ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರು ಜಿಲ್ಲೆಯಿಂದ ದಕ್ಷಿಣ ಕನ್ನಡ ಸಂಪರ್ಕಿಸುವ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಟೊಮೊಟೊ ತುಂಬಿದ ಪಿಕಪ್ ವಾಹನವೊಂದು ಪಲ್ಟಿ ಆಗಿರುವ ಘಟನೆ ನಡೆದಿದೆ.

ಗ್ರೌಂಡ್ ರಿಪೋರ್ಟ್ ವೀಕ್ಷಿಸಿ : ಕೊಪ್ಪ : ಕುಸಿಯುವ ಭೀತಿಯಲ್ಲಿ 16 ಮನೆಗಳು, ಎಚ್ಚೆತ್ತುಕೊಳ್ಳಬೇಕಿದೆ ಅಧಿಕಾರಿಗಳು

ಚಿಕ್ಕಮಗಳೂರಿನಿಂದ ಮಂಗಳೂರಿಗೆ ಟೊಮೊಟೊ ತುಂಬಿಕೊಂಡು ಹೋಗುತ್ತಿದ್ದ ವೇಳೆ ಗೂಡ್ಸ್ ಪಿಕಪ್ ವಾಹನ ಪಲ್ಟಿ ಆಗಿದ್ದು, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಘಾಟ್ ನ ಎರಡನೇ ತಿರುವಿನಲ್ಲಿ ಈ ಅವಘಡ ಸಂಭವಿಸಿದೆ.


ಚಾಲಕನಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು ಚಿಕಿತ್ಸೆಗೆ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದ್ದು ಪಿಕಪ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿದ ವಾಹನ :

ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ನಿಯಂತ್ರಣ ತಪ್ಪಿದ ಪರಿಣಾಮ ಸರಕು ಸಾಗಣೆ ನಡೆಸುತ್ತಿದ್ದ ಲೇಲೆಂಡ್ ವಾಹನ ಉರುಳಿ ಜಖಂಗೊಂಡಿರುವ ಘಟನೆ ನಡೆದಿದೆ.

ಚಾರ್ಮಾಡಿ ಘಾಟ್ ನ ತಿರುವಿನಲ್ಲಿ ಈ ಘಟನೆ ನಡೆದಿದ್ದು, ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯಗಳು ಸಂಭವಿಸಿಲ್ಲ.


ಪಲ್ಟಿಯಾದ ತೀವ್ರತೆಗೆ ಲಾರಿ ಜಖಂಗೊಂಡಿದ್ದು ಚಾಲಕ ಸುರಕ್ಷಿತವಾಗಿದ್ದಾರೆ. ಮಲೆನಾಡು ಭಾಗದಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿದ್ದು ಈಗಾಗಲೇ ಅನೇಕ ಕಡೆಗಳ ರಸ್ತೆ ಕುಸಿದು ಭಾರೀ ಹಾನಿಯುಂಟಾಗಿದೆ. ಹೆಚ್ಚಿನ ತಿರುವು ಮುರುವುಗಳನ್ನು ಮಲೆನಾಡು ಭಾಗದ ರಸ್ತೆಗಳು ಹೊಂದಿರುವುದರಿಂದ ವಾಹನ ಸವಾರರು ರಸ್ತೆ ನಿಯಮಗಳನ್ನು ಪಾಲಿಸಿಕೊಂಡು ಸುರಕ್ಷಿತವಾಗಿ ಈ ಮಾರ್ಗದಲ್ಲಿ ಸಂಚಾರ ಮಾಡಬೇಕಿದೆ. 

ವರದಿ: ತನು ಕೊಟ್ಟಿಗೆಹಾರ