ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ಶಿವಮೊಗ್ಗದಲ್ಲಿ ಹಾಡಹಗಲೇ ಮತ್ತೆ ಮಾರಕಾಸ್ತ್ರಗಳನ್ನು ಜಳಪಿಸಿ ಓರ್ವನ ಬರ್ಬರ ಹತ್ಯೆಯಾಗಿದೆ.
ಇದನ್ನೂ ಓದಿ : ಶೃಂಗೇರಿ : ದುರ್ಗಾದೇವಸ್ಥಾನದ ಸಮೀಪ ನಿಯಂತ್ರಣ ತಪ್ಪಿ ಉರುಳಿದ ಕಾರು
ಭೂಗತ ಪಾತಕಿ ಹೆಬ್ಬೆಟ್ಟು ಮಂಜನ ಸಹವರ್ತಿಯೂ ಆಗಿದ್ದ ಹಂದಿಅಣ್ಣಿ ನಾಲ್ಕು ಕೊಲೆ ಪ್ರಕರಣಗಳಲ್ಲಿ ಆರೋಪಿತನಾಗಿದ್ದನು. ಇಂದು ಬೆಳಗ್ಗೆ ಶಿವಮೊಗ್ಗದ ವಿನೋಬನಗರ ಪೊಲೀಸ್ ಚೌಕಿ ಎದುರುಭಾಗದಲ್ಲಿ ಆತನನ್ನು ಬರ್ಬರವಾಗಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಲಾಗಿದೆ.
ಆನ್ ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಿ :
https://forms.gle/APPtk8M3ZDk2oMka6
ಶಿವಮೊಗ್ಗದಲ್ಲಿ ಪ್ರತಿದಿನವೂ ಒಂದಿಲ್ಲೊಂದು ಈ ರೀತಿಯ ಘಟನೆಗಳು ನಡೆಯುತ್ತಿದ್ದು ಸ್ಥಳೀಯರು ಪ್ರತಿನಿತ್ಯವೂ ಆತಂಕದಲ್ಲಿ ದಿನ ಕಳೆಯುವಂತಾಗಿದೆ. ನಡೆದ ಈ ಗಂಭೀರ ಹಲ್ಲೆಯಿಂದ ಹಂದಿಅಣ್ಣಿಯ ತಲೆ ಒಡೆದುಹೋಗಿದ್ದು ರೌಡಿಶೀಟರ್ ಹಂದಿಅಣ್ಣಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಮರ ಬಿದ್ದು ಮನೆಗೆ ಹಾನಿ ; ಅಧಿಕಾರಿಗಳ ಭೇಟಿ, ಪರಿಶೀಲನೆ :
ಮೂಡಿಗೆರೆ : ಚಿಕ್ಕಮಗಳೂರು ಭಾಗದಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕಳೆದ ಒಂದು ವಾರದಿಂದ ಅಲ್ಲಲ್ಲಿ ಕೆಲ ಅವಾಂತರಗಳು ಸಂಭವಿಸಿದೆ.
ಭಾರೀ ಮಳೆಯಿಂದಾಗಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪಟ್ಟದೂರು ಗ್ರಾಮದಲ್ಲಿ ಮನೆ ಮೇಲೆ ಮರ ಬಿದ್ದು ಮನೆ ಜಖಂಗೊಂಡಿದೆ.
ಮೂಡಿಗೆರೆ ತಾಲೂಕಿನ ಪಟ್ಟದೂರು ಗ್ರಾಮದ ಹಾಲಮ್ಮ ಹೊನ್ನಯ್ಯ ಎಂಬುವವರ ಮನೆಯು ಮರ ಬಿದ್ದ ಕಾರಣದಿಂದಾಗಿ ಜಖಂಗೊಂಡಿದ್ದು ಗ್ರಾಮ ಪಂಚಾಯತ್ ಹನಿಯುಂಟಾದ ಮನೆಗೆ ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಲೆನಾಡು ಭಾಗದಲ್ಲಿ ಈಗಾಗಲೇ ಮಳೆಯ ಅವಾಂತರ ಹೆಚ್ಚಾಗಿದ್ದು ಅಲ್ಲಲ್ಲಿ ಕೆಲ ಅವಘಡಗಳು ಸಂಭವಿಸುತ್ತಿದೆ. ಮಳೆಯು ಹೆಚ್ಚಾಗಿ ಸುರಿಯುತ್ತಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಹಾಗೂ ಮಕ್ಕಳ ಹಿತದೃಷ್ಟಿಯಿಂದ ಬಣಕಲ್ ಪ್ರೌಢಶಾಲೆ, ಬಣಕಲ್ ಉರ್ದುಶಾಲೆ, ಬಣಕಲ್ ರಿವರ್ವ್ಯೂ ಶಾಲೆಗಳಿಗೆ ರಜೆ ನೀಡಲಾಗಿದೆ.




.jpeg)

0 Comments