ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ಸಮಾಜದ ಶಾಂತಿಯನ್ನು ಕದಡುವತ್ತ ಶ್ರೀ ರಾಮ ಸೇನೆಯ ಸಂಸ್ಥಾಪಕ ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ದೂರು ದಾಖಲು ಮಾಡಿದ್ದಾರೆ.

ಅಜಾನ್ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದರೂ ಈ ವಿಚಾರದಲ್ಲಿ ಶ್ರೀ ರಾಮ ಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಮಧ್ಯ ಪ್ರವೇಶಿಸಿ ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ. ಕೋರ್ಟಿನ ಆದೇಶವನ್ನು ಪರಿಪಾಲನೆ ನಡೆಸುತ್ತಿದ್ದರೂ ಕೂಡ ಆಜಾನ್ ಮೈಕ್ ನ ವಿಚಾರದಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡುತ್ತಿರುವುದು ಸರಿಯಲ್ಲ ಎಂದು ಪ್ರಮೋದ್ ಮುತಾಲಿಕ್ ವಿರುದ್ಧ ರಾಜ್ಯ ಪ್ರದೇಶ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಉಪಾಧ್ಯಕ್ಷ ಸಿ.ಎಂ.ಖಾದರ್​​​ ಆರೋಪಿಸಿದರು. 

ಹಿಂದೂ ಮುಸ್ಲಿಮರು ರಾಜ್ಯದಲ್ಲಿ ಸಹೋದರ ಭಾವನೆಯಲ್ಲಿ ಜೀವನ ನಡೆಸುತ್ತಿದ್ದರೂ ಕೂಡ ಸಮಾಜದ ಶಾಂತಿಯನ್ನು ಕದಡುವ ಕೆಲಸವನ್ನು ಮಾಡುತ್ತಿರುವ ಪ್ರಮೋದ್ ಮುತಾಲಿಕ್ ವಿರುದ್ದ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕೆಂದು ಭದ್ರಾವತಿಯ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 

ಈ ಸಂದರ್ಭದಲ್ಲಿ ಅವರೊಂದಿಗೆ ಪಕ್ಷದ ಕಾರ್ಯಕರ್ತರು, ಮುಸ್ಲಿಂ ಧರ್ಮೀಯರು ಸೇರಿದಂತೆ ಅನೇಕರು ಹಾಜರಿದ್ದರು.