ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಚಿರತೆಯ ಚರ್ಮವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಪೊಲೀಸರು ಕಾರ್ಯಾಚರಣೆಯ ಮೂಲಕ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಇಂದಾವರ ಗ್ರಾಮದ ಫ್ಯಾಕ್ಟರಿ ಬಡಾವಣೆಯ ಸಮುದಾಯ ಭವನದ ಸಮೀಪದಲ್ಲಿ ಮೂವರು ಅಕ್ರಮವಾಗಿ ಚಿರತೆಯ ಚರ್ಮವನ್ನು ಮಾರಾಟ ಮಾಡಲು ಯತ್ನಿಸಿದ್ದವರನ್ನು ಪೊಲೀಸರು ಕಾರ್ಯಾಚರಣೆಯ ಮೂಲಕ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. 

ಇಂದಾವರದ ಪರ್ವತ, ಚಿಕ್ಕಮಗಳೂರಿನ ಕಾಂತರಾಜ್, ಹಾಗೂ ಶ್ರೀನಿವಾಸ್ ಬಂಧಿತ ಆರೋಪಿಗಳು. ಚಿಕ್ಕಮಗಳೂರಿನ ಸಿಐಡಿ ಪೊಲೀಸರು ಈ ಕಾರ್ಯಾಚರಣೆಯನ್ನು ನಡೆಸಿ ಆರೋಪಿಗಳನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. 

ಈ ಕಾರ್ಯಾಚರಣೆಯಲ್ಲಿ ಪಿ.ಎಸೈ ಶರತ್, ಸಿಬ್ಬಂದಿಗಳಾದ ದಿವಾಕರ, ದಿಲೀಪ್, ದಿನೇಶ್, ದೇವರಾಜ್, ಹಾಲೇಶ್, ಹೇಮಾವತಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.