ಮೂಡಿಗೆರೆ : (ನ್ಯೂಸ್ ಮಲ್ನಾಡ್ ವರದಿ) ಬಣಕಲ್ ಹೋಬಳಿಯ ಬಿ. ಹೊಸಳ್ಳಿ ವ್ಯಾಪ್ತಿಯಲ್ಲಿ ಹುಲಿ ದಾಳಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಬಿ. ಹೊಸಳ್ಳಿಯ ಕನ್ ಗೆರೆ ಬಳಿಯಲ್ಲಿ ಹಸುವಿನ ಮೇಲೆ ಹುಲಿಯು ದಾಳಿ ನಡೆಸಿದ್ದು ಹಸುವನ್ನು ಕೊಂದು ಹಾಕಿದೆ. ಈ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರು ಆತಂಕಗೊಂಡಿದ್ದು ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಇಲಾಖೆಯನ್ನು ಕೋರಿದ್ದಾರೆ. 

ಇದನ್ನೂ ಓದಿ : ಮಳೆಯಿಂದಾಗಿ ಧರೆ ಕುಸಿದು ಮನೆ ಹಾನಿಯಾಗುವ ಭೀತಿಯಲ್ಲಿ ಕುಟುಂಬ

ಚಿದಾನಂದ ಎಂಬುವವರಿಗೆ ಸೇರಿದ ಹಸು ಹುಲಿ ದಾಳಿಯಿಂದ ಮೃತ ಪಟ್ಟಿದ್ದು ಘಟನಾ ಸ್ಥಳಕ್ಕೆ ಅರಣ್ಯ ರಕ್ಷಕ ಮೋಹಸೀನ್ ಹಾಗೂ ಜಾನುವಾರು ಅಧಿಕಾರಿ ಬಸವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 


ಈ ಕುರಿತು ತೀವ್ರ ಬೇಸರ ವ್ಯಕ್ತಪಡಿಸಿರುವ ಹಸುವಿನ ಮಾಲೀಕರು ಈ ಭಾಗದಲ್ಲಿ ನಿರಂತರವಾಗಿ ಹುಲಿ ದಾಳಿಯು ನಡೆಯುತ್ತಿದ್ದು ಅನೇಕ ಜಾನುವಾರುಗಳನ್ನು ಹುಲಿ ದಾಳಿ ಮಾಡಿ ಕೊಂದು ಹಾಕಿದೆ, ಇಲಾಖೆಯ ಅಧಿಕಾರಿಗಳು ಈ ಕುರಿತಾಗಿ ಕಾರ್ಯಾಚರಣೆ ನಡೆಸಿ ಹುಲಿ ದಾಳಿಗೆ ಶಾಶ್ವತ ಪರಿಹಾರ ಕಂಡು ಹಿಡಿಯಬೇಕು, ಹಾಗೂ ಸೂಕ್ತ ಪರಿಹಾರ ಒದಗಿಸಬೇಕೆಂದು ಕೋರಿದ್ದಾರೆ. 

ತನು ಕೊಟ್ಟಿಗೆಹಾರ, ವರದಿಗಾರರು

ಜಿಲ್ಲೆಯ ಈ ಶಾಲೆಗಳಿಗೆ ಜುಲೈ 09 ರ ವರೆಗೆ ರಜೆ ಘೋಷಣೆ ಮಾಡಿದ ಜಿಲ್ಲಾಡಳಿತ : 

ಚಿಕ್ಕಮಗಳೂರು : ಶೃಂಗೇರಿ, ಕಳಸ, ಮೂಡಿಗೆರೆ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು ಪ್ರವಾಹ ಪರಿಸ್ಥಿತಿ ಎದುರಾಗಿದೆ ಈ ನಿಟ್ಟಿನಲ್ಲಿ ಜಿಲ್ಲೆಯ ಹಲವು ಶಾಲೆಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ. 


ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ,ಕೊಪ್ಪ,ಮೂಡಿಗೆರೆ,ಕಳಸ, ಎನ್.ಆರ್.ಪುರ,ಭಾಗದಲ್ಲಿ ಮಳೆ ಹೆಚ್ಚಿರುವ ಕಾರಣ ಎರಡು ದಿನಗಳ ಕಾಲ (5.07.2022 ಹಾಗೂ 06.07.2022) ರಂದು ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದರು. ಮುಂದುವರೆದು ಮಳೆ ಹೆಚ್ಚಾಗುವ ಸಂಭವವಿರುವ ಕಾರಣ ಹಾಗೂ ಮಕ್ಕಳ ಸುರಕ್ಷತಾ ದೃಷ್ಟಿಯ ಸಲುವಾಗಿ ಜುಲೈ 06 ರಿಂದ 09 ರವರೆಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.

ಚಿಕ್ಕಮಗಳೂರು ತಾಲೂಕಿನ ಲಕ್ಯಾ ಹಾಗೂ ಅಂಬಳೆ ಹೋಬಳಿ ಹೊರತು ಪಡಿಸಿ ಉಳಿದೆಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ. ಮಲೆನಾಡಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನೆಲೆ ನಾಲ್ಕು ದಿನಗಳ ಕಾಲ ಶಾಲಾ ಕಾಲೇಜುಗಳಿಗೆ ವಿಪತ್ತು ನಿರ್ವಹಣಾ ಕಾಯ್ದೆಯ ಕಲಂ 26, 30, 34 ರ ಅಡಿಯಲ್ಲಿ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.