ಕೊಪ್ಪ : (ನ್ಯೂಸ್ ಮಲ್ನಾಡ್ ವರದಿ) ಶೃಂಗೇರಿ ಹಾಗೂ ಹೊರನಾಡನ್ನು ಸಂಪರ್ಕಿಸುವ ಕೊಗ್ರೆ ಸೇತುವೆಯು ಕುಸಿತಗೊಂಡಿದೆ. 

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಈ ಕೊಗ್ರೆ ಸೇತುವೆ ಕುಸಿತಗೊಂಡಿದ್ದು ವಾಹನ ಸವಾರರು ಹಾಗೂ ಸ್ಥಳೀಯರು ತೀವ್ರ ಸಂಕಷ್ಟ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿಂದೆ ಸೇತುವೆಯು ಕುಸಿದ ಪರಿಣಾಮ ಲಘು ವಾಹನಗಳ ಸಂಚಾರಕ್ಕಾಗಿ ತಾತ್ಕಾಲಿಕವಾಗಿ ಸೇತುವೆಯನ್ನು ನಿರ್ಮಾಣ ಮಾಡಲಾಗಿತ್ತು. ಈ ಬಾರಿ ಸುರಿದ ಮಹಾಮಳೆಯಿಂದಾಗಿ ಸೇತುವೆಯು ಪುನಃ ಕುಸಿತಗೊಂಡಿದ್ದು ಸ್ಥಳೀಯರು ಹಾಗೂ ವಾಹನ ಸವಾರರು ತೀವ್ರ ಸಂಕಷ್ಟವನ್ನು ಎದುರಿಸುವಂತಾಗಿದೆ. 


ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಾದ ಶೃಂಗೇರಿ ಹಾಗೂ ಹೊರನಾಡನ್ನು ಈ ಸೇತುವೆ ಸಂಪರ್ಕ ಕಲ್ಪಿಸುತ್ತಿತ್ತು, ಪ್ರಸ್ತುತ ಸೇತುವೆ ಬಿರುಕು ಬಿಟ್ಟು ಕುಸಿದಿರುವ ಪರಿಣಾಮ ಸ್ಥಳೀಯರಿಗೆ ಹಾಗೂ ಈ ಮಾರ್ಗದ ಮುಖಾಂತರ ಸಂಚರಿಸುವ ಪ್ರವಾಸಿಗರಿಗೆ ತೀವ್ರ ಅನಾನುಕೂಲ ಉಂಟಾಗಿದೆ. ಆದಷ್ಟು ಶೀಘ್ರವಾಗಿ ಸೇತುವೆಯನ್ನು ದುರಸ್ಥಿಗೊಳಿಸಿಕೊಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.