ಹಾಸನ : (ನ್ಯೂಸ್ ಮಲ್ನಾಡ್ ವರದಿ) ಮನೆಗೆ ಹಾಕಲಾಗಿದ್ದ ಬೀಗವನ್ನು ಮುರಿದು ಕಳ್ಳರು ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ನಗದನ್ನು ದೋಚಿ ಪರಾರಿಯಾಗಿರುವ ಘಟನೆ ವರದಿಯಾಗಿದೆ.

ಹಾಸನದ ವಿಜಯನಗರ ಬಡಾವಣೆಯಲ್ಲಿ ಈ ಕೃತ್ಯ ನಡೆದಿದ್ದು, ಇಲ್ಲಿನ ಸಿಲ್ಕ್ ಬೋರ್ಡ್ ನಿವಾಸಿ ಗೋವಿಂದ ಸ್ವಾಮಿ ಎನ್ನುವವರು ಮನೆಗೆ ಬೀಗ ಹಾಕಿ ಪತ್ನಿಯೊಂದಿಗೆ ಸಾಮಗ್ರಿಗಳನ್ನು ಖರೀದಿಸುವ ಸಲುವಾಗಿ ತೆರಳಿದ್ದಾರೆ. ಈ ಸಮಯವನ್ನು ನೋಡಿಕೊಂಡು ಕಳ್ಳತನ ನಡೆದಿರುವ ಕಳ್ಳ ಮನೆಯ ಬೀರುವಿನಲ್ಲಿರಿಸಿದ್ದ ಚಿನ್ನಾಭರಣ ಹಾಗೂ 70 ಸಾವಿರ ರೂಪಾಯಿ ಹಣವನ್ನು ಎಗರಿಸಿದ್ದಾನೆ.




ಮನೆಯವರು ಹೊರಗಡೆ ತೆರಳುವ ಸಲುವಾಗಿ ಮನೆಗೆ ಬೀಗ ಹಾಕಿ, ಕೀಯನ್ನು ಅಲ್ಲೇ ಸಮೀಪದಲ್ಲಿರಿಸಿ ತೆರಳಿದ್ದರು ಎನ್ನಲಾಗಿದ್ದು, ಇದನ್ನು ಗಮನಿಸಿದ ಖದೀಮ ಕಳ್ಳತನದಲ್ಲಿ ಭಾಗಿಯಾಗಿ ಮನೆಯಲ್ಲಿರಿಸಿದ್ದ ಚಿನ್ನಾಭರಣವನ್ನು ದೋಚಿದ್ದಾನೆ. 

ಘಟನಾ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಹಾಸನ ನಗರಠಾಣೆಯ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ. ತಾವು ಕಳೆದುಕೊಂಡ ನಗದು ಹಾಗೂ ಚಿನ್ನಾಭರಣವನ್ನು ಆದಷ್ಟು ಶೀಘ್ರವಾಗಿ ಪತ್ತೆ ಮಾಡಿ ಕೊಡುವಂತೆ ಕುಟುಂಬಸ್ಥರು ಕೋರಿದ್ದಾರೆ.

ಮನೆಯಲ್ಲಿ ಪತಿ ಇಲ್ಲದ ವೇಳೆ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕ : 

ಸಾಗರ :
ವ್ಯಕ್ತಿ ಮನೆಯಲ್ಲಿರದ ಸಮಯದಲ್ಲಿ ಆತನ ಹೆಂಡತಿಯ ಮೇಲೆಯೇ ಅತ್ಯಾಚಾರ ಎಸಗಲು ಕಾಮುಕಾನೋರ್ವ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು ಮಹಿಳೆಯ ಪತಿ ಇಲ್ಲದ ವೇಳೆ ಮಧ್ಯರಾತ್ರಿ ಮನೆಗೆ ನುಗ್ಗಿದ ಪರಿಚಿತನೇ ಮಹಿಳೆಯ ಮೇಲೆ ಅತ್ಯಾಚಾರ ನಡೆಸಲು ಯತ್ನಿಸಿದ್ದಾನೆ.


ಅತ್ಯಾಚಾರ ಎಸಗಲು ಯತ್ನಿಸಿರುವ ಆರೋಪಿಯನ್ನು ದಿಗಟೆಕೊಪ್ಪದ ರಮೇಶ್ ಎನ್ನಲಾಗಿದೆ. ಪೊಲೀಸರು ಆತನನ್ನು ಸೋಮವಾರ ಬಂಧಿಸಿದ್ದು ವಿಚಾರಣೆ ಕೈಗೊಂಡಿದ್ದಾರೆ. ಮಹಿಳೆಯ ಪತಿಗೆ ಪರಿಚಯಸ್ಥನಾಗಿದ್ದ ರಮೇಶ್ ಆಗಾಗ ಮನೆಗೆ ಬರಲು ಆರಂಭಿಸಿದ್ದ. ಜೂನ್ ಮೊದಲ ವಾರದಲ್ಲಿ ಪತಿ ಕೆಲಸದ ನಿಮಿತ್ತ ಶಿವಮೊಗ್ಗಕ್ಕೆ ತೆರಳಿದ್ದ ಸಂದರ್ಭದಲ್ಲಿ ಮನೆಗೆ ನುಗ್ಗಿದ ಆರೋಪಿಯು ಸ್ನೇಹಿತನ ಪತ್ನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ


ದ್ದಾನೆ. ಈ ವೇಳೆ ಮಹಿಳೆ ಜೋರಾಗಿ ಕಿರುಚಿದ ಪರಿಣಾಮ ಅಕ್ಕಪಕ್ಕದ ಮನೆಯವರು ಧಾವಿಸಿದ್ದಾರೆ. ಈ ತಕ್ಷಣವೇ ಆರೋಪಿಯು ಮಹಿಳೆಯ ಫೋಟೋಗಳನ್ನು ತೆಗೆದುಕೊಂಡು ಪರಾರಿಯಾಗಿದ್ದಾನೆ. 

ಈ ಸಂದರ್ಭದಲ್ಲಿ ಮಹಿಳೆಯ ಪತಿ ಪೊಲೀಸರಿಗೆ ದೂರು ನೀಡಲು ಮುಂದಾದಾಗ ಆರೋಪಿಯು ಪ್ರಕರಣ ದಾಖಲಿಸಿದರೆ ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯ ಫೋಟೋ ಹಾಕಿ ಅಪಪ್ರಚಾರ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಈ ಬಳಿಕವೂ ಮಹಿಳೆಯನ್ನು ಬ್ಲಾಕ್‌ಮೇಲ್ ಮಾಡಿ ಅನೈತಿಕ ಸಂಬಂಧಕ್ಕೆ ಒತ್ತಾಯಿಸುತ್ತಿದ್ದಾನೆ ಎಂದು ಆರೋಪಿಸಿ ಆತನ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದರು. ಈ ಸಂಬಂಧ ಆರೋಪಿಯನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.