ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ಶಿವಮೊಗ್ಗದಲ್ಲಿ ಬರ್ಬರವಾಗಿ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಸೀಗೆಹಟ್ಟಿ ಹರ್ಷನನ್ನು ಹತ್ಯೆ ಮಾಡಿರುವ ಆರೋಪಿಗಳು ಜೈಲಿನಲ್ಲಿ ರಾಜಾತಿಥ್ಯವನ್ನು ಪಡೆಯುತ್ತಿರುವುದು ಉನ್ನತ ಪೊಲೀಸ್ ಅಧಿಕಾರಿಗಳ ದಾಳಿ ವೇಳೆ ಬಯಲಾಗಿದೆ. ಆರೋಪಿಗಳ ಬಳಿಯಲ್ಲಿ ಮೊಬೈಲ್ ಹಾಗೂ ಇತರ ಉಪಕರಣಗಳು ಇರುವುದು ಪೊಲೀಸರ ದಾಳಿಯ ವೇಳೆ ಪತ್ತೆಯಾಗಿವೆ.
ಪರಪ್ಪನ ಅಗ್ರಹಾರ ಜೈಲ್ ನ ಆಯ್ದ ಸೆಲ್ಗಳ ಮೇಲೆ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಶಿವಮೊಗ್ಗದ ನಡು ರಸ್ತೆಯಲ್ಲಿ ಬರ್ಬರವಾಗಿ ಕೊಲೆಯಾದ ಹರ್ಷನ ಆರೋಪಿಗಳ ಸೆಲ್ ಮೇಲೂ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿಯ ವೇಳೆ ಆರೋಪಿಗಳಿಗೆ ವಿಶೇಷ ಆರೈಕೆ ನೀಡಿರುವ ವಿಚಾರ ಬೆಳಕಿಗೆ ಬಂದಿದೆ. ಆರೋಪಿಗಳಾದ ಖಾಸೀಫ್ ಮತ್ತು ಗ್ಯಾಂಗ್ ಪರಪ್ಪನ ಅಗ್ರಹಾರದ ಜೈಲಿನಲ್ಲಿದ್ದೇ ಹಲವರಿಗೆ ವಿಡಿಯೋ ಕಾಲ್ ಮಾಡಿದ್ದಾರೆ ಎನ್ನಲಾಗಿದೆ. ಅದಲ್ಲದೆ ವಿಡಿಯೋ ಕಾಲ್ ಮಾಡಿ ರೆಕಾರ್ಡ್ ಮಾಡಿರುವ ವಿಡಿಯೋಗಳು, ಬೇರೆಯದ್ದೆ ರೀತಿಯಲ್ಲಿ ಎಡಿಟ್ ಮಾಡಿ ಲಾಂಗು, ಮಚ್ಚಿನ ಹಾಡುಗಳೊಂದಿಗೆ ಸಾಮಾಜಿಕ ತಾಣಗಳಲ್ಲಿ ಹರಿಯ ಬಿಡಲಾಗಿದೆ ಎಂಬ ಆರೋಪಗಳೂ ಕೇಳಿ ಬಂದಿದೆ.
ಈ ಕೆಳಗಿನ ಲಿಂಕ್ ನ ಮೂಲಕ ಅಪ್ಲಿಕೇಶನ್ ಸಲ್ಲಿಸಿ : https://forms.gle/APPtk8M3ZDk2oMka6
ಗೃಹ ಸಚಿವರ ವಿರುದ್ಧ ವ್ಯಾಪಕ ಟೀಕೆ :
ಅಂತೆಯೆ ರಾಜ್ಯದ ಗೃಹ ಸಚಿವರ ವಿರುದ್ಧ ಹಾಗೂ ಮುಖ್ಯಮಂತ್ರಿಗಳ ವಿರುದ್ಧವಾಗಿ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರತರವಾದ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದು, ಈ ಘಟನೆಯಿಂದ ಆಕ್ರೋಶಭರಿತರಾಗಿರುವ ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಆರೋಪಿಗಳನ್ನು ಸರ್ಕಾರ ಇನ್ನೂ ರಕ್ಷಣೆ ಮಾಡುತ್ತಲೇ ಇದೆ ಕಠಿಣ ಕ್ರಮ ನಿರ್ದಾಕ್ಷಿಣ್ಯ ಕ್ರಮಗಳು ಸತ್ತುಹೋಗಿದೆ ಎಂದು ಸರ್ಕಾರದ ವಿರುದ್ಧ ವ್ಯಾಪಕ ವಿರೋಧ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಜನರ ಅತೀವ ಆತಂಕಕ್ಕೆ ಹಾಗೂ ಆಕ್ರೋಶಕ್ಕೆ ಕಾರಣವಾಗಿದ್ದ ಹರ್ಷನ ಹತ್ಯೆಯ ಆರೋಪಿಗಳನ್ನು ಜೈಲಿಗೆ ಹಾಕಿ ಈ ರೀತಿಯಾಗಿ ಸೌಲಭ್ಯಗಳನ್ನು ನೀಡಿ ರಾಜಾತಿಥ್ಯ ನೀಡುತ್ತಿರುವುದರ ವಿರುದ್ಧ ಹರ್ಷನ ಸಹೋದರಿ ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹವರನ್ನು ಇನ್ನೂ ಸಾಕುತ್ತಿರುವ ಹಾಗೂ ಅವರಿಗೆ ಸಹಕಾರ ನೀಡುತ್ತಿರುವ ಜೈಲಿನ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳ ಮೇಲೆ ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.
ಮೊಬೈಲ್ ಫೋನುಗಳನ್ನು ಸೆಲ್ಗೆ ತರಿಸಿಕೊಂಡ ಆರೋಪಿಗಳು ಮನೆಯವರಿಗೆ ವಿಡಿಯೋ ಕಾಲ್ ಮಾಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪರಪ್ಪನ ಅಗ್ರಹಾರದ ಸ್ಟೇಷನ್ನಲ್ಲಿ ಪ್ರಕರಣ ದಾಖಲಾಗಿದೆ. ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ತಪ್ಪು ಮಾಡಿದ ಜೈಲು ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಹಾಗೂ ವರ್ಗಾವಣೆ ನಡೆಸುವುದಾಗಿ ತಿಳಿಸಿದ್ದಾರೆ.








0 Comments