ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ) ಶೃಂಗೇರಿಯಲ್ಲಿ ಇಂದು ಭಾರತೀಯ ಜನತಾ ಪಾರ್ಟಿ ಕಛೇರಿ ಉದ್ಘಾಟನೆ ಹಾಗೂ ಕಾರ್ಯಕರ್ತರ ಸಭೆ ನಡೆಯಿತು.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದ ಕರ್ಣಾಟಕ ಬ್ಯಾಂಕ್ ಪಕ್ಕದಲ್ಲಿರುವ ಕಟ್ಟಡದಲ್ಲಿ ಭಾರತೀಯ ಜನತಾ ಪಾರ್ಟಿಯ ಕಛೇರಿ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ತಳಿರು ತೋರಣಗಳಿಂದ ಹಾಗೂ ಪುಷ್ಪಗಳಿಂದ ಅಲಂಕರಿಸಿದ್ದ ಬಿಜೆಪಿ ಕಛೇರಿಗೆ ಪೂಜೆ ಸಲ್ಲಿಸಿ ಮಾಜಿ ಶಾಸಕರಾದ ಡಿ.ಎನ್ ಜೀವರಾಜ್ ಅವರು ಉದ್ಘಾಟನೆ ನಡೆಸಿದರು.
ಇದನ್ನೂ ಓದಿ : ಶೃಂಗೇರಿ ಸಮೀಪ ರಸ್ತೆ ಅಪಘಾತ ; ಟೆಲಿಫೋನ್ ಕಂಬಕ್ಕೆ ಗುದ್ದಿದ ಕಾರು
ಶೃಂಗೇರಿ ಪಟ್ಟಣ ಪಂಚಾಯತ್ ಮುಂಭಾಗದಲ್ಲಿರುವ ಡಾ. ಬಿ.ಆರ್ ಗೌರೀಶಂಕರ್ ಸಭಾಂಗಣದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ನಡೆಯಿತು. ಈ ಸಭೆಯಲ್ಲಿ ಮುಖ್ಯವಾಗಿ ಪಕ್ಷ ಸಂಘಟನೆ ಕುರಿತು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಎಂಟು ವರ್ಷಗಳ ಆಡಳಿತಾವಧಿಯ ಸಾಧನೆಗಳ ಕುರಿತು ಜನರಿಗೆ ತಿಳಿಸುವ ಕಾರ್ಯಕ್ರಮದ ಕುರಿತು ಸಭೆ ನಡೆಯಿತು.
ಈ ಸಭೆಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್ ಜೀವರಾಜ್ ಇನ್ನೇನು ಕೆಲ ತಿಂಗಳುಗಳಲ್ಲಿ ನಡೆಯುವ ತಾಲೂಕು ಪಂಚಾಯತ್ ಜಿಲ್ಲಾ ಪಂಚಾಯತ್ ಚುನಾವಣೆ ಹಾಗೂ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಇನ್ನಷ್ಟು ಬಲಗೊಳಿಸುವ ಸಲುವಾಗಿ ಕಾರ್ಯಕರ್ತರು ಸಜ್ಜಾಗಬೇಕು, ಪ್ರಧಾನಿ ನರೇಂದ್ರ ಮೋದಿ ಅವರ ಯೋಜನೆ ಹಾಗೂ ಜನಪ್ರಿಯ ಕಾರ್ಯಗಳ ಕುರಿತು ಜನರಿಗೆ ತಲುಪಿಸುವ ಅಭಿಯಾನವನ್ನು ಮುಂಬರುವ ದಿನಗಳಲ್ಲಿ ನಡೆಸುವ ಕುರಿತಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಾದ ಎ.ಎಸ್ ನಯನ, ಅಂಬಳೂರು ರಾಮಕೃಷ್ಣ, ಶೃಂಗೇರಿ ಶಿವಣ್ಣ, ವೇಣುಗೋಪಾಲ್, ರಂಗನಾಥ್, ಶಿಲ್ಪಾ ರವಿ ಸೇರಿದಂತೆ ಬಿಜೆಪಿಯ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.





0 Comments