ಚಿಕ್ಕಮಗಳೂರು : (ನ್ಯೂಸ್ ಮಲ್ನಾಡ್ ವರದಿ) ಚಿಕ್ಕಮಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆಯು ಮುಂದುವರಿದಿದ್ದು ನದಿಗಳು, ಹಳ್ಳ ಕೊಳ್ಳಗಳು ಅಪಾಯದ ಮಟ್ಟ ತಲುಪುತ್ತಿದೆ.
ಮುಜಾಗ್ರಾತಾ ಕ್ರಮವಾಗಿ ಶೃಂಗೇರಿ ಹಾಗೂ ಕಳಸ ತಾಲೂಕಿನ ಎಲ್ಲಾ ಶಾಲೆಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ.
ಮಳೆಯ ಆರ್ಭಟಕ್ಕೆ ಶಾಲಾ ವಿದ್ಯಾರ್ಥಿನಿಯೊಬ್ಬಳು ಕಿರು ಸೇತುವೆ ದಾಟುವ ವೇಳೆ ಕಾಲುಜಾರಿ ಹಳ್ಳಕ್ಕೆ ಬಿದ್ದು ನೀರಿನಲ್ಲಿ ಕೊಚ್ಚಿಹೋಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಹೊಸಪೇಟೆ ಗ್ರಾಮದ ಕಾಫಿ ಎಸ್ಟೇಟ್ ಒಂದರಲ್ಲಿ ನಡೆದಿದ್ದು, ಸುಪ್ರೀತ ಎಂಬಾಕೆ ನೀರಿನಲ್ಲಿ ಕೊಚ್ಚಿಹೋಗಿರುವ ಬಾಲಕಿ.
ಹೊಸಪೇಟೆ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯಾದ ಸುಪ್ರೀತ ಸಂಜೆ ಶಾಲೆ ಬಿಟ್ಟು ಮನೆಗೆ ತೆರಳುವ ಸಂಧರ್ಭದಲ್ಲಿ ಹೊಸಪೇಟೆ ಗ್ರಾಮದ ಕಾಫಿ ಎಸ್ಟೇಟ್ ಒಂದರ ಸಣ್ಣ ಹಳ್ಳವೊಂದನ್ನು ದಾಟುವ ವೇಳೆ ಕಾಲು ಜಾರಿ ನೀರಿಗೆ ಬಿದ್ದಿದ್ದಾಳೆ ಎಂಬ ಮಾಹಿತಿ ದೊರಕಿದ್ದು
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ದೌಡಾಯಿಸಿದ್ದು ಮಗುವಿಗಾಗಿ ಶೋಧ ಕಾರ್ಯ ತೀವ್ರಗತಿಯಲ್ಲಿ ಸಾಗುತ್ತಿದೆ.







0 Comments