ಕೊಡಗು : (ನ್ಯೂಸ್ ಮಲ್ನಾಡ್ ವರದಿ) ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ಕಾಡಾನೆಗಳು ಮೃತಪಟ್ಟಿರುವ ಘಟನೆ ಕೊಡಗಿನಲ್ಲಿ ಸಂಭವಿಸಿದೆ.
ಕೊಡಗು ಜಿಲ್ಲೆಯ ನೆಲ್ಲಿಹುದಿಕೇರಿ ಖಾಸಗಿ ಎಸ್ಟೇಟ್‌ನಲ್ಲಿ ಎರಡು ಕಾಡಾನೆಗಳು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದು ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಸ್ಥಳಕ್ಕೆ ಧಾವಿಸಿ ತಪಾಸಣೆ ನಡೆಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಈ ಎರಡೂ ಕಾಡಾನೆಗಳು ಖಾಸಗೀ ಎಸ್ಟೇಟ್ ಗೆ ನುಗ್ಗಿದ್ದು, ವಿದ್ಯುತ್ ತಂತಿ ಸ್ಪರ್ಶಿಸಿ ದುರ್ಮರಣವನ್ನಪ್ಪಿದೆ. ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಿದ್ದು ಅನೇಕರ ಪ್ರಾಣವನ್ನು ಆನೆಗಳು ಬಲಿ ಪಡೆದಿದ್ದರೆ, ಇನ್ನೂ ಅನೇಕರು ಬೆಳೆದ ಅಪಾರ ಪ್ರಮಾಣದ ಬೆಳೆಯನ್ನು ನಾಶಗೊಳಿಸಿದೆ.
ಆನೆದಾಳಿಗೆ ಸೂಕ್ತ ಪರಿಹಾರ ಹಾಗೂ ನಿಯಂತ್ರಣವನ್ನು ಸಂಬಂಧಿಸಿದ ಅಧಿಕಾರಿಗಳು ಕೈಗೊಳ್ಳಬೇಕೆಂದು ಸ್ಥಳೀಯರು ಹಾಗೂ ಆಗ್ರಹಿಸಿದ್ದಾರೆ.





0 Comments