ಚಿಕ್ಕಮಗಳೂರು : ಚಲಿಸುತ್ತಿದ್ದ ಕಾರ್ ಒಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದಿರುವ ಘಟನೆ ಚಾರ್ಮಾಡಿ ಘಾಟ್ ನಲ್ಲಿ ಸಂಭವಿಸಿದೆ.

ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪರ್ಕಿಸುವ ಪ್ರಮುಖ ಮಾರ್ಗವಾದ ಚಾರ್ಮಾಡಿ ಘಾಟ್ ನ ಅಣ್ಣಪ್ಪ ದೇಗುಲದ ಸಮೀಪದಲ್ಲಿ, ಚಲಿಸುತ್ತಿದ್ದ ಕಾರಿನ ಡೀಸಲ್ ಟ್ಯಾಂಕ್ ಗೆ ಬೆಂಕಿ ತಗುಲಿ ಹೊತ್ತಿ ಉರಿದಿದೆ. 

ಇದನ್ನೂ ಓದಿ : ಪ್ರಧಾನಿ ಮೋದಿಯೊಂದಿಗೆ ಪೂಜೆಯಲ್ಲಿ ಭಾಗಿಯಾದ ಶೃಂಗೇರಿ ಅರ್ಚಕ ಋಷ್ಯಶೃಂಗ ಭಟ್


ಮಂಗಳೂರಿನ ಜೋಕಟ್ಟೆಯಿಂದ ಬೆಂಗಳೂರಿನ ಕಡೆಗೆ ಕಾರಿನಲ್ಲಿ ನಾಲ್ವರು ಪ್ರಯಾಣಿಕರು ಸಂಚಾರ ನಡೆಸುತ್ತಿದ್ದರು ಎನ್ನಲಾಗಿದ್ದು, ಈ ವೇಳೆ ಇದ್ದಕ್ಕಿದ್ದಂತೆ ಕಾರಿನ ಡೀಸೆಲ್ ಟ್ಯಾಂಕ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. 

ಬೆಂಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ಹೊತ್ತಿ ಉರಿದಿದ್ದು ಅದೃಷ್ಟವಶಾತ್ ಎನ್ನುವಂತೆ ಕಾರಿನಲ್ಲಿದ್ದ ನಾಲ್ವರು ಕೂಡ ಪ್ರಾಣಪಾಯಗಳಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಬಣಕಲ್ ಠಾಣೆಯ ಪೊಲೀಸರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. 

ತನು ಕೊಟ್ಟಿಗೆಹಾರ, ವರದಿಗಾರರು