ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ಅಮಾನುಷವಾಗಿ ನಡು ರಸ್ತೆಯಲ್ಲಿ ಹತ್ಯೆಗೀಡು ಮಾಡಲಾಗಿದ್ದ ಬಜರಂಗದಳದ ಕಾರ್ಯಕರ್ತ ಸೀಗೆಹಟ್ಟಿ ಹರ್ಷನ ಹತ್ಯೆಯ ನಂತರದಲ್ಲಿ ಆತನ ರಕ್ತ ಸಿಕ್ತ ದೇಹದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದ ನಾಲ್ವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ  ಸುಮೋಟೋ ಪ್ರಕರಣ ದಾಖಲು ಮಾಡಿರುವ ಪೊಲೀಸರು, ಇನ್‌ಸ್ಟಾಗ್ರಾಮ್‌ ಸ್ಟೇಟಸ್‌ನಲ್ಲಿ ರಕ್ತ ಸಿಕ್ತನಾಗಿ ಬಿದ್ದ ಹರ್ಷನ ಫೋಟೋದೊಂದಿಗೆ ನಾಲ್ವರು ತಮ್ಮ ಫೊಟೊ ಅಪಲೋಡ್ ಮಾಡಿದ್ದರು, ಕೋಮು ಸೌಹಾರ್ಧತೆಗೆ ಧಕ್ಕೆ ಉಂಟು ಮಾಡಿದ ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಕೇಸ್ ದಾಖಲಿಸಿದ್ದು, ನಾಲ್ವರು ಅಪ್ರಾಪ್ತ ಬಾಲಕರ ವಿರುದ್ಧ ಸುಮೋಟೊ ಪ್ರಕರಣ‌ ದಾಖಲಾಗಿದೆ.


ಈ ನಾಲ್ಕು ಜನರಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೋಲಿಸರು ವಿಚಾರಣೆ ನಡೆಸಿದ್ದಾರೆ. ಪಿಐ ಸಂಜೀವ್ ಕುಮಾರ್ ಗಸ್ತಿನಲ್ಲಿದ್ದಾಗ‌ ರಾಗಿಗುಡ್ಡದ ಬಳಿ ನಾಲ್ವರು ಅನುಮಾನಸ್ಪದ ರೀತಿಯಲ್ಲಿ ವರ್ತಿಸುತ್ತಿದ್ದರು. ಒರ್ವನ ಬಳಿಯಿದ್ದ ಮೊಬೈಲ್ ಪೋನಿನಲ್ಲಿ ಹತ್ಯೆಯಾದ ಹರ್ಷ ರಕ್ತಸಿಕ್ತವಾಗಿ ಬಿದ್ದಿರುವ ಪೋಟೊ ಜೊತೆಗೆ ಟ್ಯಾಗ್ ಲೈನ್ ಹಾಕಲಾಗಿತ್ತು. ಕೋಮು ಸೌಹಾರ್ದತೆಗೆ ಧಕ್ಕೆ ತರುವಂತೆ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿದ್ದು ಸ್ಟೇಟಸ್ ಹಾಕಿ ಹೆಸರು ಮಾಡಲು ಹೊರಟಿದ್ದ ನಾಲ್ವರು ವಿರುದ್ಧ ಪ್ರಕರಣ ದಾಖಲಾಗಿದೆ.


ಹರ್ಷನ ಹತ್ಯೆಯ ನಂತರದಲ್ಲಿ ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಮನೆಗಳಿಗೆ ವಾಹನಗಳಿಗೆ ಕಲ್ಲು ತೂರಾಟ ಬೆಂಕಿ ಹಚ್ಚಿ ಉದ್ರಿಕ್ತರ ಗುಂಪು ತೀವ್ರ ಮಟ್ಟದ ಹಾನಿಯನ್ನು ಮಾಡಿತ್ತು. ಬಳಿಕದಲ್ಲಿ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಬಹಳಷ್ಟು ಹರಸಾಹಸಪಟ್ಟಿದ್ದರು.

