ಮೂಡಿಗೆರೆ : (ನ್ಯೂಸ್ ಮಲ್ನಾಡ್ ವರದಿ) ರಾಜಸ್ಥಾನದ ಉದಯಪುರದಲ್ಲಿ ಭೀಕರವಾಗಿ ಇಬ್ಬರು ಮುಸಲ್ಮಾನ ವ್ಯಕ್ತಿಗಳಿಂದ ಹತ್ಯೆಗೀಡಾದ ಹಿಂದೂ ಟೈಲರ್ ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ಹಾಗೂ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಇಂದು ಮೂಡಿಗೆರೆಯ ಬಣಕಲ್ ಹಾಗೂ ಕೊಟ್ಟಿಗೆಹಾರ ಬಂದ್ ನಡೆಯಿತು.
ಇದನ್ನೂ ಓದಿ : ಚಾಲಕನ ನಿಯಂತ್ರಣ ತಪ್ಪಿ ಉರುಳಿದ ಕಾರು ; ಸ್ಥಳದಲ್ಲೇ ಓರ್ವನ ದುರ್ಮರಣ
ಇಂದು ಬೆಳಗ್ಗಿನಿಂದ ಅಂಗಡಿ ಮುಂಗಟ್ಟುಗಳು ಸಂಪೂರ್ಣವಾಗಿ ಮುಚ್ಚಿದ್ದವು, ಈ ದುಷ್ಕೃತ್ಯವನ್ನು ಎಸಗಿ ವೀಡಿಯೋ ಮಾಡಿ ವಿಕೃತಿ ಮೆರೆದ ಆರೋಪಿಗಳ ವಿರುದ್ಧವಾಗಿ ಪ್ರತಿಭಟನಾಕಾರರು ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಕರೆ ನೀಡಿದ್ದ ಬಂದ್ ನ ಕುರಿತಾಗಿ ಬಣಕಲ್ ಸಮುದಾಯ ಭವನದಲ್ಲಿ ಸಭೆ ನಡೆಯಿತು. ಈ ಸಭೆಯನ್ನುದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಉಪ ಸಭಾಪತಿಗಳಾದ ಎಂ.ಕೆ ಪ್ರಾಣೇಶ್, ತನ್ನ ಟೈಲರಿಂಗ್ ವೃತ್ತಿಯಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಉದಯಪುರದ ದರ್ಜಿ ಕನ್ಹಯ್ಯ ಲಾಲ್ ನ ಕುತ್ತಿಗೆ ಸೀಳಿ ಹತ್ಯೆಗೈದಿರುವುದು ಖಂಡನಾರ್ಹ ಇದನ್ನು ಎಂದಿಗೂ ಸಹಿಸಲು ಸಾಧ್ಯವಿಲ್ಲ. ದೇಶಕ್ಕೆ ಮಾರಕವಾಗಿರುವ ಇಂತಹ ಕೆಟ್ಟ ಮನಸ್ಸನ್ನು ಹೊಂದಿರುವವರ ಮೇಲೆ ಗಲ್ಲುಶಿಕ್ಷೆ ವಿಧಿಸಬೇಕೆಂದು ಆಗ್ರಹಿಸುತ್ತಿದ್ದೇವೆ ಎಂದರು.
ಈ ಕುರಿತು ಮಾತನಾಡಿದ ಬಿಜೆಪಿ ತಾಲೂಕು ಅಧ್ಯಕ್ಷ ರಘು, ಹಿಂದೂಗಳ ಹತ್ಯೆಯಾದರೆ ಈ ಕುರಿತು ಕಾಂಗ್ರೆಸ್ ಯಾವುದೇ ಆಕ್ರೋಶಗಳನ್ನು ವ್ಯಕ್ತಪಡಿಸುವುದಿಲ್ಲ, ಕಾಂಗ್ರೆಸ್ ಬೆಂಬಲಿತ ಬುದ್ಧಿ ಜೀವಿಗಳು ಇಡೀ ದೇಶಕ್ಕೆ ಮಾರಕವಾಗಿದ್ದಾರೆ ಇಂತಹವರ ಮೇಲೆ ನಿಗಾ ವಹಿಸಬೇಕಿದೆ. ಯಾವುದೇ ಕಾರಣಕ್ಕೂ ಬಂಧಿತರನ್ನು ಬಿಡದೇ ನಿರ್ದಾಕ್ಷಿಣ್ಯವಾಗಿ ಗಲ್ಲು ಶಿಕ್ಷೆಯನ್ನು ವಿಧಿಸಬೇಕೆಂದು ಆಗ್ರಹಿಸಿದರು ಅಂತೆಯೇ ಮತಾಂಧತೆಯನ್ನು ಮಟ್ಟ ಹಾಕುವ ಸಲುವಾಗಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಕರೆ ನೀಡಿದ್ದ ಬಂದ್ ಗೆ ಹಿಂದೂ ಸಂಘಟನೆಗಳು, ಟೈಲರ್ ಸಂಘ, ವರ್ತಕರ ಸಂಘ, ಆಟೋ ಚಾಲಕರ ಸಂಘ, ಗ್ಯಾರೇಜ್ ಕಾರ್ಮಿಕರು ಸೇರಿದಂತೆ ಸಾರ್ವಜನಿಕರು ಬೆಂಬಲ ಸೂಚಿಸಿದ್ದರು. ಈ ಪ್ರತಿಭಟನೆಯಲ್ಲಿ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ, ಎಂಎಲ್ಸಿ ಎಂ.ಕೆ ಪ್ರಾಣೇಶ್, ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಅವಿನಾಶ್, ಟೈಲರ್ ಸಂಘದ ಅಧ್ಯಕ್ಷ ಪುಟ್ಟಸ್ವಾಮಿ, ಸೇರಿದಂತೆ ಹಿಂದೂ ಸಂಘಟನೆಗಳ ಪ್ರಮುಖರು, ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ತನು ಕೊಟ್ಟಿಗೆಹಾರ, ವರದಿಗಾರರು.
ಆನ್ ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಿ : : https://forms.gle/APPtk8M3ZDk2oMka6







0 Comments