ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಕಳೆದ ಕೆಲ ದಿನಗಳ ಹಿಂದೆ ಸುರಿದ ಮಳೆಯು ಮಲೆನಾಡು ಭಾಗದ ಜನರ ಬದುಕನ್ನು ತೀವ್ರ ತರಹವಾಗಿ ದುಸ್ತರಗೊಳಿಸಿದೆ. ಮಳೆಯ ಆರ್ಭಟಕ್ಕೆ ತೋಟವೊಂದು ಜರಿದಿದೆ.

ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಹೋಬಳಿ ವ್ಯಾಪ್ತಿಯ ದಿಣ್ಣೇಕೆರೆ ಗ್ರಾಮದ ಕೆಳಗೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹರೀಶ್ ಡಿ.ಪಿ ಎಂಬ ಕೃಷಿಕನ ತೋಟ ಮಳೆಯಿಂದಾಗಿ ಜರಿದಿದೆ. 

ಆನ್ ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಿ : 

https://forms.gle/APPtk8M3ZDk2oMka6


ಚಿಕ್ಕಮಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಸುರಿದ ರಣಮಳೆಯು ಜನರ ಜೀವನವನ್ನೇ ದುಸ್ತರಗೊಳಿಸಿದ್ದು, ಹಾನಿಗೀಡಾದ ತೋಟದ ಮಾಲೀಕ ಅತೀವವಾದ ನೋವನ್ನು ವ್ಯಕ್ತಪಡಿಸಿದ್ದಾರೆ. ಕುಟುಂಬ ವರ್ಗದವರ ಜೀವನ ನಡೆಸಲು ಆಧಾರವಾಗಿದ್ದ ತೋಟ ಮಳೆಯಿಂದ ಹಾನಿಗೀಡಾಗಿದೆ. ಇಲಾಖೆಯ ಅಧಿಕಾರಿಗಳು ಈ ಕುರಿತು ಗಮನಹರಿಸಿ ಅತೀ ಶೀಘ್ರವಾಗಿ ಪರಿಹಾರವನ್ನು ಒದಗಿಸಬೇಕೆಂದು ಆಗ್ರಹಿಸಿದ್ದಾರೆ.

ಟ್ಯಾಂಕರ್ ಸಿಲುಕಿದ ಪರಿಣಾಮ ಚಾರ್ಮಾಡಿ ಘಾಟಿಯಲ್ಲಿ ಕೆಲ ಗಂಟೆಗಳ ಸಂಚಾರಕ್ಕೆ ತಡೆ : 

 ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್ ನ ತಿರುವಿನಲ್ಲಿ ಟ್ಯಾಂಕರ್ ಸಿಲುಕಿಕೊಂಡ ಪರಿಣಾಮ ಕೆಲ ಗಂಟೆಗಳ ಕಾಲ ರಸ್ತೆ ಸಂಚಾರಕ್ಕೆ ತಡೆಯುಂಟಾದ ಘಟನೆ ಸಂಭವಿಸಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿರುವ ಚಾರ್ಮಾಡಿ ಘಾಟಿಯಲ್ಲಿ ಭಾರಿ ಸಂಖ್ಯೆಯಲ್ಲಿ ವಾಹನಗಳು ಸಾಗಾಟ ನಡೆಸುತ್ತದೆ, ಈ ಮಧ್ಯೆ ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಟ್ಯಾಂಕರ್ ಒಂದು ಸಿಲುಕಿಕೊಂಡ ಪರಿಣಾಮ, ವಾಹನ ಸಂಚಾರಕ್ಕೆ ಕೆಲ ಗಂಟೆಗಳ ಕಾಲ ತಡೆ ಉಂಟಾಗಿತ್ತು. ಘಾಟ್ ನಲ್ಲಿ ವಾಹನ ಸಂಚಾರಕ್ಕೆ ತಡೆ ಉಂಟಾದ ಹಿನ್ನೆಲೆ ಕೊಟ್ಟಿಗೆಹಾರದಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. 


ರಾತ್ರಿ ಕೆಲ ಗಂಟೆಗಳ ಕಾಲ ಸಂಚಾರಕ್ಕೆ ಅಡೆತಡೆ ಉಂಟಾಗಿತ್ತು, ಬೆಳ್ತಂಗಡಿ ಪೊಲೀಸರು ವಾಹನವನ್ನು ಕ್ರೇನ್ ಮುಖಾಂತರ ಎತ್ತಿ ಇಂದು ಬೆಳಗ್ಗೆ 5.30 ರ ವೇಳೆಗೆ ಸುಗಮ ಸಂಚಾರಕ್ಕೆ ವ್ಯವಸ್ಥೆಯನ್ನು ಮಾಡಿ ಸಂಚಾರಕ್ಕೆ ಮುಕ್ತ ಅವಕಾಶ ಕಲ್ಪಿಸಿದರು. ಕೆಲವು ಗಂಟೆಗಳ ಕಾಲ ಪ್ರಯಾಣಿಕರು ಕೊಟ್ಟಿಗೆಹಾರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪರದಾಡಿದರು.