ಕೊಪ್ಪ : (ನ್ಯೂಸ್ ಮಲ್ನಾಡ್ ವರದಿ) ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರು ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ ಹಾಗೂ ಕ್ಷೇತ್ರದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ಭಾರತೀಯ ಜನತಾ ಪಾರ್ಟಿ ಕೊಪ್ಪ ಮಂಡಲವು ನಾಳೆ ಪ್ರತಿಭಟನೆಗೆ ಕರೆ ನೀಡಿದೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ಡಿ ರಾಜೇಗೌಡ ಅವರ ವಿರುದ್ಧ ನಾಳೆ ಬಿಜೆಪಿಯು ಪ್ರತಿಭಟನೆಗೆ ಕರೆ ನೀಡಿದ್ದು ಶಾಸಕರು ರೈತ ವಿರೋಧಿ ನಿಲುವನ್ನು ತಳೆದಿದ್ದಾರೆ, ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರವು ಕ್ಷೇತ್ರದಲ್ಲಿ ನಡೆಯುತ್ತಿದೆ ಎಂಬ ಗಂಭೀರ ಆರೋಪವನ್ನು ಬಿಜೆಪಿ ಮಾಡಿದ್ದು ಅದರ ವಿರುದ್ಧವಾಗಿ ನಾಳೆ ಕೊಪ್ಪದ ತಾಲೂಕು ಕಚೇರಿ ಹತ್ತಿರ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ.
ಕ್ಷೇತ್ರದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಶಾಸಕರು ರೈತ ವಿರೋಧಿ ನಿಲುವನ್ನು ತಳೆದಿದ್ದಾರೆ, ಅವರು ಅಸಮರ್ಥ ಹಾಗೂ ಆಡಳಿತದಲ್ಲಿ ಬಿಗುವಿಲ್ಲದ ನಿರ್ವಹಣೆ ನಡೆಸುತ್ತಿದ್ದಾರೆ, ಭ್ರಷ್ಟರ ರಕ್ಷಣೆ ಮಾಡುತ್ತಿದ್ದಾರೆ, ಸ್ವಜನ ಪಕ್ಷಪಾತ ನಡೆಸುತ್ತಿದ್ದಾರೆ, ಜನ ವಿರೋಧಿ ನೀತಿಯನ್ನು ಅನುಸರಿಸುತ್ತಿದ್ದಾರೆ, ಸಾರ್ವಜನಿಕರಿಗೆ ಹಕ್ಕು ಪತ್ರಗಳನ್ನು ನೀಡದೆ ವಂಚಿಸುತ್ತಿದ್ದಾರೆ ಎಂಬೆಲ್ಲಾ ಆರೋಪಗಳನ್ನು ಬಿಜೆಪಿ ಮಾಡಿದ್ದು ಇದರ ವಿರುದ್ಧವಾಗಿ ನಾಳೆ ದಿನಾಂಕ 04.07.2022 ರ ಸೋಮವಾರ ಬೆಳಗ್ಗೆ 10.30 ಕ್ಕೆ ಕೊಪ್ಪದ ತಾಲೂಕು ಕಛೇರಿ ಸಮೀಪದಲ್ಲಿ ಪ್ರತಿಭಟನೆಗೆ ಬಿಜೆಪಿ ಕರೆ ನೀಡಿದೆ.







0 Comments