ಚಿಕ್ಕಮಗಳೂರು : ಪ್ರವಾದಿ ಮುಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ರಾಷ್ಟ್ರೀಯ ವಕ್ತಾರರಿಬ್ಬರನ್ನು ಬಂಧಿಸಬೆಕೆAದು ಆಗ್ರಹಿಸಿ ಎಸ್.ಡಿ.ಪಿ.ಐ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. 

ಇದನ್ನೂ ಓದಿ :  ಆನೆ ದಾಳಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿ ಬಲಿ 

ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಬಿಜೆಪಿಯ ರಾಷ್ಟ್ರೀಯ ವಕ್ತಾರರುಗಳಾದ ನೂಪುರ್ ಶರ್ಮ, ಮತ್ತು ನವೀನ್ ಜಿಂದಾಲ್ ರನ್ನು ಬಂಧಿಸುವAತೆ ಆಗ್ರಹಿಸಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಚಿಕ್ಕಮಗಳೂರು ಜಿಲ್ಲಾ ಸಮಿತಿ ಪದಾಧಿಕಾರಿಗಳು ಚಿಕ್ಕಮಗಳೂರು ನಗರದ ಆಝಾದ್ ಪಾರ್ಕ್ ಬಳಿ ಬೃಹತ್ ಪ್ರತಿಭಟನೆ ನಡೆಸಿದರು. 

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಸ್ಡಿಪಿಐ ಜಿಲ್ಲಾಧ್ಯಕ್ಷ ಗೌಸ್ ಮುನೀರ್, ದೇಶದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಪಕ್ಷವು ತನ್ನ ವೈಫಲ್ಯಗಳನ್ನು ಮರೆಮಾಚಿ, ಜನರ ಗಮನ ಬೇರೆಡೆಗೆ ಸೆಳೆಯುವ ಸಲುವಾಗಿ ಸದಾ ಹಿಂದು, ಮುಸ್ಲಿಮರ ನಡುವೆ ಭಿನ್ನಾಭಿಪ್ರಾಯ ಮೂಡಿಸಿ ರಾಜಕೀಯ ಲಾಭ ಗಳಿಸುವ ಪ್ರಯತ್ನ ಇವರ ಅಜೆಂಡವಾಗಿದೆ. ಇದರ ಮುಂದುವರಿದ ಭಾಗವಾಗಿ ತನ್ನ ರಾಷ್ಟ್ರೀಯ ವಕ್ತಾರರ ಮುಖಾಂತರ ಇಂತಹ ಹೇಳಿಕೆ ನೀಡಿಸಿರುತ್ತಾರೆ, ಪ್ರವಾದಿಯವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಕ್ತಾರರಿಗೆ ಕೇವಲ ಪಕ್ಷದಿಂದ ಉಚ್ಛಾಟಿಸಿದರೆ ಸಾಲದು, ಅವರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದರು. 

ಎಸ್.ಡಿ.ಪಿ.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮೀಲ್ ಖಾನ್, ಪಿ.ಎ ಜಿಲ್ಲಾಧ್ಯಕ್ಷರಾದ ಚಾಂದ್ ಪಾಷ,  ಆಲ್ ಇಂಡಿಯಾ ಇಮಾಮ್ ಕೌನ್ಸಿಲ್ ಜಿಲ್ಲಾಧ್ಯಕ್ಷರಾದ ಮೌಲಾನ ಯೂನುಸ್, ಖಾದ್ರಿಯ ಮಸೀದಿಯ ಇಮಾಮ್ ಹಾಫಿಜ್ ಖಾರಿ ಯೂಸುಫ್ ರಝ, ಧರ್ಮ ಗುರುಗಳಾದ ಮೌಲಾನ ಇಬ್ರಾಹಿಂ ಸಯೀದಿ, ಔರಂಗಜೇಬ್ ಆಲಂಗಿರಿ, ಎಐಎಮ್ಡಿಎಫ್ ನ ನಾಸೀರ್ ಸೇರಿದಂತೆ ಎಸ್.ಡಿ,ಪಿ,ಐ ನ ಪ್ರಮುಖರು,ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. 

ತನು ಕೊಟ್ಟಿಗೆಹಾರ, ವರದಿಗಾರರು