ಕೊಪ್ಪ : (ನ್ಯೂಸ್ ಮಲ್ನಾಡ್ ವರದಿ) ಅಕ್ರಮವಾಗಿ ಗೋವುಗಳ ಮಾರಾಟ ಹಾಗೂ ಸಾಗಾಟದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪೊಲೀಸರು ರೋಚಕ ಕಾರ್ಯಾಚರಣೆಯ ಮೂಲಕ ಸೆರೆಹಿಡಿದಿದ್ದಾರೆ.
ಇದನ್ನೂ ಓದಿ : ಧಾರ್ಮಿಕ ಕ್ಷೇತ್ರಗಳಾದ ಶೃಂಗೇರಿ - ಹೊರನಾಡು ಕಲ್ಪಿಸುವ ಮಾರ್ಗ ಮಧ್ಯೆ ಭೂಕುಸಿತ
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹುಲ್ಮಕ್ಕಿ ಬಳಿಯಲ್ಲಿ ಓರ್ವ ಗೋಕಳ್ಳ ಅಕ್ರಮವಾಗಿ ಹಸುಗಳನ್ನು ಕಾರಿಗೆ ತುಂಬಿಕೊಂಡು ಹೋಗುತ್ತಿರುವ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ದೃಶ್ಯಾವಳಿಗಳನ್ನಾಧರಿಸಿ ಕಾರ್ಯಾಚರಣೆಗಿಳಿದ ಕೊಪ್ಪ ಪೊಲೀಸರ ತಂಡ ಚಿಕ್ಕಮಗಳೂರು, ಉಡುಪಿ ಜಿಲ್ಲೆಯಲ್ಲಿ ಜಾಲಾಡಿ ಆರೋಪಿಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯನ್ನು ಅತೀ ಶೀಘ್ರವಾಗಿ ಬಂಧಿಸಬೇಕೆಂದು ಬಜರಂಗದಳದ ಕಾರ್ಯಕರ್ತರು ಒತ್ತಾಯಿಸಿದ್ದರು. ಕಾರ್ಯಾಚರಣೆಗಿಳಿದಿದ್ದ ಕೊಪ್ಪ ಪೊಲೀಸರ ತಂಡ ಆರೋಪಿಯಾದ ಶರೀಫ್ ಬಿನ್ ಮೊಹಮ್ಮದ್ ಹಮೀದ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಖತರ್ನಾಕ್ ಕಳ್ಳರು ಗೋ ಕಳ್ಳತನಕ್ಕಾಗಿಯೇ ಅಂತರ್ ಜಿಲ್ಲಾ ನೆಟ್ವರ್ಕ್ ಇರುವ ಗ್ಯಾಂಗ್ ಒಂದನ್ನು ತಯಾರಿಸಿಕೊಂಡಿದ್ದರು, ಈತ ಸಹ ಅನೇಕ ಪ್ರಕರಣಗಳಲ್ಲಿ ಭಾಗಿಯಾಗಿದ್ದು ಪೊಲೀಸರ ಸಂಪೂರ್ಣ ತನಿಖೆಯ ಬಳಿಕ ಹೆಚ್ಚಿನ ಮಾಹಿತಿಗಳು ಹೊರಬೀಳಬೇಕಿದೆ.
ಮಲೆನಾಡಿನ ವಿವಿಧ ಭಾಗಗಳಲ್ಲಿ ನಿರಂತರವಾಗಿ ಗೋಕಳ್ಳತನದ ಪ್ರಕರಣಗಳು ನಡೆಯುತ್ತಿದ್ದು, ಈ ಕುರಿತಂತೆ ಸಂಬಂಧಪಟ್ಟವರು ಸೂಕ್ತ ಕ್ರಮವಹಿಸಿ ಈ ರೀತಿಯ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

.jpeg)




0 Comments