ಬಜರಂಗದಳದ ಕಾರ್ಯಕರ್ತರ ಹರ್ಷನ ಕೊಲೆ ಪ್ರಕರಣ ; NIA ಅಧಿಕಾರಿಗಳ ದಾಳಿ, ಪರಿಶೀಲನೆ : 

ಹರ್ಷನ ಹತ್ಯೆಗೆ ಸಂಬಂಧಿಸಿದಂತೆ ತನಿಖೆಯ ಜವಾಬ್ದಾರಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ಸರ್ಕಾರ ವಹಿಸಿತ್ತು. ಈ ನಿಟ್ಟಿನಲ್ಲಿ ಇಂದು NIA ಅಧಿಕಾರಿಗಳ ತಂಡ ಶಿವಮೊಗ್ಗದಲ್ಲಿ ದಾಳಿ ನಡೆಸಿ ಪರಿಶೀಲನೆ ಆರಂಭಿಸಿದೆ. ಹರ್ಷನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳ ತಂಡ ಶಿವಮೊಗ್ಗಕ್ಕೆ ಆಗಮಿಸಿದ್ದು, ಇಂದು ಬೆಳ್ಳಂ ಬೆಳಗ್ಗೆಯೇ ವಿವಿಧೆಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಆನ್ ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಿ : https://forms.gle/APPtk8M3ZDk2oMka6 

ಮಾಹಿತಿಯ ಪ್ರಕಾರ ಒಟ್ಟು 8 ವಾಹನಗಳಲ್ಲಿ 30 ರಾಷ್ಟ್ರೀಯ ತನಿಖಾದಳದ  ಅಧಿಕಾರಿಗಳ ತಂಡ ಶಿವಮೊಗ್ಗಕ್ಕೆ ಆಗಮಿಸಿದ್ದು, ಹರ್ಷ ಕೊಲೆ ಪ್ರಕರಣದ ಆರೋಪಿಗಳ ಮನೆ ಸೇರಿದಂತೆ ಮುಂಜಾನೆಯಿಂದ ನಗರದ 18 ಸ್ಥಳಗಳಲ್ಲಿ ದಾಳಿ ಮಾಡಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಶಿವಮೊಗ್ಗಕ್ಕೆ ಆಗಮಿಸಿರುವ ತಂಡದಲ್ಲಿ ಕೇರಳ, ಆಂಧ್ರ ಪ್ರದೇಶದ ಅಧಿಕಾರಿಗಳಿದ್ದಾರೆ ಎನ್ನಲಾಗಿದ್ದು ಘಟನೆಗೆ ಸಂಬಂಧಿಸಿದಂತೆ ವಿವಿಧ ಕಡೆಗಳಲ್ಲಿ  ಅಧಿಕಾರಿಗಳು ದಾಳಿ ನಡೆಸಿ ಮಾಹಿತಿ ಕಲೆಹಾಕಿದ್ದಾರೆ. 

ಇಂದು ಬೆಳಗ್ಗೆ ಐದು ಗಂಟೆಯಿಂದ ಅಧಿಕಾರಿಗಳು ದಾಳಿ ಆರಂಭಿಸಿದ್ದು,  ಶಿವಮೊಗ್ಗ ಜಿಲ್ಲೆಯಲ್ಲಿ 13 ಕಡೆಗಳಲ್ಲಿ ವಿಚಾರಣೆ ನಡೆಸಲಾಗಿದೆ. ಬೆಳಿಗ್ಗೆ 10 ಗಂಟೆಯೊಳಗೆ ವಿಚಾರಣೆ ಮುಗಿಸಿ ವಾಪಸ್‌ ತೆರಳಿದ್ದಾರೆ. ಹರ್ಷ ಕೊಲೆ ಪ್ರಕರಣದಲ್ಲಿ ಹೆಸರು ಕೇಳಿ ಬಂದ ಆರೋಪಿಗಳು ಹಾಗೂ ಅವರ ಸಂಬಂಧಿಕರ ವಿಚಾರಣೆ ನಡೆಸಿದ್ದಾರೆ. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟಾರೆ ಅಧಿಕಾರಿಗಳು ಸುಮಾರು 450 ಮಂದಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ.