ಕೊಡಗು : (ನ್ಯೂಸ್ ಮಲ್ನಾಡ್ ವರದಿ) ಕೊಡಗು ಜಿಲ್ಲೆಯಲ್ಲಿ ಇಂದು ಮತ್ತೆ ಜನರಿಗೆ ಭೂಕಂಪನದ ಅನುಭವವಾಗಿದೆ. ಕಳೆದ ಮೂರು ದಿನಗಳ ಹಿಂದೆಯಷ್ಟೆ ಕೊಡಗು ಜಿಲ್ಲೆಯಲ್ಲಿ ಭೂಮಿ ಕಂಪಿಸಿದ್ದು, ಇಂದು ಬೆಳಗ್ಗೆ 7.45 ಸುಮಾರಿಗೆ ಮತ್ತೆ ಭೂಕಂಪವಾದ ಅನುಭವವಾಗಿದ್ದು ಜಜನರಲ್ಲಿ ಆತಂಕ ಸೃಷ್ಟಿಸಿದೆ.

ಇದನ್ನೂ ಓದಿ : ಚಿಕ್ಕಮಗಳೂರು ಪೋಲಿಸ್ ಅಧಿಕಾರಿಗಳ ಸಮ್ಮುಖದಲ್ಲಿ ಅಪಾರ ಪ್ರಮಾಣದ ಗಾಂಜಾ ನಾಶ

ಮಡಿಕೇರಿ ತಾಲೂಕಿನ ಕರಿಕೆ, ಸಂಪಾಜೆ ಕರ್ಣಂಗೇರಿ ಹಾಗೂ ಪೆರಾಜೆ ಭಾಗಮಂಡಲ ಹಲವೆಡೆ ಭೂ ಕಂಪಿಸಿರುವುದಾಗಿ ಜನ ತಮಗಾದ ಅನುಭವವನ್ನು ವ್ಯಕ್ತಪಡಿಸಿದ್ದಾರೆ.


ಕೊಡಗು ಸೇರಿದಂತೆ ಜಿಲ್ಲೆಗೆ ಹೊಂದಿಕೊಂಡಂತಿರುವ ಹಾಸನ, ದಕ್ಷಿಣಕನ್ನಡ ಭಾಗಗಳಲ್ಲಿ ಇದೇ ಜೂನ್ 25ರಂದು ಭೂಮಿ ಕಂಪಿಸಿದ ಅನುಭವವಾಗಿತ್ತು. ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗವಾದ ಮಡಿಕೇರಿ ತಾಲೂಕಿನ ಚೆಂಬು, ಕರಿಕೆ ಸಂಪಾಜೆ ವ್ಯಾಪ್ತಿಯಲ್ಲಿ ಹಾಗೂ ಗಡಿಭಾಗವಾದ ದ.ಕ ಜಿಲ್ಲೆಯ ಕಲ್ಲುಗುಂಡಿ, ಗೂನಡ್ಕ ಭಾಗದಲ್ಲಿ (ಜೂ.25) ಶನಿವಾರ ಬೆಳಗ್ಗೆ 9.10 ಸುಮಾರು 3 ರಿಂದ 4 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದ ಅನುಭವವಾಗಿತ್ತು. ಕಂಪನದಿಂದ ಭೂಮಿಯೊಳಗಿನಿಂದ ವಿಚಿತ್ರ ಶಬ್ಧ ಕೇಳಿಬಂದಿತ್ತು. 2018ರಲ್ಲಿ ಕೊಡಗಿನಲ್ಲಿ ಇಂತಹದ್ದೇ ಅನುಭವವಾಗಿತ್ತು. ಭೂಕುಸಿತವಾದ ಪ್ರದೇಶದಲ್ಲಿ ಭೂಮಿಯೊಳಗೆ ನೀರು ಹರಿವ ಸದ್ದು ಕೇಳಿಸಿತ್ತು. ಜತೆಗೆ ಭಾರಿ ಸದ್ದು ಕೇಳಿ ಬಂದಿತ್ತು. 

ಪ್ರವಾಹ ಭೂಕುಸಿತ ಸೇರಿದಂತೆ ಮೊದಲಾದ ಪ್ರಕೃತಿ ವಿಕೋಪಗಳಿಂದ ಕೊಡಗಿನ ಜನರ ಬದುಕು ಕಳೆದ ಕೆಲ ವರ್ಷಗಳಿಂದ ದುಸ್ತರವಾಗಿತ್ತು. ಬದುಕನ್ನು ಕಟ್ಟಿಕೊಳ್ಳುವ ಸಮಯದಲ್ಲಿ ಮತ್ತೆ ಇಂತಹುದೇ ಘಟನೆ ಮರುಕಳಿಸುತ್ತಿರುವುದು ಸ್ಥಳೀಯರನ್ನು ಇನ್ನಷ್ಟು ಆತಂಕಕ್ಕೆ ಸಿಲುಕಿಸಿದೆ.


