ನರಸಿಂಹರಾಜಪುರ : (ನ್ಯೂಸ್ ಮಲ್ನಾಡ್ ವರದಿ) ಟ್ರ್ಯಾಕ್ಟರ್ ನಿಂದ ಬಿದ್ದು ವ್ಯಕ್ತಿಯೋರ್ವ ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ನರಸಿಂಹರಾಜಪುರದಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಮುಡುಬ ಶಂಕರಪುರ ಮಧ್ಯಭಾಗವಾದ ಚಬ್ಬೆ ನಾಡು ಬಳಿ ಈ ದುರಂತ ಸಂಭವಿಸಿದ್ದು, ಟ್ರ್ಯಾಕ್ಟರ್ ಚಲಿಸುತ್ತಿದ್ದ ವೇಳೆ ವ್ಯಕ್ತಿಯು ಟ್ರ್ಯಾಕ್ಟರ್ ನಿಂದ ಉರುಳಿ ಟ್ರಾಕ್ಟರ್ ಹಿಂಭಾಗದ ಟ್ರಾಲಿ ಚಕ್ರಕ್ಕೆ ಸಿಲುಕಿ ಧಾರುಣವಾಗಿ ಮೃತಪಟ್ಟಿದ್ದಾರೆ.

ಆನ್ ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಿ : 

https://forms.gle/APPtk8M3ZDk2oMka6


ಈ ದುರ್ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು 46 ವರ್ಷದ ಗಂಗಾ ನಾಯಕ ಎಂದು ಗುರುತಿಸಲಾಗಿದ್ದು, ಸ್ಥಳದಲ್ಲೇ ದಾರುಣವಾಗಿ ಪ್ರಾಣ ಬಿಟ್ಟಿದ್ದಾರೆ. ಈ ಘಟನೆಗೆ ಚಾಲಕನ ನಿರ್ಲಕ್ಷ್ಯ ಕಾರಣ ಎಂಬುದಾಗಿ ಕೇಳಿಬಂದಿದ್ದು, ಘಟನಾಸ್ಥಳಕ್ಕೆ ಧಾವಿಸಿರುವ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೃತ ವ್ಯಕ್ತಿಯು ಶಿವಮೊಗ್ಗ ತಾಲೂಕಿನ ಗಾಜನೂರು ಮೂಲದವನು ಎನ್ನಲಾಗಿದ್ದು ಮತನನ್ನು ಕಳೆದುಕೊಂಡ ಕುಟುಂಬದವರು ತೀವ್ರ ಬೇಸರವನ್ನು ವ್ಯಕ್ತಪಡಿಸಿದ್ದಾರೆ.