ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ) ಶೃಂಗೇರಿ ತಾಲೂಕಿನಾದ್ಯಂತ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವ ಕಾರಣ ಇಂದು ಕೂಡ ಶಾಲೆಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಅತ್ಯಂತ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವ ಕಾರಣ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದಾಗಿ ಶೃಂಗೇರಿಯ ತಹಸೀಲ್ದಾರ್ ಹಾಗೂ ಜಿಲ್ಲಾ ಉಪನಿರ್ದೇಶಕರೊಂದಿಗೆ ಚರ್ಚಿಸಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಇಂದು 13.07.2021ರ ಬುಧವಾರ ಶೃಂಗೇರಿ ತಾಲೂಕಿನ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಭಾರಿ ಮಳೆ ಸುರಿಯುತ್ತಿರುವ ಕಾರಣ ಅಲ್ಲಲ್ಲಿ ಗುಡ್ಡ ಕುಸಿತ, ಮರಗಳು ರಸ್ತೆಗೆ ಉರುಳುವುದು ಸೇರಿದಂತೆ ಅನೇಕ ಸಮಸ್ಯೆಗಳು ಸಂಭವಿಸುತ್ತಿರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ಮಕ್ಕಳಿಗೆ ಒಂದು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ.






0 Comments