ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ಶಿವಮೊಗ್ಗ ತಾಲೂಕಿನ ಬೊಮ್ಮತ್ತಿಯಲ್ಲಿ ಕೂಲಿ ಕಾರ್ಮಿಕರೋರ್ವರ ಮನೆಯಲ್ಲಿ 70 ಸಾವಿರ ಮೌಲ್ಯದ ಬಂಗಾರ ಮತ್ತು ಬೆಳ್ಳಿಯ ಆಭರಣಗಳ ಕಳ್ಳತನ ನಡೆದಿದೆ. ಕಳ್ಳತನದ ಕುರಿತು ಇಲ್ಲಿನ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೊಮ್ಮತ್ತಿಯ ರಾಮಪ್ಪ ಎಂಬುವವರ ಮನೆಯಲ್ಲಿ ಕಳ್ಳತನವಾಗಿದ್ದು, ಬೀರುವಿನಲ್ಲಿರಿಸಿದ್ದ 12 ಗ್ರಾಂ ತೂಕದ 4 ಜೊತೆ ಬಂಗಾರದ ಓಲೆ, 10 ಗ್ರಾಂ ತೂಕದ 2 ಜೊತೆ ಬೆಳ್ಳಿಯ ಗೆಜ್ಜೆಗಳನ್ನು ಕಳ್ಳತನ ಮಾಡಲಾಗಿದೆ ಎಂಬುದಾಗಿ ತಿಳಿದುಬಂದಿದೆ.
ರಾಮಪ್ಪ, ಪತ್ನಿ ಮತ್ತು ಇಬ್ಬರು ಪುತ್ರಿಯರು ಮತ್ತು ಓರ್ವ ಪುತ್ರ ಕೂಲಿ ಕೆಲಸಕ್ಕೆ ತೆರಳಿದ ಸಂದರ್ಭದಲ್ಲಿ ಈ ಕಳ್ಳತನ ನಡೆದಿದೆ. ಎನ್ನಲಾಗಿದ್ದು ಪೊಲೀಸರು ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಮನೆಯಲ್ಲಿ ಗುಪ್ತವಾಗಿ ಇಡುತ್ತಿದ್ದ ಬೀಗದ ಕೀಯನ್ನೇ ಬಳಸಿ ಕಳ್ಳರು ಮನೆಯೊಳಗೆ ಪ್ರವೇಶಿಸಿರುವ ಹಿನ್ನೆಲೆಯಲ್ಲಿ ಪರಿಚಿತರೇ ಈ ಕೃತ್ಯವನ್ನು ಎಸಗಿದ್ದಾರೆ ಎನ್ನಲಾಗುತ್ತಿದೆ.
ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಈ ಸಂಬಂಧ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದು, ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.





0 Comments