ಕೊಡಗು : (ನ್ಯೂಸ್ ಮಲ್ನಾಡ್ ವರದಿ) ಕೊಡಗು ಹಾಗೂ ಮಲೆನಾಡು ಭಾಗದಲ್ಲಿ ಭಾರೀ ಪ್ರಮಾಣದ ಮಳೆಯಾಗುತ್ತಿದ್ದು ದೊಡ್ಡ ದೊಡ್ಡ ಅನಾಹುತಗಳು ಜಿಲ್ಲೆಯಲ್ಲಿ ಸಂಭವಿಸಿದೆ. ಹಲವು ಗ್ರಾಮಗಳ ಜನತೆಗೆ ಇಂದು ಮತ್ತೆ ಭೂಮಿ ಕಂಪಿಸಿದ ಅನುಭವವುಂಟಾಗಿದೆ ಎಂದು ಜನರು ತಮಗಾದ ಅನುಭವವನ್ನು ವ್ಯಕ್ತಪಡಿಸಿದ್ದಾರೆ.
Ground Report: ಮಳೆಗೆ ಸಂಪೂರ್ಣ ಮಾಯವಾದ ಶೃಂಗೇರಿ-ಆಗುಂಬೆ ರಸ್ತೆ; ಕುಸಿಯುವ ಭೀತಿಯಲ್ಲಿ ಮನೆಗಳು
ಇಂದು ಬೆಳಗ್ಗೆ 10.10ರ ಸುಮಾರಿಗೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಗ್ರಾಮಗಳಾದ ಚೆಂಬು, ಪೆರಾಜೆ, ಗೂನಡ್ಕ ವ್ಯಾಪ್ತಿಯ ಜನರಿಗೆ ಭೂಕಂಪನದ ಅನುಭವವಾಗಿದೆ. ಭಯ ಹಾಗೂ ಆತಂಕದಿಂದ ಜನರು ಮನೆಗಳಿಂದ ಹೊರಭಾಗಕ್ಕೆ ಓಡಿಬಂದಿದ್ದಾರೆ ಎನ್ನಲಾಗಿದೆ.
ಆನ್ ಲೈನ್ ಮೂಲಕ ಅಪ್ಲಿಕೇಶನ್ ಸಲ್ಲಿಸಿ : https://forms.gle/APPtk8M3ZDk2oMka6
ಕೊಡಗು ಜಿಲ್ಲೆಯ ಗಡಿಭಾಗವಾದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕು ಹಾಗೂ ಕೊಡಗು ಜಿಲ್ಲೆ ಮಡಿಕೇರಿ ಪ್ರದೇಶದ ಹಲವೆಡೆ ಕಳೆದ ಭಾನುವಾರವಷ್ಟೇ ಭೂಮಿ ಕಂಪಿಸಿತ್ತು. ಬೆಳಗ್ಗೆ 6.22ಕ್ಕೆ ಸಂಭವಿಸಿದ ಲಘು ಭೂಕಂಪದ ಕೇಂದ್ರ ಸುಳ್ಯ ತಾಲೂಕಿನ ಅರಂತೋಡು ಆಗಿತ್ತು. ಆ ಬಳಿಕವೂ ಕೂಡ ಧಾರಾಕಾರವಾಗಿ ಎಡಬಿಡದೆ ಮಳೆ ಸುರಿಯುತ್ತಿರುವ ಕಾರಣ ಕೆಲವೆಡೆಗಳಲ್ಲಿ ವಿದ್ಯುತ್ ಸಂಪರ್ಕ ಹಾಗೂ ರಸ್ತೆ ಸಂಪರ್ಕ ಸಂಪೂರ್ಣವಾಗಿ ಬಂದ್ ಆಗಿದೆ.
ಕಲ್ಲುಗುಂಡಿ ಮಠದಮೂಲೆ ಸಮೀಪ ತಾಜುದ್ದೀನ್ ಟರ್ಲಿ ಅವರ ಮನೆಯ ಹಿಂಬದಿ ಭೂಕಂಪನದ ಸಮಯದಲ್ಲಿ ಭೂಮಿ ಬಿರುಕು ಬಿಟ್ಟಿದ್ದು ಬರೆ ಕುಸಿದಿದೆ. ಮನೆಯ ಮೇಲೆ ಬರೆ ಕುಸಿದು ಬೀಳುವ ಆತಂಕದಲ್ಲಿದೆ. ಕೊಡಗಿನ ಗಡಿ ಗ್ರಾಮ ಚೆಂಬುವಿನ ಸುತ್ತಮುತ್ತ ಪ್ರದೇಶಗಳಲ್ಲಿ ಭೂಮಿ ಕಂಪಿಸಿರುವ ಅನುಭವ ಉಂಟಾಗಿದೆ. ಶನಿವಾರ ರಾತ್ರಿ ಭೂಮಿಯಿಂದ ಜೋರು ಶಬ್ದ ಕೇಳಿ ಬಂದಿತ್ತೆಂದು ಗ್ರಾಮಸ್ಥರು ಮಾಹಿತಿ ನೀಡಿದ್ದು, ಕಳೆದ ಭಾನುವಾರ ಬೆಳಗ್ಗೆ ಮತ್ತೆ ಜೋರಾದ ಶಬ್ದದೊಂದಿಗೆ ಭೂಕಂಪ ಸಂಭವಿಸಿತ್ತು. ಗೂನಡ್ಕ, ಕೊಯಿನಾಡಿನಲ್ಲೂ ಭೂಕಂಪದ ಅನುಭವವಾಗಿತ್ತು. ಕೊಡಗು ಜಿಲ್ಲೆ ಪ್ರವಾಸ ಮಾಡಿ ಪರಿಹಾರದ ಕುರಿತಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಭಾರಿ ಮಳೆಯಿಂದ ಭೂಕುಸಿತ ಮತ್ತು ಭೂಕಂಪನ ಸಂಭವಿಸಿರುವ ಕೊಡಗು ಜಿಲ್ಲೆಯಲ್ಲಿ 4 ಸಂಸ್ಥೆಗಳಿಂದ ಅಧ್ಯಯನ ನಡೆಸಲಾಗುವುದು ಎಂದು ಹೇಳಿದ್ದರು.
ಈ ಬಾರಿ ಮಳೆಯು ಭೀಕರವಾದ ಅವಾಂತರಗಳನ್ನು ಸೃಷ್ಟಿಸುತ್ತಿದ್ದು ಮಳೆಯ ತೀವ್ರತೆಗೆ ಭಾರೀ ಪ್ರಮಾಣದ ನಷ್ಟ ಕೊಡಗಿಗೆ ಸಂಭವಿಸಿದೆ. ಪರಿಹಾರ ಹಾಗೂ ರಕ್ಷಣಾ ಕಾರ್ಯದಲ್ಲಿ ಅಧಿಕಾರಿಗಳು ಹಾಗೂ ವಿಪತ್ತು ನಿರ್ವಹಣಾ ತಂಡಗಳ ಸದಸ್ಯರು ತೊಡಗಿದ್ದಾರೆ.


.jpeg)



0 Comments