ಜನಹಿತಕ್ಕಾಗಿ ಶ್ರಮಿಸಿದ್ದರು. ಜನರ ಉತ್ತಮ ಜೀವನಕ್ಕಾಗಿ ತಾವು ಕ್ರಿಯಾಶೀಲರಾಗಿ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಕೊಂಡು ಜನಹಿತಕ್ಕಾಗಿ ಶ್ರಮಿಸಿದ್ದರು, ರಾಜಕೀಯದಲ್ಲಿ ಜೆ.ಡಿ.ಎಸ್ ಪಕ್ಷವನ್ನು ಪ್ರತಿನಿಧಿಸುತ್ತಿದ್ದ ಅವರು ಮಲೆನಾಡ ಗಾಂಧಿ ಎಂದೇ ಹೆಸರುವಾಸಿಯಾಗಿರುವ ಹೆಚ್.ಜಿ ಗೋವಿಂದೇಗೌಡರ ಅನುಯಾಯಿಯಾಗಿದ್ದರು. 

ಇದನ್ನೂ ಓದಿ : ಕ್ಷೇತ್ರದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಶಾಸಕರು, ಸಂಸದರು ವಿಫಲರಾಗಿದ್ದಾರೆ : ಟಿ.ಸಿ ರಾಜೇಂದ್ರ

ಜೆಡಿಎಸ್ ರಾಜ್ಯ ಉಪಾಧ್ಯಕ್ಷರಾದ ಸುಧಾಕರ್ ಎಸ್ ಶೆಟ್ಟಿ ಅವರು ಶೃಂಗೇರಿ ಕ್ಷೇತ್ರಕ್ಕೆ ಬಂದ ನಂತರವೂ ಜೆಡಿಎಸ್ ಪಕ್ಷ ಸಂಘಟನೆ ಕಟ್ಟುವಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಅನಾರೋಗ್ಯದಿಂದ ಅಗಲಿರುವ ಜಿನ್ನು ಪೂಜಾರಿಯವರ ಕುರಿತು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ್ ಶೆಟ್ಟಿ ಸೇರಿದಂತೆ ಅನೇಕ ಪಕ್ಷದ ಮುಖಂಡರು, ಆತ್ಮೀಯರು ಹಾಗೂ ಅಪಾರವಾದ ಗೆಳೆಯರ ಬಳಗ, ಕುಟುಂಬಸ್ಥರು ದುಃಖ ವ್ಯಕ್ತಪಡಿಸಿದ್ದಾರೆ.

ಕ್ಷೇತ್ರದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಶಾಸಕರು, ಸಂಸದರು ವಿಫಲರಾಗಿದ್ದಾರೆ : ಟಿ.ಸಿ ರಾಜೇಂದ್ರ : 

ಶೃಂಗೇರಿ :  ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ದಿ ಕುಂಠಿತಗೊಂಡಿದೆ, ಅಧಿಕಾರ ಹೊಂದಿದ ಶಾಸಕರು ಹಾಗೂ ಸಂಸದರು ಜನರಿಗೆ ಸೂಕ್ತವಾದ ಅಭಿವೃದ್ದಿಕಾರ್ಯ ಹಾಗೂ ನ್ಯಾಯ ಒದಗಿಸುವಲ್ಲಿ ವಿಫಲರಾಗಿದ್ದಾರೆ ಎಂದು ಜನತಾ ಪಕ್ಷದ ಪದಾಧಿಕಾರಿಗಳು ತಿಳಿಸಿದರು.

