ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನಲ್ಲಿರುವ ಜನತಾ ಪಾರ್ಟಿಯ ಜಿಲ್ಲಾ ಕಛೇರಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಟಿ.ಸಿ ರಾಜೇಂದ್ರ, ಜಿಲ್ಲಾಧ್ಯಕ್ಷರಾದ ರಜಿತ್ ಗೌಡ ಬೇಸೂರು ಸೇರಿದಂತೆ ಪಕ್ಷದ ಪ್ರಮುಖರು ಹಾಜರಿದ್ದರು.
ಜನತಾಪಾರ್ಟಿಯು ಭಾರತದ ಸಂವಿಧಾನಬದ್ದ ಜಾತ್ಯಾತೀತ ಮತ್ತು ಸಮಾನತೆಯ ಸಮಾಜವಾದಿ ತತ್ವಸಿದ್ದಾಂತಗಳ ಚಿಂತನೆ, ಭ್ರಷ್ಟಾಚಾರ - ಸರ್ವಾಧಿಕಾರ ಮುಕ್ತ ಮತ್ತು ನ್ಯಾಯ ಸಮ್ಮತವಾದ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಹೊಂದಿದೆ ಎಂದು ಒಪ್ಪಿ ಹರಿಶ್ಚಂದ್ರ ಆಚಾರ್ಯ, ಗೋಚವಳ್ಳಿ ಶ್ರೀ ಎಂ.ಎಸ್ ನಯನ್,ಚಿಂತನ್ ಮೇಲ್ಪಾಲ್ ಹಾಗೂ ಗಿಣಿಕಲ್ ಶ್ರೀ ಸಾಗರ್ ರವರು ಇಂದು ಪದಾಧಿಕಾರಿಗಳ ಸಮ್ಮುಖದಲ್ಲಿ ಜನತಾಪಾರ್ಟಿ ಸೇರ್ಪಡೆಗೊಂಡರು. ನೇಗಿಲು ಹೊತ್ತ ರೈತ ಚಿನ್ಹೆಯನ್ನು ಹೊಂದಿರುವ ರಾಷ್ಟ್ರೀಯ ಜನತಾಪಾರ್ಟಿಯ ಶೃಂಗೇರಿ ಕ್ಷೇತ್ರದ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಹ ಈ ಸಂದರ್ಭದಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ಜನತಾಪಾರ್ಟಿಯ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಟಿ.ಸಿ ರಾಜೇಂದ್ರ, ಜನತಾಪಾರ್ಟಿ ಚಿಕ್ಕಮಗಳೂರು ಜಿಲ್ಲಾಧ್ಯಕ್ಷರಾದ ರಜಿತ್ ಗೌಡ ಬೇಸೂರ್, ಶೃಂಗೇರಿ ವಿಧಾನಸಭಾ ಕ್ಷೇತ್ರಾಧ್ಯಕ್ಷರಾದ ಶ್ರೀ ಕೆ ಎಸ್ ವೆಂಕಪ್ಪ ಆಚಾರ್ಯರ ಉಪಸ್ಥಿತರಿದ್ದರು.
ಆನ್ ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಿ : https://forms.gle/APPtk8M3ZDk2oMka6
ಜಿಲ್ಲೆಯ ಈ ಶಾಲೆಗಳಿಗೆ ಜುಲೈ 09 ರ ವರೆಗೆ ರಜೆ ಘೋಷಣೆ ಮಾಡಿದ ಜಿಲ್ಲಾಡಳಿತ :
ಶೃಂಗೇರಿ, ಕಳಸ, ಮೂಡಿಗೆರೆ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು ಪ್ರವಾಹ ಪರಿಸ್ಥಿತಿ ಎದುರಾಗಿದೆ ಈ ನಿಟ್ಟಿನಲ್ಲಿ ಜಿಲ್ಲೆಯ ಹಲವು ಶಾಲೆಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ,ಕೊಪ್ಪ,ಮೂಡಿಗೆರೆ,ಕಳಸ, ಎನ್.ಆರ್.ಪುರ,ಭಾಗದಲ್ಲಿ ಮಳೆ ಹೆಚ್ಚಿರುವ ಕಾರಣ ಎರಡು ದಿನಗಳ ಕಾಲ (5.07.2022 ಹಾಗೂ 06.07.2022) ರಂದು ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದರು. ಮುಂದುವರೆದು ಮಳೆ ಹೆಚ್ಚಾಗುವ ಸಂಭವವಿರುವ ಕಾರಣ ಹಾಗೂ ಮಕ್ಕಳ ಸುರಕ್ಷತಾ ದೃಷ್ಟಿಯ ಸಲುವಾಗಿ ಜುಲೈ 06 ರಿಂದ 09 ರವರೆಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಲಕ್ಯಾ ಹಾಗೂ ಅಂಬಳೆ ಹೋಬಳಿ ಹೊರತು ಪಡಿಸಿ ಉಳಿದೆಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ. ಮಲೆನಾಡಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನೆಲೆ ನಾಲ್ಕು ದಿನಗಳ ಕಾಲ ಶಾಲಾ ಕಾಲೇಜುಗಳಿಗೆ ವಿಪತ್ತು ನಿರ್ವಹಣಾ ಕಾಯ್ದೆಯ ಕಲಂ 26, 30, 34 ರ ಅಡಿಯಲ್ಲಿ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.







0 Comments