ಶೃಂಗೇರಿ : (ನ್ಯೂಸ್ ಮಲ್ನಾಡ್ ವರದಿ) ಮಲೆನಾಡು ಭಾಗದಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಶೃಂಗೇರಿ, ಬಾಳೂರು, ಕಳಸ ತಾಲೂಕಿನ ಶಾಲೆಗಳಿಗೆ ಎರಡು ದಿನಗಳ ಕಾಲ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಕಳಸ ಹಾಗೂ ಮೂಡಿಗೆರೆ ತಾಲೂಕಿನ ಬಾಳೂರು ವ್ಯಾಪ್ತಿಯ ಶಾಲೆಗಳಿಗೆ 5.07.2022 ಹಾಗೂ 06.07.2022 ಎರಡು ದಿನಗಳ ಕಾಲ ಕೇವಲ ಶಾಲೆಗಳಿಗೆ ರಜೆ ಘೋಷಣೆ ಮಾಡಿರುವುದಾಗಿ ಜಿಲ್ಲಾಧಿಕಾರಿಗಳು ನ್ಯೂಸ್ ಮಲ್ನಾಡ್ ಗೆ ಸ್ಪಷ್ಟಪಡಿಸಿದ್ದಾರೆ.
ಇಂದು ಕೆರೆಕಟ್ಟೆ, ಎಸ್.ಕೆ.ಬಾರ್ಡರ್ , ಕಳಸ, ವ್ಯಾಪ್ತಿಯಲ್ಲಿ ಭಾರೀ ಮಳೆಯಾಗಿದ್ದು ಮಳೆಯ ರಭಸಕ್ಕೆ ನದಿ, ಹಳ್ಳ ಕೊಳ್ಳಗಳು ಮೈತುಂಬಿ ಹರಿಯುತ್ತಿದ್ದು ಈ ಹಿನ್ನೆಲೆ ನಾಳೆಯೂ ಮಳೆಯಾಗುವ ಮುನ್ಸೂಚನೆ ಇರುವ ಕಾರಣ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ತುಂಗಾ ಹಾಗೂ ಭದ್ರಾ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿರುವ ಕಾರಣ ಹಾಗೂ ಮಕ್ಕಳ ಸುರಕ್ಷತೆಯ ಸಲುವಾಗಿ ಮುಂಜಾಗ್ರತಾ ದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಆನ್ ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಿ : https://forms.gle/APPtk8M3ZDk2oMka6
ಕಳೆದ ಮೂರು ದಿನಗಳಿಂದ ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು ನದಿ ಪಾತ್ರದ ಜನರಿಗೆ ಪ್ರವಾಹ ಭೀತಿ ಎದುರಾಗಿದೆ. ಶೃಂಗೇರಿಯ ಬೈಪಾಸ್ ರಸ್ತೆಯ ಮೇಲೆ ನೀರು ನಿಂತಿದ್ದು, ಶೃಂಗೇರಿ ಮಠದ ಕಪ್ಪೆ ಶಂಕರ ದೇವಾಲಯವು ಮುಳುಗಡೆಯಾಗಿದೆ. ಮುಂದಿನ ಎರಡು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯಿರುವ ಕಾರಣ ಹಾಗೂ ತಗ್ಗು ಪ್ರದೇಶಗಳಲ್ಲಿ, ಹಳ್ಳ ಕೊಳ್ಳಗಳಲ್ಲಿ ನೀರು ತುಂಬಿರುವ ಕಾರಣ ಮಕ್ಕಳ ಹಿತ ದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ.







0 Comments