ಶೃಂಗೇರಿಯ ಕೆವಿಆರ್ ರಸ್ತೆಯಲ್ಲಿರುವ ಹೋಟೆಲ್ ಅದ್ವೈತ್ ಲ್ಯಾನ್ಸರ್ ನ ಸಭಾಂಗಣದಲ್ಲಿ ಆಯೋಜಿಸಿದ್ದ ಕ್ಷೇತ್ರ ಜನತಾ ಪಕ್ಷದ ಅಧಿಕಾರ ಪದಗ್ರಹಣ ಸಮಾರಂಭದಲ್ಲಿ ಕ್ಷೇತ್ರದ ಅಭಿವೃದ್ದಿಯ ಕುರಿತು ಮಾತನಾಡಿದ ಜನತಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಸಿ ರಾಜೇಂದ್ರ ಕ್ಷೇತ್ರದ ಜ್ವಲಂತ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಶಾಸಕರು ಹಾಗೂ ಸಂಸದರು ವಿಫಲರಾಗಿದ್ದಾರೆ. ಅತ್ಯವಶ್ಯಕವಾದ ನೂರು ಹಾಸಿಗೆಗಳ ಆಸ್ಪತ್ರೆ, 110 ಕೆ.ವಿ ವಿದ್ಯುತ್ ಸ್ಥಾವರ, ಕುದುರೆಮುಖ ರಾಷ್ಟ್ರೀಯ ಉದ್ಯಾನವನದೊಳಗಿರುವ ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ದಿ ಕುರಿತಾದ ಸಮಸ್ಯೆ, 24 ಗಂಟೆ ಕುಡಿಯುವ ನೀರು ಸೇರಿದಂತೆ ಈ ಭಾಗದ ಜನರಿಗೆ ಗಂಭೀರವಾಗಿ ಕಾಡುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಂಪೂರ್ಣವಾಗಿ ವಿಫಲರಾಗಿದ್ದಾರೆ, ಅವರ ನಿರ್ಲಕ್ಷ್ಯದಿಂದಾಗಿ ಅನೇಕ ಸಮಸ್ಯೆಗಳು ತಲೆದೋರಿದೆ ಎಂದರು. 

ಆನ್ ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಿ : https://forms.gle/APPtk8M3ZDk2oMka6

ಅಂತೆಯೇ ಈ ಬಾರಿ ಜನರು ಮೂರೂ ಪಕ್ಷಗಳನ್ನು ಬದಿಗಿಟ್ಟು ನಮ್ಮ ಜನತಾ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂಬ ಧೃಢ ವಿಶ್ವಾಸವಿದೆ ಮುಂದಿನ ಚುನಾವಣೆಯಲ್ಲಿ ಯಾವ ಪಕ್ಷವೂ ಸಂಪೂರ್ಣ ಬಹುಮತಗಳಿಸಲು ಸಾಧ್ಯವಿಲ್ಲ ಕನಿಷ್ಠ 23 ಶಾಸಕರನ್ನು ಈ ಬಾರಿ ವಿಧಾನಸಭೆಗೆ ಕಳುಹಿಸುವುದು ಜನತಾ ಪಕ್ಷದ ಧೃಢ ಸಂಕಲ್ಪವಾಗಿದೆ ಎಂದರು ಹಾಗೂ ಈ ನಿಟ್ಟಿನಲ್ಲಿ ಸಂಪೂರ್ಣವಾಗಿ ಶ್ರಮವಹಿಸುವುದಾಗಿ ತಿಳಿಸಿದರು. 

ಜನತಾ ಪಕ್ಷದ ಕ್ಷೇತ್ರಾಧ್ಯಕ್ಷರಾಗಿ ಆಯ್ಕೆಗೊಂಡ ಕೆ.ಎಸ್ ವೆಂಕಪ್ಪಾಚಾರ್ಯ ರಾಜ್ಯದಲ್ಲಿ ನಾಲ್ಕನೇ ಶಕ್ತಿಯಾಗಿ ಜನತಾ ಪಕ್ಷ ಹೊರಹೊಮ್ಮಲಿದ್ದು ಶೃಂಗೇರಿ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಜನತಾ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಸಿ ರಾಜೇಂದ್ರ, ರಾಜ್ಯ ಉಪಾಧ್ಯಕ್ಷ ಹೊನ್ನೇಗೌಡ, ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ರಜಿತ್ ಗೌಡ ಬೇಸೂರು, ಮೈಸೂರು ಜಿಲ್ಲಾಧ್ಯಕ್ಷ ರಾಮಕೃಷ್ಣ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.