ಸಾಗರ : (ನ್ಯೂಸ್ ಮಲ್ನಾಡ್ ವರದಿ) ಬೈಕ್ ನ್ನು ಬಳಸಿಕೊಂಡು ಅಕ್ರಮವಾಗಿ ಗಾಂಜಾ ಸಾಗಾಟ ನಡೆಸುತ್ತಿದ್ದ ಆರೋಪಿಯನ್ನು ಪೊಲೀಸರು ಕಾರ್ಯಾಚರಣೆಯ ಮೂಲಕ ಬಂಧಿಸಿದ್ದಾರೆ. 

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೊಸನಗರ ರಸ್ತೆಯಲ್ಲಿ ಬೈಕ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದ ನಾಸಿರ್ ಎಂಬಾತನನ್ನು ಅಬಕಾರಿ ಇಲಾಖೆ ಸಿಬ್ಬಂದಿಗಳು ಸೆರೆಹಿಡಿದಿದ್ದಾರೆ. ಆರೋಪಿ ಬಳಿ ಇದ್ದ 60 ಗ್ರಾಂ ಒಣ ಗಾಂಜಾವನ್ನು ಬೈಕ್ ಸಮೇತ ವಶಪಡಿಸಿಕೊಂಡಿರುವ ಅಬಕಾರಿ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದು ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.


ಅಬಕಾರಿ ನಿರೀಕ್ಷಕ ಸಂದೀಪ್ ಎಲ್.ಸಿ., ಉಪ ನಿರೀಕ್ಷಕ ಸಂತೋಷ್, ವಿನ್ನಿ ಎಚ್.ಲೋಬೋ, ಸಿಬ್ಬಂದಿ ಗುರುಮೂರ್ತಿ, ಮುದಾಸಿರ್, ದೀಪಕ್ ಯು.ಪಿ., ಅರುಣ್ ಜಿ. ಮಡಿವಾಳ, ಕನ್ನಯ್ಯ, ಗಣಪತಿ ಗುಡ್ಡೇಮನೆ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಅಂತೆಯೇ ಸಾಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀಧರ ನಗರದ ಕಡೆ ಹೋಗುವ ಸೊರಬ ಮುಖ್ಯ ರಸ್ತೆಯ ಪಕ್ಕದ ಖಾಲಿ ಜಾಗದಲ್ಲಿ ಇಬ್ಬರು ವ್ಯಕ್ತಿಗಳು ಗಾಂಜಾವನ್ನು ಸಾರ್ವಜನಿಕರಿಗೆ ಅಕ್ರಮವಾಗಿ ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಸ್ಥಳಕ್ಕೆ ಹೋಗಿ ದಾಳಿ ನಡೆಸಿ, ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳಾದ ಜನ್ನತ್ ನಗರ ಕಿಶೋರ್ ಸಿಂಗ್ ಹಾಗೂ ನೆಹರು ನಗರದ ಸುನಿಲ್ (27) ಎಂಬ ಇಬ್ಬರನ್ನು ವಶಕ್ಕೆ ಪಡೆದಿರುವ ಪೊಲೀಸರು ಆರೋಪಿಗಳಿಂದ ಅಂದಾಜು ಮೌಲ್ಯ 30 ಸಾವಿರ ರೂ.ಗಳ ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ.