ಮೂಡಿಗೆರೆ : (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಭಾಗದಲ್ಲಿ ವರುಣನ ಆರ್ಭಟ ಜೋರಾಗಿದ್ದು, ಕಳೆದ ಒಂದು ವಾರದಿಂದ ಅಲ್ಲಲ್ಲಿ ಕೆಲ ಅವಾಂತರಗಳು ಸಂಭವಿಸಿದೆ.
ಭಾರೀ ಮಳೆಯಿಂದಾಗಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪಟ್ಟದೂರು ಗ್ರಾಮದಲ್ಲಿ ಮನೆ ಮೇಲೆ ಮರ ಬಿದ್ದು ಮನೆ ಜಖಂಗೊಂಡಿದೆ.
ಇದನ್ನೂ ಓದಿ : ಶಿವಮೊಗ್ಗದಲ್ಲಿ ಮತ್ತೆ ಝಳಪಿಸಿದ ಮಚ್ಚುಗಳು ; ನಡುರಸ್ತೆಯಲ್ಲೇ ಬರ್ಬರ ಹತ್ಯೆ
ಮೂಡಿಗೆರೆ ತಾಲೂಕಿನ ಪಟ್ಟದೂರು ಗ್ರಾಮದ ಹಾಲಮ್ಮ ಹೊನ್ನಯ್ಯ ಎಂಬುವವರ ಮನೆಯ ಮೇಲೆ ಮರ ಬಿದ್ದ ಕಾರಣದಿಂದಾಗಿ ಜಖಂಗೊಂಡಿದ್ದು ಗ್ರಾಮ ಪಂಚಾಯತ್ ಹನಿಯುಂಟಾದ ಮನೆಗೆ ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಆನ್ ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಿ :
https://forms.gle/APPtk8M3ZDk2oMka6
ಮಲೆನಾಡು ಭಾಗದಲ್ಲಿ ಈಗಾಗಲೇ ಮಳೆಯ ಅವಾಂತರ ಹೆಚ್ಚಾಗಿದ್ದು ಅಲ್ಲಲ್ಲಿ ಕೆಲ ಅವಘಡಗಳು ಸಂಭವಿಸುತ್ತಿದೆ. ಮಳೆಯು ಹೆಚ್ಚಾಗಿ ಸುರಿಯುತ್ತಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಹಾಗೂ ಮಕ್ಕಳ ಹಿತದೃಷ್ಟಿಯಿಂದ ಬಣಕಲ್ ಪ್ರೌಢಶಾಲೆ, ಬಣಕಲ್ ಉರ್ದುಶಾಲೆ, ಬಣಕಲ್ ರಿವರ್ವ್ಯೂ ಶಾಲೆಗಳಿಗೆ ರಜೆ ನೀಡಲಾಗಿದೆ.
ತನು ಕೊಟ್ಟಿಗೆಹಾರ, ವರದಿಗಾರರು
ನೀರಿನಲ್ಲಿ ಕೊಚ್ಚಿ ಹೋಗಿದ್ದ ವೃದ್ಧೆ ಶವವಾಗಿ ಪತ್ತೆ :
ಶಿವಮೊಗ್ಗ : ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದ ವೃದ್ಧೆ ಶವವಾಗಿ ಪತ್ತೆಯಾಗಿರುವ ಘಟನೆ ವರದಿಯಾಗಿದೆ.
ಚೋರಡಿಯಿಂದ ನದಿಯ ತಟದಲ್ಲಿರುವ ಚೌಡೇಶ್ವರಿ ದೇವಸ್ಥಾನಕ್ಕೆ ಪೂಜೆಗೆಂದು ಮನೆಯಲ್ಲಿ ಹೇಳಿ ಬಂದಿದ್ದ 64 ವರ್ಷದ ನಾಗರತ್ನ ಎಂಬ ವೃದ್ಧೆ, ಕುಮಧ್ವತಿ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದರು. ಮೂರುದಿನದ ನಂತರ ಆಕೆಯ ಮೃತದೇಹ ಪತ್ತೆಯಾಗಿದೆ. ಈಕೆ ಆತ್ಮಹತ್ಯೆಗಾಗಿ ನದಿಗೆ ಹಾರಿರುವುದಾ ಅಥವಾ ಪೂಜೆಗೆಂದು ನದಿಗೆ ಇಳಿದ ಪರಿಣಾಮ ನೀರುಪಾಲಾಗಿರುವುದಾ ಎಂಬುದರ ಕುರಿತಾಗಿ ಇನ್ನಷ್ಟೇ ಮಾಹಿತಿಗಳು ಲಭ್ಯವಾಗಬೇಕಿದೆ. ಘಟನಾ ಸಂಬಂಧ ಕುಂಸಿ ಠಾಣೆಯಲ್ಲಿ ನಾಪತ್ತೆಯಾಗಿರುವ ಕುರಿತು ಪ್ರಕರಣ ದಾಖಲಾಗಿತ್ತು. ಪೊಲೀಸರು ಈ ಸಂಬಂಧ ಆಕೆಯನ್ನು ಪತ್ತೆ ಹಚ್ಚುವ ಕೆಲಸವನ್ನು ಆರಂಭಿಸಿದ್ದರು.
ಆಕೆಯ ಹುಡುಕಾಟಕ್ಕಾಗಿ ಅಗ್ನಿಶಾಮಕದಳದ ಸಿಬ್ಬಂದಿಗಳು ಸತತ ಕಾರ್ಯಾಚರಣೆ ನೆಡಿಸಿದ್ದು ಸೇತುವೆಯ ಕಟ್ಟೆಯ ಮೇಲೆ ಪೂಜಾ ಬುಟ್ಟಿ ಹಾಗೂ ಬಟ್ಟೆಯೊಂದು ಇಟ್ಟು ನಾಗರತ್ನಮ್ಮ ಮಿಸ್ಸಿಂಗ್ ಆಗಿದ್ದರು.ಈ ಸುಳಿವಿನ ಮೇರೆಗೆ ಕಾರ್ಯಾಚರಣೆ ಇಳಿದ ಸಿಬ್ಬಂದಿಗಳು, ನಾಗರತ್ನ ಅವರ ಶವವನ್ನು ಪತ್ತೆ ಮಾಡಿದ್ದಾರೆ. ಪೊಲೀಸರ ಸಂಪೂರ್ಣ ತನಿಖೆಯ ನಂತರ ನಾಗರತ್ನ ಅವರದ್ದು ಆತ್ಮಹತ್ಯೆಯೋ ಅಥವಾ ಆಕಸ್ಮಿಕ ಸಾವೋ ಎಂಬುದರ ಕುರಿತಾಗಿ ಸಂಪೂರ್ಣ ಮಾಹಿತಿ ಲಭ್ಯವಾಗಬೇಕಿದೆ.




.jpeg)

0 Comments