ಶಿವಮೊಗ್ಗ : (ನ್ಯೂಸ್ ಮಲ್ನಾಡ್ ವರದಿ) ಶಿವಮೊಗ್ಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿನಿ ಮೇಲೆ ಸಹಾಯಕ ಪ್ರಾಧ್ಯಾಪಕರೊಬ್ಬರಿಂದ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬುದಾಗಿ ಕೇಳಿ ಬಂದಿದ್ದು, ಪ್ರಕರಣವನ್ನು ಮುಚ್ಚಿ ಹಾಕಲಾಗಿದೆ ಈ ಕುರಿತಾಗಿ ಕೂಡಲೇ ತನಿಖೆ ನಡೆಸಬೇಕೆಂದು ಆಗ್ರಹಿಸಿ ನಗರದ ಪೀಪಲ್ಸ್ ಲಾಯರ್ಸ್ ಗಿಲ್ಡ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ ನಡೆಯಿತು. 

ಚಿಕ್ಕಮಗಳೂರು : ಮಳೆಯಿಂದ ಜರಿದ ತೋಟ ; ಸೂಕ್ತ ಪರಿಹಾರಕ್ಕಾಗಿ ರೈತನ ಆಗ್ರಹ

ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಹಾಗೂ ಇದನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ ಅತೀ ಶೀಘ್ರವಾಗಿ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಬೇಕಾದ ಸಲುವಾಗಿ ತನಿಖೆ ಆರಂಭವಾಗಬೇಕು ಎಂದು ಶಿವಮೊಗ್ಗ ನಗರದ ಪೀಪಲ್ಸ್ ಲಾಯರ್ಸ್ ಗಿಲ್ಡ್ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ ನಡೆಯಿತು.  ತನ್ನ ಮೇಲೆ ಸಹಾಯಕ ಪ್ರಾಧ್ಯಾಪಕರೊಬ್ಬರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಜುಲೈ 15ರಂದು ಉತ್ತರ ಭಾರತದ ವೈದ್ಯಕೀಯ ವಿದ್ಯಾರ್ಥಿನಿ ಸಿಮ್ಸ್ ನಿರ್ದೇಶಕರಿಗೆ ಲಿಖಿತ ದೂರು ನೀಡಿದ್ದಾರೆ. ಅದನ್ನು ಕಾಲೇಜಿನ ಆಡಳಿತ ಮಂಡಳಿ ಗಂಭೀರವಾಗಿ ಪರಿಗಣಿಸಿಲ್ಲ ಎಂದು ದೂರಿದರು.


ದೌರ್ಜನ್ಯಕ್ಕೊಳಗಾದ ವಿದ್ಯಾರ್ಥಿನಿ ಮೇಲೆ ಒತ್ತಡ ಹೇರಿ ನೀಡಿರುವ ದೂರು ಹಿಂಪಡೆಯುವಂತೆ ಮಾಡಲಾಗಿದೆ. ಅದು ಖಂಡನೀಯ. ನೊಂದ ವಿದ್ಯಾರ್ಥಿನಿ ಇಲ್ಲಿ ಯಾವುದೇ ಬೆಂಬಲವಿಲ್ಲದೇ ಅಸಹಾಯಕರಾಗಿದ್ದು, ಇದನ್ನೇ ದುರುಪಯೋಗಪಡಿಸಿಕೊಂಡು ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ಜಿಲ್ಲಾಡಳಿತದಿಂದ ಈ ಕುರಿತಾಗಿ  ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಬೇಕೆಂದು ಈ ಸಂದರ್ಭದಲ್ಲಿ ಮನವಿ ಸಲ್ಲಿಸಲಾಗಿದೆ. ಗಿಲ್ಡ್‌ನ  ಕೆ.ಪಿ.ಶ್ರೀಪಾಲ್, ವಿಜಯಕುಮಾರ್, ಶೀರಾಜ್, ಸ್ವರೂಪ್, ಚಿರಂತ್ ಬಿ.ಎ, ವಿಕಾಸ್, ರಘುರಾಮನ್, ಚರಣ್ ಸೇರಿದಂತೆ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.