ಹಿಂದೂಗಳ ಧಾರ್ಮಿಕ ಕ್ಷೇತ್ರಗಳ ಮೇಲೆ ಉಗ್ರರು ಸ್ಫೋಟಕ್ಕೆ ರೂಪಿಸಿದ್ದ ಸಂಚನ್ನು ಕರ್ನಾಟಕ ಹಾಗೂ ತಮಿಳುನಾಡಿನ ಪೊಲೀಸರು ವಿಫಲಗೊಳಿಸಿದ್ದಾರೆ. 

ಕಳೆದ ಕೆಲ ದಿನಗಳ ಹಿಂದಷ್ಟೇ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಬಂಧಿತರಾಗಿದ್ದ ನಾಲ್ವರು ಶಂಕಿತ ಉಗ್ರರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಿದ್ದರು. ವಿಚಾರಣೆಯ ವೇಳೆ ಬಾಯ್ಬಿಟ್ಟಿರುವ ಉಗ್ರರು ಈ ಬಾರಿ ಅದ್ಧೂರಿಯಾಗಿ ಆಚರಿಸಲ್ಪಡುವ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭವಾದ ಆಗಸ್ಟ್ 15 ರ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಸಿದ್ದ ಧಾರ್ಮಿಕ ಕ್ಷೇತ್ರವಾದ ಕರ್ನಾಟಕದ ಶೃಂಗೇರಿ ಮತ್ತು ರಾಮಚಂದ್ರಾಪುರಮಠ ತಮಿಳುನಾಡಿನ ಕಂಚಿ ಈ ಮೂರು ಮಠಗಳ ಮೇಲೆ ಸ್ಫೋಟವನ್ನು ನಡೆಸಲು ಹೂಡಿದ್ದ ಸಂಚನ್ನು ಪೊಲೀಸರು ಭೇದಿಸಿದ್ದಾರೆ. 


ಅತೀ ಹೆಚ್ಚಿನದಾಗಿ ಧಾರ್ಮಿಕತೆಗೆ ಈ ಮಠಗಳು ಒತ್ತನ್ನು ನೀಡಿ ಧರ್ಮ ಪ್ರಚಾರ ನಡೆಸುತ್ತಿರುವ ಕಾರಣದಿಂದಾಗಿ ಹಿಂದೂಗಳ ಧಾರ್ಮಿಕ ಕ್ಷೇತ್ರಗಳಾದ ಈ ಮೂರು ಮಠಗಳ ಮೇಲೆ ದಾಳಿಗೆ ಸಂಚು ರೂಪಿಸಿರುವುದು ಬಯಲಾಗಿದೆ. 

ಇಸ್ಲಾಮಿಕ್ ಸ್ಟೇಟ್ ಮತ್ತು ಅಲ್ ಖೈದಾ ಸಂಘಟನೆಗಳಿಗೆ ಸೇರಿದ ನಾಲ್ವರು ಶಂಕಿತ ಜಿಹಾದಿ ಭಯೋತ್ಪಾದಕರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಬಂಧಿತರಿಂದ ಅಧಿಕಾರಿಗಳು ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. 30 ಜನರ ತಂಡವನ್ನು ರಚಿಸಿಕೊಂಡು ಹಿಂದೂಗಳ ಮೇಲೆ ಆತ್ಮಾಹುತಿ ಬಾಂಬ್ ದಾಳಿ ನಡೆಸಲು ಮುಂದಾಗಿದ್ದರು ಇದಲ್ಲದೇ ಮಠಗಳ ಸುತ್ತಮುತ್ತಲಿನ ಸ್ಥಳಗಳನ್ನು ಗಮನಿಸಿಕೊಂಡು ದಾಳಿ ನಡೆಸಲು ಬೇಕಾಗುವ ಸಾಮಾಗ್ರಿಗಳನ್ನು ಒಗ್ಗೂಡಿಸುತ್ತಿದ್ದರು ಎಂಬುದಾಗಿ ವಿಚಾರಣೆ ವೇಳೆ ಶಂಕಿತ ಉಗ್ರರು ಬಾಯ್ಬಿಟ್ಟಿದ್ದು ಈ ಕುರಿತಾಗಿ ಇನ್ನೂ ಹೆಚ್ಚಿನ ಮಾಹಿತಿಯನ್ನು ಅಧಿಕಾರಿಗಳು ಕಲೆ ಹಾಕುತ್ತಿದ್ದಾರೆ.