ಅಗ್ನಿಪಥ್ ದೇಶದ್ರೋಹಿ ಯೋಜನೆಯಾಗಿದೆ: ಶಾಸಕ ಟಿ. ಡಿ ರಾಜೇಗೌಡ : 

ಕೊಪ್ಪ : ಕೇಂದ್ರ ಸರ್ಕಾರ ಘೋಷಿಸಿರುವ ಅಗ್ನಿಪಥ ಯೋಜನೆಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿ ಶಾಸಕರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಪದಾಧಿಕಾರಿಗಳು ಕೊಪ್ಪದಲ್ಲಿ ಪ್ರತಿಭಟನೆ ನಡೆಸಿದರು.


ಅಗ್ನಿಪಥ್ ಯೋಜನೆಯ ಅಡಿಯಲ್ಲಿ ಭಾರತೀಯ ಸೇನೆಗೆ ಸೇರುವ ಯುವಕ, ಯುವತಿಯರಿಗೆ ಅನ್ಯಾಯವಾಗುತ್ತಿದೆ, ಈ ಕೂಡಲೇ ಯೋಜನೆಯನ್ನು ಪುನರ್‌ ಪರಿಶೀಲಿಸಬೇಕು ಈ ಯೋಜನೆಯಿಂದಾಗಿ ಯುವ ಜನತೆಗೆ ಅನಾನುಕೂಲಗಳೇ ಹೆಚ್ಚಾಗುತ್ತಿದೆ. ಅಗ್ನಿಪಥ್ ದೇಶದ್ರೋಹಿ ಯೋಜನೆಯಾಗಿದೆ ಎಂದು ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ಡಿ ರಾಜೇಗೌಡ ಮಾತನಾಡಿದರು. ದೇಶದಲ್ಲಿ ರಾಜ್ಯದಲ್ಲಿ ಸೌಹಾರ್ದತೆಯನ್ನು ಕೆದಡುವ ಸಲುವಾಗಿ ಈ ಯೋಜನೆಯನ್ನು ತರಲಾಗುತ್ತಿದೆ, ಯುವಕ ಯುವತಿಯರಿಗೆ ಉದ್ಯೋಗ ನೀಡುವುದಾಗಿ ಹುಸಿ ಭರವಸೆ ನೀಡಿ ಯುವಕರ ಭವಿಷ್ಯವನ್ನು ಹಾಳು ಮಾಡಲಾಗುತ್ತಿದೆ ಎಂದು ಹರಿಹಾಯ್ದರು.

ಯುವಕರಿಗೆ ಹಿಜಾಬ್, ಹಲಾಲ್, ಶಾಲುಗಳು ಮುಂತಾದವುಗಳನ್ನು ನೀಡಲಾಗುತ್ತಿದೆಯೇ ಹೊರತು ಉದ್ಯೋಗ ರೂಪಿಸುವ ಯಾವುದೇ ಯೋಜನೆಗಳು ಮೋದಿ ಸರ್ಕಾರದಿಂದ ಬರುತ್ತಿಲ್ಲ, ಮೋದಿ ಹೊರಡಿಸುವ ಎಲ್ಲಾ ಯೋಜನೆಗಳನ್ನು ಉತ್ತಮ ಎಂದು ಇಲ್ಲಿನ ಕಾರ್ಯಕರ್ತರು ಹೇಳುತ್ತಾರೆ ಆದರೆ ಅವುಗಳಿಂದಾಗಿ ಯಾರಿಗೆ ಉಪಯೋಗವಾಗಿದೆ ಎಂಬುದು ಇನ್ನೂ ಪ್ರಶ್ನೆಯಾಗಿಯೇ ಉಳಿದಿದೆ, ಯಾವುದೇ ರಾಜಕಾರಣಿಗಳ ಮಕ್ಕಳು ನಾಲ್ಕು ವರ್ಷಗಳ ಕಾಲ ದುಡಿಯಲು ಅಗ್ನಿಪಥ್ ನ ಅಡಿಯಲ್ಲಿ ತೆರಳುವುದಿಲ್ಲ. ಬಡವರ ಮಕ್ಕಳು ಉದ್ಯೋಗವನ್ನರಸಿ ಹೋಗುತ್ತಾರೆ ನಾಲ್ಕು ವರ್ಷಗಳ ನಂತರದಲ್ಲಿ ಅವರ ಬಳಿಯೂ ಉದ್ಯೋಗವಿರುವುದಿಲ್ಲ ಆಗ ಒದ್ದಾಡಬೇಕಾಗುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಮುರೊಳ್ಳಿ ಆಕ್ರೋಶ ಹೊರಹಾಕಿದರು.

ಈ ಪ್ರತಿಭಟನೆಯಲ್ಲಿ ಶಾಸಕ ಟಿ.ಡಿ ರಾಜೇಗೌಡ ಸೇರಿದಂತೆ ಕಾಂಗ್ರೆಸ್ ಪಕ್ಷದ ಪ್ರಮುಖ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.